ಯಡಿಯೂರಪ್ಪ ನನ್ನ ಮೂಗು ಹಿಡಿಯೋ ಬದಲು ಮೋದಿಯ ಮೂಗು ಹಿಡಿಯಲಿ: ಸಿದ್ದು
ಯಡಿಯೂರಪ್ಪ ನನ್ನ ಮೂಗು ಹಿಡಿಯುವ ಬದಲು ಮೋದಿಯ ಮೂಗು ಹಿಡಿಯಲಿ. ಡೋಂಗಿತನ ಬಿಟ್ಟು ಸಾಲಮನ್ನಾ ಬಗ್ಗೆ ಕೇಂದ್ರವನ್ನು ಒತ್ತಾಯಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮೈಸೂರು, ಜೂನ್ 1: ಯಡಿಯೂರಪ್ಪ ನನ್ನ ಮೂಗು ಹಿಡಿಯುವ ಬದಲು ಮೋದಿಯ ಮೂಗು ಹಿಡಿಯಲಿ. ಡೋಂಗಿತನ ಬಿಟ್ಟು ಸಾಲಮನ್ನಾ ಬಗ್ಗೆ ಕೇಂದ್ರವನ್ನು ಒತ್ತಾಯಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆ ನನ್ನ ನೇತೃತ್ವದಲ್ಲಿಯೇ ನಡೆಯಲಿದೆ. ರಾಜ್ಯ ವಿಧಾನ ಮಂಡಲದ ಅಧಿವೇಶನ ಮುಗಿದ ಬಳಿಕ ಸಂಪುಟ ವಿಸ್ತರಣೆ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.[ಯಡಿಯೂರಪ್ಪ ಎರಡು ನಾಲಿಗೆ ಮನುಷ್ಯ: ಸಿದ್ಧರಾಮಯ್ಯ]

ಹೈಕಮಾಂಡ್ ಒನ್ ಮ್ಯಾನ್ ಒನ್ ಪೋಸ್ಟ್ ಅಂತ ಹೇಳಿದೆ. ರಾಜೀನಾಮೆ ಕುರಿತು ಪರಮೇಶ್ವರ್ ಇನ್ನೂ ಮಾತನಾಡಿಲ್ಲ. ಡಿ.ಕೆ ಶಿವಕುಮಾರ್ ಗೆ ಯಾವುದೇ ರೀತಿಯ ಬೇಸರ ಇಲ್ಲ. ಹೈಕಮಾಂಡ್ ಹೇಳಿದರೆ ಎಲ್ಲರೂ ಒಪ್ಪಿಕೊಳ್ಳುತ್ತಾರೆ ಎಂದರು.
ಚುನಾವಣೆಯಲ್ಲಿ ರಾಜ್ಯದಲ್ಲಿ ಪ್ರವಾಸಕ್ಕೆ ಅನುಕೂಲ ಆಗಲಿ ಎಂದು ಎರಡು ಅಧ್ಯಕ್ಷ ಹುದ್ದೆ ಮಾಡಲಾಗಿದೆ. ಯಡಿಯೂರಪ್ಪ ಅವರಿಗೆ ಯಾವುದೂ ಗೊತ್ತಿಲ್ಲ. ರಾಜ್ಯದಲ್ಲಿ ಬರ ಪರಿಸ್ಥಿಯನ್ನು ನಮ್ಮ ಸರ್ಕಾರ ಇತರ ಸರ್ಕಾರಗಳಿಂತ ಸಮರ್ಥವಾಗಿ ಎದುರಿಸಿದೆ. ಕೇಂದ್ರ ಸರ್ಕಾರ ರೈತರ ಸಾಲಮನ್ನಾ ಮಾಡಲಿ, ನಂತರ ನಾನೂ ಮಾಡುತ್ತೇನೆ. ಯಡಿಯೂರಪ್ಪ ನನ್ನ ಮೂಗು ಹಿಡಿಯುವ ಬದಲು ಮೋದಿ ಮೂಗು ಹಿಡಿಯಲಿ. ಡೋಂಗಿತನ ಬೇಡ ಎಂದರು.
ರಮ್ಯಾ ಅವರನ್ನು ಚುನಾವಣೆಯಲ್ಲಿ ಬಳಸಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಮುಂದಿನ ರಾಜ್ಯ ಚುನಾವಣೆಯಲ್ಲಿ ಬಳಸಿಕೊಳ್ಳುತ್ತೇವೆ. ಅವರ ಸಲಹೆಗಳನ್ನೂ ಪಡೆಯುತ್ತೇವೆ ಎಂದರು. ಇದೇ ಸಂದರ್ಭ ಯುಪಿಎಸ್ಸಿ ಟಾಪರ್ ನಂದಿನಿಗೆ ಅಭಿನಂದನೆ ಸಲ್ಲಿಸಿದರಲ್ಲದೇ, ಇದರಿಂದ ರಾಜ್ಯವೇ ಹೆಮ್ಮೆ ಪಡುವಂತಾಗಿದೆ ಎಂದು ತಿಳಿಸಿದರು
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications