ಲೇಖಕರು ಓದಲೇಬೇಕಾದ ಸುದ್ದಿ: ಪ್ರಥಮ ಮುದ್ರಣಗೊಂಡ ಪುಸ್ತಕ ನೊಂದಣಿಗೆ ಸೂಚನೆ
ಮೈಸೂರು, ನವೆಂಬರ್ 30: 2024ರಲ್ಲಿ ಕರ್ನಾಟಕದಲ್ಲಿ ಪ್ರಥಮ ಮುದ್ರಣಗೊಂಡು ಪ್ರಕಟಗೊಂಡ ಯಾವುದೇ ಭಾಷೆಯ ಪುಸ್ತಕಗಳನ್ನು ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿರುವ ರಾಜ್ಯ ಕೇಂದ್ರ ಗ್ರಂಥಾಲಯದಲ್ಲಿ 01 ಜನವರಿ 2025 ರ ಸಂಜೆ 5.30 ಒಳಗಾಗಿ ನೋಂದಾಯಿಸಿಕೊಳ್ಳಬೇಕು. ನೊಂದಣಿ ಮಾಡಿದ ಪುಸ್ತಕಗಳನ್ನು ಮಾತ್ರ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಪರಿಗಣಿಸಲಾಗುತ್ತದೆ ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತರು
2024ರಲ್ಲಿ ಹೊರ ರಾಜ್ಯಗಳಲ್ಲಿ ಮುದ್ರಣಗೊಂಡು ಪ್ರಕಟವಾಗುವ ಆಂಗ್ಲ, ಹಿಂದಿ ಅಥವಾ ಯಾವುದೇ ಭಾಷೆಯ ಪುಸ್ತಕಗಳನ್ನು ಆಯಾ ರಾಜ್ಯ ಕೇಂದ್ರ ಗ್ರಂಥಾಲಯಗಳಲ್ಲಿ ಅಥವಾ ಕೇಂದ್ರ/ ಆಯಾ ರಾಜ್ಯ ಸರ್ಕಾರಗಳಿಂದ ಅಧಿಸೂಚಿಸಲ್ಪಟ್ಟ ಅಧಿಕೃತ ಪುಸ್ತಕ ನೋಂದಣಿ ಕೇಂದ್ರಗಳಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಿ.

ನೋಂದಣಿ ಪ್ರಮಾಣ ಪತ್ರದ ನಕಲು ಪತ್ರದ ಪ್ರತಿಯೊಂದಿಗೆ ಮತ್ತು ಸದರಿ ಪುಸ್ತಕದ ಒಂದು ಪ್ರತಿಯನ್ನು 02 ಜನವರಿ 2025 ರ ಸಂಜೆ 5.30 ರೊಳಗೆ ಆಯ್ಕೆಗಾಗಿ ರಾಜ್ಯ ಕೇಂದ್ರ ಗ್ರಂಥಾಲಯಕ್ಕೆ ಸಲ್ಲಿಸಬೇಕಾಗಿದ್ದು, ಸಾಹಿತ್ಯ, ಮಕ್ಕಳ ಸಾಹಿತ್ಯ, ಕಲೆ ಮತ್ತು ವಿಜ್ಞಾನ ಪ್ರಕಾರಗಳ ಯಾವುದೇ ಭಾಷೆಯ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಸಲ್ಲಿಸಬಹುದು.
ಸ್ಪರ್ಧಾತ್ಮಕ. ಪಠ್ಯ, ಪರಾಮರ್ಶನ, ಸಾಂದರ್ಭಿಕ ಮತ್ತು ಅಭಿನಂದನ ಗ್ರಂಥಗಳನ್ನು ಸ್ಥಳೀಯ ಓದುಗರ ಬೇಡಿಕೆಗೆ ಅನುಗುಣವಾಗಿ ಆಯಾ ಪ್ರಾಧಿಕಾರಗಳ ಅಧಿಕಾರಿಗಳ/ಪ್ರಾಧಿಕಾರಗಳ ವಿವೇಚನಾ ಕೋಟಾದಡಿ ನಿಯಮಾನುಸಾರ ಬೆಲೆ ನಿಗದಿಪಡಿಸಿಕೊಂಡು ನೇರವಾಗಿ ಖರೀದಿಸಲು ಆಯ್ಕೆ ಸಮಿತಿ ಸಭೆಯಲ್ಲಿ ನಿರ್ಣಯಿಸಲಾಗಿರುತ್ತದೆ.
2024ನೇ ವರ್ಷದಲ್ಲಿ ಪ್ರಕಟಗೊಂಡ ಪುಸ್ತಕಗಳ ಆಯ್ಕೆಗೆ ಪ್ರತ್ಯೇಕವಾಗಿ ಆಯುಕ್ತರ ಕಛೇರಿಯಲ್ಲಿ ಯಾವುದೇ ಪುಸ್ತಕಗಳನ್ನು ಸ್ವೀಕರಿಸಲಾಗುವುದಿಲ್ಲ. ಆದ್ದರಿಂದ ಆಯ್ಕೆ ಸಮಿತಿಗೆ ಆಯ್ಕೆಗಾಗಿ ಪುಸ್ತಕಗಳನ್ನು ಸಲ್ಲಿಸಲು ಇಚ್ಛಿಸುವ ಲೇಖಕರು, ಲೇಖಕ-ಪ್ರಕಾಶಕರು ಮತ್ತು ಪ್ರಕಾಶಕರು ನಿಗದಿತ ಅವಧಿಯೊಳಗೆ ರಾಜ್ಯ ಕೇಂದ್ರ ಗ್ರಂಥಾಲಯದಲ್ಲಿ ಪುಸ್ತಕಗಳ ನೋಂದಣಿ ಅಧಿನಿಯಮದಡಿ ನಿಯಮಾನುಸಾರ ಪುಸ್ತಕಗಳನ್ನು ಸಲ್ಲಿಸಬೇಕು.
ನೋಂದಣಿಗಾಗಿ ನಿಗದಿತ ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ ಇಲಾಖಾ ಅಂತರ್ಜಾಲ www.dpl.karnataka.gov.in ಮತ್ತು ರಾಜ್ಯದ ಎಲ್ಲಾ ಜಿಲ್ಲಾ/ನಗರ ಕೇಂದ್ರ ಗ್ರಂಥಾಲಯಗಳ ಉಪನಿರ್ದೇಪಕರು/ಮುಖ್ಯ ಗ್ರಂಥಾಲಯಾಧಿಕಾರಿಗಳ ಕಛೇರಿಗಳಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂ.ಸಂ: 080-22864990 ಮತ್ತು 22867358 ನ್ನು ಸಂಪರ್ಕಿಸಬಹುದು ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












Click it and Unblock the Notifications