ಸಂಸದ ಶ್ರೀರಾಮಲು ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ
ಬೆಂಗಳೂರು, ಸೆ. 20: 2.98 ಕೋಟಿ ರೂಪಾಯಿ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಬಳ್ಳಾರಿ ಸಂಸದ ಶ್ರೀರಾಮುಲು ವಿರುದ್ಧ ಬೆಂಗಳೂರಿನ 13ನೇ ಎಸಿಎಂಎಂ ನ್ಯಾಯಾಲಯ ಬಂಧನ ವಾರೆಂಟ್ ಜಾರಿ ಮಾಡಿದೆ.
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಬಾರಿ ಕೋರ್ಟ್ ನೋಟಿಸ್ ಜಾರಿ ಮಾಡಿದ್ದರೂ ಶ್ರೀರಾಮುಲು ಹಾಜರಾಗದ ಹಿನ್ನೆಲೆಯಲ್ಲಿ ಕೋರ್ಟ್ ವಾರೆಂಟ್ ಜಾರಿ ಮಾಡಲಾಗಿದೆ.(ಬಳ್ಳಾರಿ ಸೋಲಿನ ಹೊಣೆಯನ್ನು ನಾನು ಹೊರುತ್ತೇನೆ)

ಏನಿದು ಪ್ರಕರಣ
ವರ್ಷದ ಹಿಂದೆ ಬಿಎಸ್‌ಆರ್ ಪಕ್ಷ ಕಟ್ಟಿ ವಿಧಾನಸಭಾ ಚುನಾವಣೆ ಎದುರಿಸಿದ್ದ ಶ್ರೀರಾಮಲು ಹಣ ಪಡೆದು ವಂಚಿಸಿದ್ದಾರೆ ಎಂಬುದೇ ಪ್ರಕರಣದ ಪ್ರಮುಖ ಅಂಶ. ಹಣ ಪಡೆದು ಶ್ರೀರಾಮಲು ವಂಚಿಸಿದ್ದಾರೆ ಎಂದು ಮೈಸೂರಿನ ಸೋಮಣ್ಣ ಎಂಬುವರು ಶ್ರೀರಾಮುಲು ವಿರುದ್ಧ ಚೆಕ್ ಬೌನ್ಸ್ ದೂರು ದಾಖಲಿಸಿದ್ದರು.












Click it and Unblock the Notifications