Get Updates
Get notified of breaking news, exclusive insights, and must-see stories!

Bahuroopi 2025: ಜನವರಿ 14ರಿಂದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಪ್ರಾರಂಭ

ಮೈಸೂರು, ಜನವರಿ 09: ರಂಗಾಯಣ ಆವರಣದಲ್ಲಿ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ವೇದಿಕೆ ಸಜ್ಜುಗೊಂಡಿದ್ದು, ಜನವರಿ 14 ರಿಂದ ಜನವರಿ 19 ರವರೆಗೆ ಬಿಡುಗಡೆ ಎಂಬ ಆಶಯದಡಿ ನಾಟಕೋತ್ಸವ ಆಯೋಜಿಸಲಾಗಿದೆ ಎಂದು ರಂಗಾಯಣ ನಿರ್ದೇಶಕ ಸತೀಶ್ ತಿಪಟೂರು ತಿಳಿಸಿದರು.

ರಂಗಾಯಣದ ಬಿ.ವಿ.ಕಾರಂತ ರಂಗಚಾವಡಿಯಲ್ಲಿ ಬಹುರೂಪಿ ನಾಟಕೋತ್ಸವದ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಸಂಕ್ರಾಂತಿ ದಿನದಿಂದ ಆರಂಭವಾಗುವ ಬಹುರೂಪಿ ನಾಟಕೋತ್ಸವ ಆರು ದಿನಗಳ ಕಾಲ ರಂಗಾಸಕ್ತರನ್ನು ಮನರಂಜಿಸಲಿದ್ದು, ಬಹುಭಾಷಾ ನಾಟಕೋತ್ಸವ, ವಿಚಾರ ಸಂಕಿರಣ, ಚಲನಚಿತ್ರೋತ್ಸವ, ಜನಪದ ಸಂಭಮ, ಪುಸ್ತಕ ಮೇಳ, ಕರಕುಶಲ ಮೇಳ ಮತ್ತು ಪ್ರಾತ್ಯಕ್ಷಿಕೆ, ದೇಸಿ ಆಹಾರ ಮೇಳ, ಚಿತ್ರಕಲಾ ಪ್ರದರ್ಶನ ಹಾಗೂ ಮಕ್ಕಳ ನಾಟಕೋತ್ಸವ ರಂಗೋತ್ಸವದಲ್ಲಿ ಇರಲಿದೆ ಎಂದು ಮಾಹಿತಿ ನೀಡಿದರು.

Bahuroopi National Theatre Festival Starts From January 14

2025ರ ಬುಹುರೂಪಿ ನಾಟಕೋತ್ಸವ ಬಿಡುಗಡೆ ಎಂಬ ಆಶಯದಡಿ ಸಂಘಟಿಸಲಾಗಿದ್ದು, ನಾಟಕಗಳು ಕೂಡ ವಿಮೋಚನೆ, ಸಾಮಾಜಿಕ ನ್ಯಾಯವನ್ನೇ ಪ್ರತಿಪಾದಿಸಲಿವೆ. ಇದೇ ಮೊದಲ ಬಾರಿಗೆ ಮಕ್ಕಳ ರಂಗಭೂಮಿಯನ್ನು ಉತ್ತೇಜಿಸುವ ಉದ್ದೇಶದಿಂದ ಮಕ್ಕಳ ನಾಟಕೋತ್ಸವವನ್ನು ನಡೆಸಲಾಗುತ್ತಿದೆ. ನಾಟಕೋತ್ಸವಕ್ಕೆ 25 ಲಕ್ಷ ರೂಪಾಯಿ ಅನುದಾನವಿದ್ದು, ಟಿಕೆಟ್, ಮಳಿಗೆಗಳು ಸೇರಿದಂತೆ ವಿವಿಧ ಮೂಲಗಳಿಂದ ಹಣ ಸಂಗ್ರಹಿಸಲಾಗುತ್ತಿದೆ. ಹೆಚ್ಚುವರಿ ಖರ್ಚಿನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಪಡೆಯಲಾಗುವುದು ಎಂದು ಹೇಳಿದರು.

