• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಆ.19ರಂದು ನಡೆಯಬೇಕಿದ್ದ ಕೆಎಸ್ ಒಯು ಪರೀಕ್ಷೆ ರದ್ದು

|

ಮೈಸೂರು, ಆಗಸ್ಟ್ 15: ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವತಿಯಿಂದ ಆ.19ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ.

ರಾಜ್ಯ ಮುಕ್ತ ವಿವಿ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಅವಕಾಶ

ಬಿ.ಎ ಹಾಗೂ ಬಿ.ಕಾಂಗೆ ಆ.19 ರಿಂದ ಪ್ರಾರಂಭವಾಗಬೇಕಿದ್ದ ಪರೀಕ್ಷೆಗಳನ್ನು ಮುಂದಿನ 10 ದಿನಗಳ ಕಾಲ ಮುಂದೂಡಲಾಗಿದ್ದು, ಆಗಸ್ಟ್ 29ರಂದು ಪರೀಕ್ಷೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಪ್ರೋ.ಎ.ರಂಗಸ್ವಾಮಿ ಪತ್ರದ ಮುಖೇನ ತಿಳಿಸಿದ್ದಾರೆ. ಆಗಸ್ಟ್ 29ರಿಂದ ಮಧ್ಯಾಹ್ನ 2ಗಂಟೆಯ ನಂತರ ಪರೀಕ್ಷೆಗಳು ಪ್ರಾರಂಭವಾಗಲಿವೆ.

ಮಹಾ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರಾಜ್ಯದ ಸುಮಾರು 17 ಜಿಲ್ಲೆಗಳಲ್ಲಿ ಪ್ರವಾಹ ಸ್ಥಿತಿ ಇದೆ. ಮಳೆಯಿಂದಾಗಿ ರಾಜ್ಯದ ಹಲವೆಡೆ ಸಾಕಷ್ಟು ತೊಂದರೆಯಾಗಿದೆ. ಮುಂದಿನ ದಿನಗಳಲ್ಲಿಯೂ ಮಳೆ ಬರುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಮಳೆಯ ಕಾರಣ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದ್ದು, ಕೆಎಸ್ ಒಯು ಈ ನಿರ್ಧಾರ ಪ್ರಕಟಿಸಿದೆ.

English summary
Due to Heavy rain August 19th KSOU Exams has been postponed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X