ಅರಳಿ ಮರಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ ವಿವಿಧ ಸಂಘಟನೆಗಳು
ಮೈಸೂರು, ಮಾರ್ಚ್ 2: ಇತ್ತೀಚಿನ ದಿನಗಳಲ್ಲಿ ಪರಿಸರ ಸಂರಕ್ಷಣೆಗೆ ಸರ್ಕಾರ, ಸಂಘ-ಸಂಸ್ಥೆಗಳು ಮತ್ತು ಸಾರ್ವಜನಿಕರೂ ಶ್ರಮಿಸುತ್ತಿದ್ದಾರೆ. ಪರಿಸರ ಉಳಿಸುವ ಆಂದೋಲನಕ್ಕಾಗಿಯೇ ಸರ್ಕಾರ ವಾರ್ಷಿಕ ಕೋಟ್ಯಾಂತರ ರೂಪಾಯಿ ವೆಚ್ಚ ಮಾಡುತ್ತಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳುಮರಗಳನ್ನು ಕಡಿಯಬೇಡಿ, ಸಸಿಗಳನ್ನು ನೆಡಿ' ಎಂಬ ಜಾಗೃತಿ ಕಾರ್ಯಕ್ರಮಕ್ಕೆ ಕೋಟ್ಯಾಂತರ ರುಪಾಯಿ ವೆಚ್ಚ ಮಾಡುತ್ತಿದೆ. ಈ ನಡುವೆ ಅಲ್ಲಲ್ಲಿ ಸರ್ಕಾರದ ಅಧಿಕಾರಿಗಳು ಮತ್ತು ಜನರೇ ಮರಗಳನ್ನು ಕಡಿದಿರುವ ಪ್ರಕರಣಗಳೂ ವರದಿ ಆಗುತ್ತಿವೆ.
ಮೈಸೂರು ನಗರದ ಶ್ರೀರಾಂಪುರದ ಬೆಮೆಲ್ ಲೇಔಟ್‌ನ ಗಣಪತಿ ದೇವಾಲಯದ ಬಳಿ ಬೃಹತ್ ಅರಳಿ ಮರವೊಂದನ್ನು ಎರಡು ದಿನಗಳ ಹಿಂದೆ ಕಡಿದು ಹಾಕಲಾಗಿದೆ. ಈ ಕುರಿತು ಮಾತನಾಡಿದ ಪರಿಸರವಾದಿ, ಸ್ಥಳೀಯರಾದ ಭಾಮಿ ಶೆಣೈ ಅವರು, ""ಅರಣ್ಯ ಇಲಾಖೆಯೇ ಹಿಂದೆ ಮುಂದೆ ನೋಡದೆ ಮರ ಕಡಿಯಲು ಅನುಮತಿ ನೀಡಿದೆ'' ಎಂದು ಆರೋಪಿಸಿದರು.

"ಸುಮಾರು 35 ವರ್ಷಗಳ ಬೃಹತ್ ಮರ ಇಷ್ಟು ವರ್ಷ ಗಾಳಿ, ನೆರಳು ನೀಡುತ್ತಿತ್ತು. ಆದರೆ ಎದುರು ಮನೆಯವರು ಬೇರು ಬರುತ್ತದೆ ಎಂದು ಹೇಳಿ ಕಡಿಸಿ ಹಾಕಿದ್ದಾರೆ. ಇದಕ್ಕೆ ಪರ್ಯಾಯ ವ್ಯವಸ್ಥೆ ಮಾಡಬಹುದಿತ್ತು, ಇಲಾಖೆ ಅನುಮತಿ ಕೊಟ್ಟಿದ್ದೇ ತಪ್ಪು'' ಎಂದರು.

"ಮರ ಕಡಿದಿರುವುದನ್ನು ಖಂಡಿಸಿ ಇಂದು ಕದಂಬ ಸೇನೆ, ಪರಿಸರ ಹಿತರಕ್ಷಣಾ ವೇದಿಕೆ, ಕನ್ನಡ ಸ್ವಾಭಿಮಾನ ಬಳಗದವರು ಶ್ರದ್ಧಾಂಜಲಿ ಸಲ್ಲಿಸಿ ಮರಗಳನ್ನು ಕಡಿಯದಂತೆ ಮನವಿ ಮಾಡಿದರು. ಇದಲ್ಲದೆ ಬೆಮೆಲ್ ಲೇಔಟಿನಲ್ಲಿ ಮನೆಗಳ ಮುಂದೆ ಬೆಳೆದಿದ್ದ 4-5 ಮರಗಳನ್ನೂ ಕಡಿದಿದ್ದಾರೆ. ಇದಕ್ಕೆ ಕಡಿವಾಣ ಹಾಕುವಂತೆ'' ಸರ್ಕಾರ ಮತ್ತು ಅರಣ್ಯ ಇಲಾಖೆಯನ್ನು ಒತ್ತಾಯಿಸಿದರು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications