ನಾಳೆಯಿಂದಲೇ ಮತದಾನ ಆರಂಭ: ಹೇಗಿರಲಿದೆ ಬ್ಯಾಲೆಟ್ ಪೇಪರ್ ವೋಟಿಂಗ್?

ಮೈಸೂರು, ಏಪ್ರಿಲ್‌ 28: 80 ವರ್ಷ ಮೇಲ್ಪಟ್ಟ ಹಾಗೂ ವಿಶೇಷಚೇತನ ಮತದಾರರಿಗೆ ಏ.29ರಿಂದ ಮೇ 6ರವರೆಗೆ ಮನೆ ಮನೆಗೆ ತೆರಳಿ ಬ್ಯಾಲೆಟ್ ಪೇಪರ್ ನೀಡಿ ಮತದಾನ ಮಾಡಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು.

ಮೈಸೂರು ವಿಶ್ವ ವಿದ್ಯಾಲಯದ ಸೆನೆಟ್ ಭವನದಲ್ಲಿ ಹಮ್ಮಿಕೊಂಡಿದ್ದ ಸೆಕ್ಟರ್ ಅಧಿಕಾರಿಗಳು ಹಾಗೂ ಮತದಾನ ಪ್ರಕ್ರಿಯೆಯ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ 12ಡಿ ಅಡಿ ಅರ್ಜಿ ಸಲ್ಲಿಸಿರುವವರ ಮನೆ ಮನೆಗೆ ತೆರಳಿ ಅಧಿಕಾರಿಗಳು ಪೋಸ್ಟಲ್ ಬ್ಯಾಲೆಟ್ ಮೂಲಕ ಮತದಾನ ಮಾಡಿಸುತ್ತಾರೆ. ಈ ಸಂದರ್ಭದಲ್ಲಿ ಮತ ಯಾರಿಗೆ ಚಲಾಯಿಸುತ್ತಾರೆ ಎಂಬುದನ್ನು ಹೊರತುಪಡಿಸಿ ಉಳಿದ ಎಲ್ಲಾ ಪ್ರಕ್ರಿಯೆಗಳನ್ನು ವಿಡಿಯೋ ಮಾಡಲಾಗುವುದು ಎಂದರು.

Ballot Paper Voting Starts From Tomorrow

ಮತದಾನ ಮಾಡಿಸಲು ಆರ್.ಒ.ಗಳು ರೂಟ್ ಮ್ಯಾಪ್ ಹಾಗೂ ನಿಗದಿತ ಸಮಯ ಹಾಗೂ ದಿನಾಂಕವನ್ನು ನೀಡುವರು ಅ ಸಮಯದಲ್ಲಿ ನಿರ್ದಿಷ್ಟ ವಿಳಾಸಗಳಿಗೆ ತೆರಳಿ ಮತದಾನವನ್ನು ಬ್ಯಾಲೆಟ್ ಪೇಪರ್‌ನಲ್ಲಿ ಪಡೆಯಬೇಕು. ಸೆಕ್ಟರ್ ಅಧಿಕಾರಿಗಳು ಮತದಾನ ಪ್ರಕ್ರಿಯಲ್ಲಿ ತೊಡಗಿರುವ ಅಧಿಕಾರಿಗಳಿಗೆ ರೂಟ್ ಮ್ಯಾಪ್ ಪ್ರಕಾರ ಮಾಹಿತಿಯನ್ನು ನೀಡಬೇಕು. ತಂಡದಲ್ಲಿ ಪ್ರಿಸೈಡಿಂಗ್ ಅಧಿಕಾರಿಗಳು, ಮೈಕ್ರೋ ಅಬ್ಸರ್ವರ್ಸ್‌ಘಿ, ಪೋಲಿಂಗ್ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ವಿಡಿಯೋ ಗ್ರಾರ್ ಹಾಗೂ ಗ್ರೂಪ್ ಡಿ ಸಿಬ್ಬಂದಿ ಭಾಗವಹಿಸುತ್ತಾರೆ ಎಂದು ತಿಳಿಸಿದರು.

ಪೋಸ್ಟಲ್ ಬ್ಯಾಲೆಟ್ ಮತದಾನ ಸಂದರ್ಭದಲ್ಲಿ ಅಭ್ಯರ್ಥಿಗಳು ತಮ್ಮ ಏಜೆಂಟ್‌ಗಳನ್ನು ನೇಮಿಸಿಕೊಳ್ಳಲು ಅವಕಾಶವಿರುತ್ತದೆ. ಈ ಸಂಬಂಧ ತಮ್ಮ ಏಜೆಂಟ್‌ಗಳ ವಿವರವನ್ನು ಆರ್.ಒ ಗಳಿಗೆ ನೀಡಿರಬೇಕು. ಆರ್.ಒಗಳಿಂದ ದೃಢೀಕರಿಸಲ್ಪಟ್ಟ ಏಜೆಂಟರ್‌ಗಳು ಮಾತ್ರ ಬ್ಯಾಲೆಟ್ ಮತದಾನ ಪಡೆಯುವ ಸಂದರ್ಭದಲ್ಲಿ ಉಪಸ್ಥಿತರಿರಲು ಅವಕಾಶವಿರುತ್ತದೆ ಎಂದರು.

ಬ್ಯಾಲೆಟ್ ಮತದಾನದ ವೇಳೆ ಯಾವುದೇ ವ್ಯಕ್ತಿ ಪ್ರಭಾವ ಬೀರಲು ಅವಕಾಶ ಇರಬಾರದು. ಮತದಾನ ಮಾಡುವ ವ್ಯಕ್ತಿ ಅಂಧರಾಗಿದ್ದರೆ ಅಥವಾ ಹಾಸಿಗೆಯ ಮೇಲಿದ್ದು ಅಸಕ್ತರಾಗಿದ್ದರೆ ಅಂತಹವರು 18 ವರ್ಷ ತುಂಬಿದ ಒಬ್ಬರು ವೋಟಿಂಗ್ ಅಸಿಸ್ಟೆಂಟ್ ಅನ್ನು ನೇಮಿಸಿಕೊಳ್ಳಲು ಅವಕಾಶವಿದೆ. ಒಬ್ಬ ವೋಟಿಂಗ್ ಅಸಿಸ್ಟೆಂಟ್ ಒಬ್ಬರಿಗೆ ಮಾತ್ರ ಸಹಾಯಕರಾಗಿ ನೇಮಕವಾಗಬಹುದು ಎಂದು ಹೇಳಿದರು.

Ballot Paper Voting Starts From Tomorrow

ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿರುವ ಪ್ರತಿಯೊಬ್ಬರು ಯಾವುದೇ ಲೋಪವಾಗದಂತೆ ಕರ್ತವ್ಯ ನಿರ್ವಹಿಸಿ, ತಮಗೆ ಯಾವುದೇ ಅನುಮಾನಗಳಿದ್ದರೆ ಕೇಳಿ ಬಗೆಹರಿಸಿಕೊಳ್ಳಿ, ಗಡಿಬಿಡಿಯಲ್ಲಿ ತೊಂದರೆ ತಂದುಕೊಳ್ಳಬೇಡಿ. ವಿಷಯವನ್ನು ಪೂರ್ಣವಾಗಿ ಅರ್ಥಮಾಡಿಕೊಂಡು ಕಾರ್ಯನಿರ್ವಹಿಸಿ ಎಂದು ಸಲಹೆ ನೀಡಿದರು.

ಸಭೆಯಲ್ಲಿ ಚುನಾವಣಾ ವೀಕ್ಷಕರಾದ ರಾಮ್ ಪ್ರತಾಪ್ ಸಿಂಗ್ ಜೊಡನ್, ಅಪರ ಜಿಲ್ಲಾಧಿಕಾರಿ ಕವಿತಾ ರಾಜರಾಂ ಸೇರಿದಂತೆ ಸೆಕ್ಟರ್ ಅಧಿಕಾರಿಗಳು, ಪ್ರಿಸೈಡಿಂಗ್ ಅಧಿಕಾರಿಗಳು ಹಾಗೂ ಪೋಲಿಂಗ್ ಅಧಿಕಾರಿಗಳು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+