ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತಾಯಿ ಚಾಮುಂಡಿ ಬಳಿ ಯತ್ನಾಳ್ ಬೇಡಿಕೊಂಡಿದ್ದೇನು?

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜುಲೈ 05; "ರಾಜ್ಯವನ್ನು ಲೂಟಿ ಮಾಡುತ್ತಿರುವ ದುಷ್ಟರ ಸಂಹಾರ ಆಗಬೇಕು" ಎನ್ನುವ ಮೂಲಕ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವಿರುದ್ಧ ಮತ್ತೊಮ್ಮೆ ಪರೋಕ್ಷ ವಾಗ್ದಾಳಿ ನಡೆಸಿದರು.

ಸೋಮವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. "ಅನ್‌ಲಾಕ್ ಹಿನ್ನಲೆಯಲ್ಲಿ ಚಾಮುಂಡಿ ದೇವಿಯ ದರ್ಶನಕ್ಕೆ ಬಂದಿದ್ದೇನೆ. ದುಷ್ಟರ ಸಂಹಾರ ಮಾಡು ಅಂತ ತಾಯಿ ಬಳಿ ಬೇಡಿಕೊಂಡಿದ್ದೇನೆ" ಎಂದರು.

ಮುಗಿದಿಲ್ಲ ಬಿಜೆಪಿ ಬಿಕ್ಕಟ್ಟು; ಸಿಪಿ ಯೋಗೀಶ್ವರ್, ಯತ್ನಾಳ್ ಭೇಟಿ! ಮುಗಿದಿಲ್ಲ ಬಿಜೆಪಿ ಬಿಕ್ಕಟ್ಟು; ಸಿಪಿ ಯೋಗೀಶ್ವರ್, ಯತ್ನಾಳ್ ಭೇಟಿ!

"ಯಾರು ಅಪಾರ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೋ, ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೋ, ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೋ ಅವರೆಲ್ಲರೂ ದುಷ್ಟರು. ಅತಿ ಶೀರ್ಘದಲ್ಲೇ ದುಷ್ಟ ಸಂಹಾರ ಆಗುವ ವಿಶ್ವಾಸವೂ ಇದೆ" ಎಂದು ವಾಗ್ದಾಳಿ ನಡೆಸಿದರು.

ಯತ್ನಾಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಆಯನೂರು ಮಂಜುನಾಥ್ಯತ್ನಾಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಆಯನೂರು ಮಂಜುನಾಥ್

Basanagouda Patil Yatnal Visits Chamundeshwari Temple

ನಾಯಕತ್ವ ಬದಲಾವಣೆ ಬಗ್ಗೆ ಮತ್ತೊಮ್ಮೆ ಪ್ರಸ್ತಾಪಿಸಿ, "ಕೆಟ್ಟವರೊಂದಿಗೆ ಒಳ್ಳೆಯವರೂ ಸೇರಿಕೊಂಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಬದಲಾವಣೆ ವಿಳಂಬ ಆಗುತ್ತಿದೆ. ಕುರುಕ್ಷೇತ್ರ ಯುದ್ಧದಲ್ಲಿ ಕೌರವರೊಂದಿಗೆ ಭೀಷ್ಮ, ದ್ರೋಣಾಚಾರ್ಯರಂತ ಒಳ್ಳೆಯವರೂ ಇದ್ದರು. ಕೆಲವು ಸಂದರ್ಭದಲ್ಲಿ ಹೀಗೆಲ್ಲ ಆಗುತ್ತೆ. ಆದರೆ ದುಷ್ಟ ಸಂಹಾರ ಆಗಲೇಬೇಕಲ್ವಾ?" ಎಂದು ಪ್ರಶ್ನಿಸಿದರು.

