• search
 • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೈಸೂರಿನಲ್ಲಿ ಮಾರಕಾಸ್ತ್ರಗಳಿಂದ ಆಟೋ ಚಾಲಕನ ಹತ್ಯೆ

By ಮೈಸೂರು ಪ್ರತಿನಿಧಿ
|

ಮೈಸೂರು, ಜುಲೈ 23: ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ರಿಕ್ಷಾ ಚಾಲಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹೆಬ್ಬಾಳು ಸೂರ್ಯ ಬೇಕರಿ ಸರ್ಕಲ್ ನಲ್ಲಿ ನಡೆದಿದೆ.

   Sonu Sood : ವಲಸೆ ಕಾರ್ಮಿಕರಿಗಾಗಿ ಹೊಸ ಯೋಜನೆ ರೂಪಿಸಿದ ಬಾಲಿವುಡ್ ಸ್ಟಾರ್ | Oneindia Kannada

   ಮೃತನನ್ನು ಹೂಟಗಳ್ಳಿಯ ದರ್ಶನ್ (21) ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೈದಿದ್ದಾರೆ. ನಿನ್ನೆ ಮಧ್ಯರಾತ್ರಿ ರಸ್ತೆ ಬದಿ ಬಿದ್ದಿದ್ದ ಈತನನ್ನು ಕಂಡ ಬಸ್ ಪ್ರಯಾಣಿಕರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

   ಅತ್ತಿಗೆ ಜೊತೆಗೆ ಸಲುಗೆ; ಅಣ್ಣನ ಕೈಯಲ್ಲೇ ಹೆಣವಾದ ತಮ್ಮ!

   ಸ್ಥಳಕ್ಕೆ ಬಂದ ಪೊಲೀಸರು ರಿಕ್ಷಾ ಚಾಲಕನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಆತ ಮೃತಪಟ್ಟಿದ್ದಾನೆಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ದರ್ಶನ್ ತಂದೆ ಹೆಬ್ಬಾಳು ಪೊಲೀಸರಿಗೆ ದೂರು ನೀಡಿದ್ದಾರೆ. ರಾತ್ರಿ ಮನೆಗೆ ಬಂದ ಮೂವರು ತಮ್ಮ ಮಗನನ್ನು ಕರೆದೊಯ್ದಿದ್ದು ಅವರೇ ಈತನನ್ನು ಕೊಲೆ ಮಾಡಿದ್ದಾರೆ ಎಂದು ದೂರಿದ್ದಾರೆ. ಹೆಬ್ಬಾಳು ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

   English summary
   An auto driver was brutally murdered in hebbalu of mysuru
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X