ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು ಜಿಲ್ಲಾಧಿಕಾರಿ ನೇಮಕ, ರೋಹಿಣಿ ಸಿಂಧೂರಿಗೆ ಹಿನ್ನಡೆ!

|
Google Oneindia Kannada News

ಮೈಸೂರು, ಡಿಸೆಂಬರ್ 15: ಮೈಸೂರು ಜಿಲ್ಲಾಧಿಕಾರಿಯಾಗಿ ಶರತ್ ಬಿ. ನೇಮಕ ಮಾಡುವಂತೆ ಸಿಎಟಿ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ. ರೋಹಿಣಿ ಸಿಂಧೂರಿ ಅವರನ್ನು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿರುವುದನ್ನು ಶರತ್ ಸಿಎಟಿಯಲ್ಲಿ ಪ್ರಶ್ನೆ ಮಾಡಿದ್ದರು.

ಮಂಗಳವಾರ ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿ ಈ ಕುರಿತು ಆದೇಶ ಹೊರಡಿಸಿದೆ. ಡಿಸೆಂಬರ್ 22ರೊಳಗೆ ಶರತ್ ಬಿ. ಅವರನ್ನು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಬೇಕು. ಇಲ್ಲವಾದಲ್ಲಿ ಸಿಎಟಿ ಈ ಕುರಿತು ಆದೇಶ ಹೊರಡಿಸಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

 ಮೈಸೂರು ಡಿಸಿ ರೋಹಿಣಿ ಸಿಂಧೂರಿ ಪರ ಪ್ರತಾಪ್ ಸಿಂಹ ಮಾತು ಮೈಸೂರು ಡಿಸಿ ರೋಹಿಣಿ ಸಿಂಧೂರಿ ಪರ ಪ್ರತಾಪ್ ಸಿಂಹ ಮಾತು

ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕವಾಗಿದ್ದ ಶರತ್ ಬಿ. ಅವರನ್ನು ಸರ್ಕಾರ ಏಕಾಏಕಿ ವರ್ಗಾವಣೆ ಮಾಡಿತ್ತು. ರೋಹಿಣಿ ಸಿಂಧೂರಿ ಅವರನ್ನು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿತ್ತು. ಇದನ್ನು ಶರತ್ ಸಿಎಟಿಯಲ್ಲಿ ಪ್ರಶ್ನೆ ಮಾಡಿದ್ದರು.

ದಸರಾ ಉತ್ಸವ ಯಶಸ್ವಿ: ಚಾಮುಂಡೇಶ್ವರಿಗೆ ಹರಕೆ ತೀರಿಸಿದ ಡಿಸಿ ರೋಹಿಣಿ ಸಿಂಧೂರಿ ದಸರಾ ಉತ್ಸವ ಯಶಸ್ವಿ: ಚಾಮುಂಡೇಶ್ವರಿಗೆ ಹರಕೆ ತೀರಿಸಿದ ಡಿಸಿ ರೋಹಿಣಿ ಸಿಂಧೂರಿ

ಅಭಿರಾಮ್ ಜಿ. ಶಂಕರ್ ಮೈಸೂರು ಜಿಲ್ಲಾಧಿಕಾರಿಯಾಗಿದ್ದರು. ಆಗ ಬಿ. ಶರತ್ ಕಲಬುರಗಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು. ಶರತ್ ಅವರನ್ನು ವರ್ಗಾವಣೆ ಮಾಡಿದ ಬಳಿಕ ಆಗಸ್ಟ್ 29ರಂದು ಮೈಸೂರು ಜಿಲ್ಲಾಧಿಕಾರಿಯಾಗಿ ಅವರು ಅಧಿಕಾರ ಸ್ವೀಕಾರ ಮಾಡಿದ್ದರು.