 ವಿಜಯೇಂದ್ರ ದೆಹಲಿ ಭೇಟಿಯ ಹಿಂದಿನ ರಹಸ್ಯ ಬಿಚ್ಚಿಟ್ಟ ಯತ್ನಾಳ್ ವಿಜಯೇಂದ್ರ ದೆಹಲಿ ಭೇಟಿಯ ಹಿಂದಿನ ರಹಸ್ಯ ಬಿಚ್ಚಿಟ್ಟ ಯತ್ನಾಳ್

"ಪಕ್ಷದ ಹೈಕಮಾಂಡ್ ಕೂಡ ಮುಖ್ಯಮಂತ್ರಿ ಬದಲಾವಣೆಗೆ ಪರಿಶೀಲನೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 15 ನೂತನ ಸಿಎಂ ಧ್ವಜಾರೋಹಣ ಚರ್ಚೆ ವಿಚಾರ. ಅಲ್ಲಿವರೆಗೂ ಯಾಕೆ ಮುಂದುವರಿಸಬೇಕು ಹಾಗೂ ಶೀಘ್ರದಲ್ಲೇ ಸಿಎಂ ಬದಲಾವಣೆ ಮಾಡಬೇಕು"‌ ಎಂದರು.

ಬಿ‌. ವೈ. ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ ಯತ್ನಾಳ್, "ಸಿಎಂ ನಿವಾಸ ಕಾವೇರಿ ಹಿಂಭಾಗದಲ್ಲಿ ಗೆಸ್ಟ್‌ಗೌಸ್‌ ಇದೆ. ಇವರ ಎಲ್ಲ ಡೀಲ್‌ಗಳೂ ಅಲ್ಲೇ ನಡೆಯೋದು. ದಿನಕ್ಕೆ ನೂರು ಕೋಟಿ ರೂ. ಲೂಟಿ ಹೊಡೆಯುತ್ತಿದ್ದಾರೆ. ಹೀಗಿದ್ದರೂ ಸಿಸಿಬಿ ಪೊಲೀಸರು ಅಲ್ಲಿಗೆ ಯಾಕೆ ರೈಡ್ ಮಾಡಲ್ಲ? ಎಂದು ಕೇಳಿದರು.

"ದಕ್ಷಿಣೆ ಕಾಸಿಗೆ ಆಸೆ ಬಿದ್ದು ಕೆಲವು ಮಠಾಧೀಶರು ಸಿಎಂ ಪರ ಮಾತನಾಡುತ್ತಿದ್ದಾರೆ. ಲವ್ ಜಿಹಾದ್‌ ತಡೆಯಲು ಮಠಾಧೀಶರು ಮುಂದಾಗಬೇಕು. ಕೆಟ್ಟವರಿಗೆ ಬುದ್ದಿ ಹೇಳುವ ಕೆಲಸ ಮಾಡಬೇಕು. ಅದನ್ನು ಬಿಟ್ಟು ಸಿಎಂ ಬದಲಾವಣೆ ಮಾಡಿದರೆ ಬೀದಿಗೆ ಬರ್ತೀವಿ ಅನ್ನೋದು ಸರಿಯಲ್ಲ. ಮುಖ್ಯಮಂತ್ರಿ ಕುಟುಂಬದಿಂದ ಲಿಂಗಾಯತ ಸಮಾಜಕ್ಕೆ ಕೆಟ್ಟ ಹೆಸರು ಬಂದಿದೆ" ಎಂದು ದೂರಿದರು.

"ಭ್ರಷ್ಟರ ಪರವಾಗಿ ಮಠಾಧೀಶರು ಮಾತನಾಡುತ್ತಿದ್ದು, ನಿಮಗೆ ಅಷ್ಟೊಂದು ರಾಜಕೀಯ ಹುಚ್ಚು ಇದ್ರೆ ಖಾವಿ ತೆಗೆದು ಖಾದಿ ಧರಿಸಿ ಬನ್ನಿ" ಎಂದು ಶಾಸಕ ಯತ್ನಾಳ್ ವಾಗ್ದಾಳಿ ನಡೆಸಿದರು.

English summary
Karnataka BJP rebel leader Basanagouda Patil Yatnal visited Mysuru Chamundeshwari temple. Temple open for devotees from Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X