ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

"ಬ್ರಾಹ್ಮಣರಿಂದ ಅರ್ಚಕ ವೃತ್ತಿಯನ್ನು ಕಿತ್ತುಕೊಳ್ಳುವ ಪ್ರಯತ್ನ''

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಮಾರ್ಚ್ 1: "ಬ್ರಾಹ್ಮಣರಿಂದ ಅರ್ಚಕ ವೃತ್ತಿಯನ್ನು ಕಿತ್ತು ಕೊಳ್ಳುವ ಪ್ರಯತ್ನ ನಡೆಯುತ್ತಿದೆ. ರೈಲ್ವೇ ನಿಲ್ದಾಣಗಳಲ್ಲಿ ಪ್ರಯಾಣಿಕರ ಭಾರದ ಬ್ಯಾಗ್ ಹೊರುವ ಹಮಾಲಿಗಳಿಗೆ ತಮ್ಮ ಜೀವನ ತಾವು ನಡೆಸಲು ಅವಕಾಶ ಕೊಡುತ್ತಿರುವ ಕಾನೂನು, ಬ್ರಾಹ್ಮಣರಿಗೆ ಅರ್ಚಕರ ವೃತ್ತಿಯಲ್ಲಿ ಮುಂದುವರಿಯಲು ಅವಕಾಶ ಕೊಡದಿರುವುದು ಬೇಸರದ ಸಂಗತಿ" ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.

ಮೈಸೂರು ನಗರದ ಖಾಸಗಿ ಸಭಾಂಗಣದಲ್ಲಿ ಜಿಲ್ಲಾ ಮತ್ತು ನಗರ ಬ್ರಾಹ್ಮಣ ಸಂಘ ವತಿಯಿಂದ ಭಾನುವಾರ ಆಯೋಜಿಸಲಾಗಿದ್ದ ವಿಪ್ರ ಸಮ್ಮಿಲನವನ್ನು ಉದ್ಘಾಟಿಸಿ ಮಾತನಾಡಿದ ಅವರು, "ಅರ್ಚಕ ವೃತ್ತಿಯನ್ನು ಬ್ರಾಹ್ಮಣರಿಂದ ಕಿತ್ತುಕೊಳ್ಳುವ ಸರ್ಕಾರದ ಪ್ರಯತ್ನಕ್ಕೆ ಏನು ಹೇಳಲಿ ಎಂದು ತೋಚುತ್ತಿಲ್ಲ. ಈ ಸಮಸ್ಯೆಗಳು ಪರಿಹಾರವಾಗಲು ಸಮುದಾಯ ಸಂಘಟನೆಯಾಗುವುದೇ ಪರಿಹಾರ" ಎಂದು ಅಭಿಪ್ರಾಯಪಟ್ಟರು.

ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ ಮುಕ್ತಾಯ: ಒಟ್ಟು ಸಂಗ್ರಹವಾಗಿದ್ದು ಎಷ್ಟು?ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ ಮುಕ್ತಾಯ: ಒಟ್ಟು ಸಂಗ್ರಹವಾಗಿದ್ದು ಎಷ್ಟು?

ರಾಮನ ಹೆಸರಿನಲ್ಲಿ ನಮ್ಮ ಸಂಸ್ಕೃತಿ ಪುನರುತ್ಥಾನವಾಗಬೇಕು. ರಾಮ ಮಂದಿರ ನಿರ್ಮಾಣಕ್ಕೆ 1500 ಕೋಟಿ ರೂ. ಹಣ ಬೇಕು ಎಂದು ಅಂದಾಜಿಸಲಾಗಿತ್ತು. ಆದರೆ ಈಗ 2,100 ಕೋಟಿ ರೂ. ಸಂಗ್ರಹವಾಗಿದೆ. ಮಂದಿರ ನಿರ್ಮಾಣ ಮಾಡುವುದು ದೊಡ್ಡ ವಿಷಯವೇನಲ್ಲ.

Mysuru: Attempts To Snatch Priestly Profession From Brahmins: Pejawar Seer

ಆದರೆ ಇಷ್ಟು ಆಸ್ಥೆಯಿಂದ ನಿರ್ಮಿಸಿದ ಮಂದಿರವನ್ನು ಎಷ್ಟು ದಿವಸ ಉಳಿಸಿಕೊಳ್ಳುತ್ತೇವೆ ಎಂಬುದು ಮುಖ್ಯ. 'ನೀವು ಕಟ್ಟಿದ ಮಂದಿರ ಅದೆಷ್ಟು ಕಾಲ ನಿಮ್ಮ ಕೈಲಿ ಉಳಿಯುತ್ತದೆ? ಅದು ಮತ್ತೆ ನಮ್ಮ ಕೈಗೆ ಬಂದೇ ಬರುತ್ತದೆ' ಎಂಬ ಮಾತುಗಳು ಈಗಾಗಲೇ ಕೇಳಿ ಬರುತ್ತಿವೆ. ಇದನ್ನು ಸುಳ್ಳು ಮಾಡಬೇಕು ಎಂದು ಪೇಜಾವರ ಶ್ರೀಗಳು ಹೇಳಿದರು.

English summary
It is tedious not to allow Brahmins to continue in the profession of priests, The Sri Vishwa Prasanna Teertha Swamiji of the Pejawara Math, expressed sadness.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X