 ವರ್ಗಾವಣೆ ಪ್ರಶ್ನಿಸಿ ಸಿಎಟಿ ಮೆಟ್ಟಿಲೇರಿದ ಮೈಸೂರಿನ ಹಿಂದಿನ ಡಿಸಿ ಬಿ. ಶರತ್ ವರ್ಗಾವಣೆ ಪ್ರಶ್ನಿಸಿ ಸಿಎಟಿ ಮೆಟ್ಟಿಲೇರಿದ ಮೈಸೂರಿನ ಹಿಂದಿನ ಡಿಸಿ ಬಿ. ಶರತ್

ಐಎಎಸ್ ಅಧಿಕಾರಿ ಶರತ್ ಬಿ.

ಐಎಎಸ್ ಅಧಿಕಾರಿ ಶರತ್ ಬಿ.

2011ನೇ ಬ್ಯಾಚ್ ಐಎಎಸ್ ಅಧಿಕಾರಿ ಶರತ್ ಬಿ. ಮೂಲತಃ ಚಿತ್ರದುರ್ಗ ಜಿಲ್ಲೆಯವರು. ಮಂಡ್ಯ ಜಿಲ್ಲಾಪಂಚಾಯತ್ ಸಿಇಓ ಆಗಿ, ಬೀದರ್ ಜಿಲ್ಲಾಧಿಕಾರಿಯಾಗಿ, ಕಲಬುರಗಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಆಗಸ್ಟ್ 29ರಂದು ಅವರು ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರವಹಿಸಿಕೊಂಡಿದ್ದರು.

ರೋಹಿಣಿ ಸಿಂಧೂರಿ ನೇಮಕ

ರೋಹಿಣಿ ಸಿಂಧೂರಿ ನೇಮಕ

ಸೆಪ್ಟೆಂಬರ್ 28ರಂದು ಕರ್ನಾಟಕ ಸರ್ಕಾರ ಶರತ್ ಬಿ. ಅವರನ್ನು ವರ್ಗಾವಣೆ ಮಾಡಿತ್ತು. ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದ ರೋಹಿಣಿ ಸಿಂಧೂರಿ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿತ್ತು. ಒಂದು ತಿಂಗಳಿಗೂ ಮೊದಲೇ ಶರತ್ ವರ್ಗಾವಣೆ ಮಾಡಿದ್ದು ಚರ್ಚೆಗೆ ಕಾರಣವಾಗಿತ್ತು.

ಸಿಎಟಿ ಮೆಟ್ಟಿಲೇರಿದ ಶರತ್

ಸಿಎಟಿ ಮೆಟ್ಟಿಲೇರಿದ ಶರತ್

ಅವಧಿಗೂ ಮೊದಲೇ ತಮ್ಮನ್ನು ವರ್ಗಾವಣೆ ಮಾಡಿರುವುದನ್ನು ಪ್ರಶ್ನಿಸಿ ಶರತ್ ಬಿ. ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮಂಡಳಿ ಶರತ್ ಅವರನ್ನು ಮರು ನೇಮಕ ಮಾಡುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ.

ರೋಹಿಣಿ ಸಿಂಧೂರಿ ವಿರುದ್ಧ ಅಸಮಾಧಾನ

ರೋಹಿಣಿ ಸಿಂಧೂರಿ ವಿರುದ್ಧ ಅಸಮಾಧಾನ

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ನೇತೃತ್ವದಲ್ಲಿಯೇ ಈ ಬಾರಿಯ ದಸರಾ ನಡೆದಿತ್ತು. ಆದರೆ, ಜಿಲ್ಲೆಯ ಜನಪ್ರತಿನಿಧಿಗಳು ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇಂತಹ ಸಮಯದಲ್ಲಿಯೇ ಶರತ್ ಅವರನ್ನು ಮರು ನೇಮಕ ಮಾಡಬೇಕು ಎಂದು ಆದೇಶ ಬಂದಿದೆ.

English summary
Central Administrative Tribunal ordered to appoint B. Sharath as deputy commissioner of Mysuru. He challenged Rohini Sindhuri appointment in CAT.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X