ನಾಲೆಯಲ್ಲಿ ಆಟೋ ತೊಳೆಯುತ್ತಿದ್ದಾಗ ಅಪಘಾತ; ಚಾಲಕ ಸಾವು

ಮೈಸೂರು, ಸೆಪ್ಟೆಂಬರ್ 17: ನಾಲೆಯಲ್ಲಿ ಆಟೋ ತೊಳೆಯುತ್ತಿದ್ದ ಸಂದರ್ಭ ರಸ್ತೆ ಮಾರ್ಗವಾಗಿ ವೇಗವಾಗಿ ಬಂದ ಗೂಡ್ಸ್ ಆಟೋ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದು ಆಟೋ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಂದು ನಡೆದಿದೆ.

ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಕರಿಗಳ ನಾಲೆಯ ಬಳಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಆಟೋ ಚಾಲಕ ಪುಟ್ಟರಾಜು (40) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಹಾಲಯ ಅಮಾವಾಸ್ಯೆ ಹಿನ್ನೆಲೆಯಲ್ಲಿ ಪುಟ್ಟರಾಜು, ನಾಲೆಯಲ್ಲಿ ಆಟೋ ತೊಳೆಯುತ್ತಿದ್ದರು.

Mysuru: Auto Driver Killed In An Accident Near HD Kote

ಈ ವೇಳೆ ಯಮಸ್ವರೂಪಿಯಾಗಿ ಬಂದ ಗೂಡ್ಸ್ ಆಟೋ, ನಾಲೆಯ ಬಳಿ ಆಟೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಎರಡೂ ಆಟೋಗಳು ಪಲ್ಟಿ ಬಿದ್ದಿವೆ. ಘಟನೆಯಲ್ಲಿ ಗೂಡ್ಸ್ ಆಟೋ ಚಾಲಕನಿಗೂ ಗಾಯಗಳಾಗಿವೆ. ಈ ಕುರಿತು ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+