ಬಹುರೂಪಿ ಕಾರ್ಯಕ್ರಮಗಳಿವು

ಜ.13ರಂದು ಸಂಜೆ 5:30ಕ್ಕೆ ಕಿಂದರಿ ಜೋಗಿ ಆವರಣದಲ್ಲಿ ಜನಪದ ಸಂಭಮಕ್ಕೆ ಚಾಲನೆ ದೊರೆಯಲಿದೆ. ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಉದ್ಘಾಟಿಸಲಿದ್ದಾರೆ. ಜಾನಪದ ಕಲಾವಿದೆ ಸವಿತಾ ಚೀರುಕುನ್ನಯ್ಯ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.

ಚಲನಚತ್ರೋತ್ಸವಕ್ಕೆ ಜ.14ರಂದು ಬೆಳಗ್ಗೆ 11ಕ್ಕೆ ನಟಿ ಭಾವನಾ ರಾಮಣ್ಣ ಶ್ರೀರಂಗ ವೇದಿಕೆಯಲ್ಲಿ ಚಾಲನೆ ನೀಡಲಿದ್ದಾರೆ. ಚಲನಚಿತ್ರ ಅಕಾಡೆಮಿ ಅಧಕ್ಷ ಸಾಧುಕೋಕಿಲ ಭಾಗವಹಿಸಲಿದ್ದಾರೆ. ನಾಟಕೋತ್ಸವದ ಅಧಿಕೃತ ಉದ್ಘಾಟನೆಯನ್ನು ಅಂದು ಸಂಜೆ 5:30ಕ್ಕೆ ವನರಂಗದಲ್ಲಿ ಹಮ್ಮಿಕೊಳ್ಳಲಾಗಿದ್ದು, ಚಲನಚಿತ್ರನಟ, ರಂಗಕರ್ಮಿ ಅತುಲ್ ಕುಲಕರ್ಣಿ ನೆರವೇರಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಭಾಗವಹಿಸಲಿದ್ದಾರೆ. ಕರಕುಶಲ ಮಳಿಗೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಉದ್ಘಾಟಿಸಲಿದ್ದು, ಸಂಸದ ಯದುವೀರ ಒಡೆಯರ್, ಶಾಸಕ ಹರೀಶ್‌ ಗೌಡ ಪಾಲ್ಗೊಳ್ಳಲಿದ್ದಾರೆ. ಜ.16ರಂದು ಸಂಜೆ 6ಕ್ಕೆ ಕಲಾಮಂದಿರದಲ್ಲಿ ನಡೆಯುವ ಮಕ್ಕಳ ನಾಟಕೋತ್ಸವವನ್ನು ಬಹುಭಾಷಾ ನಟ ಪ್ರಕಾಶ್ ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

22 ನಾಟಕಗಳ ಪ್ರದರ್ಶನ

ಈ ಬಾರಿಯ ಬಹುರೂಪಿ ನಾಟಕೋತ್ಸವದಲ್ಲಿ ತೆಲಂಗಾಣ, ಮುಂಬೈ, ಪಾಂಡಿಚೆರಿ, ಮಧ್ಯಪ್ರದೇಶ, ಕೇರಳ, ಅಸ್ಸಾಂ ರಾಜ್ಯಗಳ 2 ನಾಟಕಗಳು ಹಾಗೂ ಕನ್ನಡ ಭಾಷೆಯ 13 ನಾಟಕಗಳು ಮತ್ತು ಇಂಗ್ಲಿಷ್ ಭಾಷೆಯ 2 ನಾಟಕಗಳು ಸೇರಿದಂತೆ ಒಟ್ಟು 22 ನಾಟಕಗಳು ಪ್ರದರ್ಶನಗೊಳ್ಳುವುದರೊಂದಿಗೆ, ಒಂದು ಯಕ್ಷಗಾನ ಪ್ರಸಂಗವು ನಡೆಯಲಿದ್ದು, ಭೂಮಿಗೀತ, ವನರಂಗ, ಕಲಾಮಂದಿರ ಮತ್ತು ಕಿರುರಂಗಮಂದಿರ ವೇದಿಕೆಗಳಲ್ಲಿ ಪ್ರದರ್ಶನಗೊಳ್ಳಲಿವೆ. ಇದರ ಜೊತೆಗೆ ವಿವಿಧ ಜಿಲ್ಲೆಗಳ ಜಾನಪದ ಕಲಾತಂಡಗಳು ಈ ಬಾರಿಯೂ ಕಿಂದರಜೋಗಿ ಆವರಣದ ವೇದಿಕೆಯಲ್ಲಿ ಪ್ರದರ್ಶನ ನೀಡಲಿವೆ ಎಂದು ಆಯೋಜಕರು ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+