ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನಲ್ಲಿ ಕಾನೂನು ಸೇವಾ ಪ್ರಾಧಿಕಾರದಿಂದ ಕೊರೊನಾ ಜಾಗೃತಿ ಜಾಥಾ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಅಕ್ಟೋಬರ್ 14: ಸಾರ್ವಜನಿಕರಲ್ಲಿ ಕೋವಿಡ್-19 ಸೋಂಕು ಹರಡದಂತೆ ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಇಂದು ಜಾಗೃತಿ ಜಾಥಾ ಕಾರ್ಯಕ್ರಮ ನಡೆಸಲಾಯಿತು.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘದಿಂದ ಬುಧವಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ್ ಚಾಲನೆ ನೀಡಿದರು.

ಸರ್ಕಾರದ ಎಚ್ಚರಿಕೆ: ಈ 10 ಜಿಲ್ಲೆಗಳಲ್ಲಿ ಹೆಚ್ಚಾಗುತ್ತಿದೆ ಕೊರೊನಾ!ಸರ್ಕಾರದ ಎಚ್ಚರಿಕೆ: ಈ 10 ಜಿಲ್ಲೆಗಳಲ್ಲಿ ಹೆಚ್ಚಾಗುತ್ತಿದೆ ಕೊರೊನಾ!

ಬಳಿಕ ಮಾತನಾಡಿದ ಅವರು, "ಕೊರೊನಾ ಸೋಂಕು ಹೆಚ್ಚುತ್ತಲೇ ಇದ್ದು, ಕೋವಿಡ್ 19ನಿಂದ ದೂರವಿರಲು ಪ್ರತಿಯೊಬ್ಬರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಅತಿ ಅಗತ್ಯವಾಗಿದೆ. ಅಗತ್ಯ ಕೆಲಸಗಳಿದ್ದರೆ ಮಾತ್ರ ಮನೆಯಿಂದ ಹೊರಬನ್ನಿ. ಕೋವಿಡ್-19ಗೆ ಇನ್ನೂ ಲಸಿಕೆ ಲಭ್ಯವಾಗಿಲ್ಲ, ಆದ್ದರಿಂದ ಪ್ರತಿಯೊಬ್ಬರೂ ತಮ್ಮ ತಮ್ಮ ಆರೋಗ್ಯದ ಕುರಿತು ಕಾಳಜಿ ವಹಿಸಬೇಕು" ಎಂದರು.

Mysuru: Awareness Programme By Legal Services Authority About Coronavirus

ಇದೇ ವೇಳೆ, ಕಡ್ಡಾಯವಾಗಿ ಮಾಸ್ಕ್ ಧರಿಸುತ್ತೇನೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳುತ್ತೇನೆ, ಕೈಗಳನ್ನು ಸ್ನಾನಿಟೈಸರ್ ನಿಂದ ಸ್ವಚ್ಛಗೊಳಿಸುತ್ತಿರುತ್ತೇನೆ ಎಂದು ಪ್ರತಿಜ್ಞಾವಿಧಿ ಬೋಧಿಸಿದರು.

ನ್ಯಾಯಾಲಯದ ಆವರಣದಿಂದ ಹೊರಟ ಜಾಥಾ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ, ಸಾರ್ವಜನಿಕರಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸುವ ಕುರಿತು ಜಾಗೃತಿ ಮೂಡಿಸಲಾಯಿತು. ಈ ಸಂದರ್ಭ ಮೈಸೂರು ನಗರದ ಎಲ್ಲಾ ನ್ಯಾಯಾಧೀಶರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಪ್ಯಾನಲ್ ವಕೀಲರು, ವಕೀಲರ ಸಂಘದ ಅಧ್ಯಕ್ಷ ಆನಂದ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Recommended Video

Congress ಶಾಲಿಗೆ ಬೆಲೆ ಇಲ್ಲಾ ಅನ್ನೋದು ಗೊತ್ತಾಗಿದೆ | Oneindia Kannada

ಮೈಸೂರಿನಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 42789 ಆಗಿದೆ. ಒಟ್ಟು ಬಿಡುಗಡೆಯಾದವರ ಸಂಖ್ಯೆ 35050 ಆಗಿದ್ದು, 6843 ಸಕ್ರಿಯ ಪ್ರಕರಣಗಳಿವೆ. ಇಂದು ಮೂರು ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಒಟ್ಟು 896 ಮಂದಿ ಕೊರೊನಾ ವೈರಸ್ ನಿಂದ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

English summary
Awareness programme was held today by the mysuru District Legal Services Authority about coronavirus infection among public,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X