ಮೈಸೂರು ಪ್ರವಾಸಿ ತಾಣಗಳಲ್ಲಿ ಕೊರೊನಾ ವೈರಸ್ ಬಗ್ಗೆ ಕಟ್ಟೆಚ್ಚರ
ಮೈಸೂರು, ಫೆಬ್ರವರಿ 09: ಚೀನಾದಲ್ಲಿ ಮೃತ್ಯುಕೂಪವಾಗಿರುವ ಕೊರೊನಾ ವೈರಸ್ ಭೀತಿ ದೇಶದಲ್ಲೂ ಆತಂಕ ಸೃಷ್ಟಿಸಿದೆ. ಈ ನಡುವೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ.
ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ನಗರದ ಪ್ರವಾಸಿ ತಾಣಗಳಲ್ಲಿ ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದ್ದು, ಮೃಗಾಲಯದ ಪ್ರವೇಶ ದ್ವಾರದಲ್ಲಿ ಕೊರೊನಾ ಜಾಗೃತಿ ಭಿತ್ತಿ ಪತ್ರ ಅಳವಡಿಸಲಾಗಿದೆ.
ಚಾಮರಾಜನಗರ, ಮೈಸೂರು, ಕೊಡಗು ಚೆಕ್ ಪೋಸ್ಟ್ ಗಳ ಮುಖಾಂತರ ಮೈಸೂರಿಗೆ ಆಗಮಿಸುವ ಪ್ರವಾಸಿಗರ ಮೇಲೆ ಆರೋಗ್ಯ ಇಲಾಖೆ ಎಚ್ಚರ ವಹಿಸಿದೆ.

ಕೇರಳದ ಪ್ರವಾಸಿಗರನ್ನು ಆರೋಗ್ಯ ಇಲಾಖೆ ವಿಚಾರಣೆ ನಡೆಸಿ ನಂತರ ಮೈಸೂರಿಗೆ ಬಿಡುತ್ತಿದ್ದು, ಗಡಿಭಾಗದಲ್ಲಿ ಹೆಚ್ಚಿನ ನಿಗಾ ವಹಿಸಿದೆ. ಕೇರಳದಲ್ಲಿ ಕೊರೊನಾ ವೈರಸ್ ಪತ್ತೆಯಾಗಿದ ಹಿನ್ನೆಲೆ ತಪಾಸಣೆ ನಡೆಸಲಾಗುತ್ತಿದೆ.












Click it and Unblock the Notifications