ಸಿಎಂ ಆಗಿ ಮೊದಲ ಬಾರಿಗೆ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಸವರಾಜ ಬೊಮ್ಮಾಯಿ
ಮೈಸೂರು, ನವೆಂಬರ್ 2: ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ಬಸವರಾಜ ಬೊಮ್ಮಾಯಿ ಮಂಗಳವಾರ ಮೈಸೂರು ಜಿಲ್ಲೆಯ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದರು.
ಮೈಸೂರು ಜಿಲ್ಲೆ ಎಚ್.ಡಿ. ಕೋಟೆ ತಾಲ್ಲೂಕಿನ ಕಬಿನಿ ಗ್ರಾಮಕ್ಕೆ ತೆರಳಿ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿ ರಾಜ್ಯದಲ್ಲಿ ಎಲ್ಲಾ ಜಲಾಶಯಗಳು ಭರ್ತಿಯಾಗಿ ಜನ ಜಾನುವಾರುಗಳು ಸಮೃದ್ಧಿಯಾಗಲಿ ಎಂದು ಹಾರೈಸಿದರು.
ಮುಖ್ಯಮಂತ್ರಿಗಳ ಜೊತೆಯಲ್ಲಿ ನೀರಾವರಿ ಸಚಿವ ಗೋವಿಂದ ಕಾರಜೋಳ, ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಸ್ಥಳೀಯ ಶಾಸಕ ಅನಿಲ್ ಚಿಕ್ಕಮಾದು ಸಹ ಮುಖ್ಯಮಂತ್ರಿಗಳ ಜೊತೆಯಲ್ಲಿ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿ ನಮಿಸಿದರು.

ಈ ಎರಡು ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶದಿಂದ ರಾಜಕೀಯ ಧೃವೀಕರಣ ಆಗಲ್ಲ. ನಂಜನಗೂಡು ಮತ್ತು ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಏನಾಯಿತು ಎಂದು ನೋಡಿಲ್ಲವಾ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ನಿಧನದ ಬಗ್ಗೆ ಮಾತನಾಡಿದ ಅವರು, ಪುನೀತ್ ರಾಜ್‌ಕುಮಾರ್ ಎಲ್ಲಾ ಗೌರವಕ್ಕೂ ಅರ್ಹರು. ಅವರ ಬಗ್ಗೆ ನಮಗೆ ಅಪಾರ ಗೌರವವಿದೆ. ಸರ್ಕಾರ ಸಮಯ, ಸಂದರ್ಭ ನೋಡಿಕೊಂಡು ನಮ್ಮ ಪ್ರಸ್ತಾವವನ್ನು ಸಿದ್ದಪಡಿಸುತ್ತೇವೆ ಎಂದು ಪುನೀತ್ ರಾಜ್‌ಕುಮಾರ್‌ಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್‌ಗೆ ತಿರುಗೇಟು ನೀಡಿದರು.
ಸಿದ್ದರಾಮಯ್ಯ ತಮ್ಮ ಪ್ರಸ್ತಾವ ಸಲ್ಲಿಸಲಿ, ನಾವು ಎಲ್ಲವನ್ನೂ ಪರಿಶೀಲನೆ ಮಾಡುತ್ತೇವೆ. ಸರ್ಕಾರ ಸಮಯ, ಸಂದರ್ಭ ನೋಡಿಕೊಂಡು ತಮ್ಮ ಪ್ರಸ್ತಾವ ಸಿದ್ಧಪಡಿಸುತ್ತದೆ ಎಂದು ಹೇಳಿದರು. ಎಲ್ಲದಕ್ಕೂ ಒಂದು ನಿಯಮ ಇರುತ್ತದೆ. ಅದರಡಿಯಲ್ಲಿ ನಾವು ಸಾಗುತ್ತೇವೆ. ಪುನೀತ್ ಎಲ್ಲಾ ಗೌರವಕ್ಕೂ ಅರ್ಹರು, ಅವರಿಗೆ ಎಂತಹ ಪ್ರಶಸ್ತಿ ನೀಡಲು ಸರ್ವಸಮ್ಮತ ಒಪ್ಪಿಗೆ ಇದೆ ಎಂದು ಹೇಳಿದರು.
ಇದಕ್ಕೂ ಮುನ್ನ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಕಬಿನಿಗೆ ಆಗಮಿಸಿದ ಮುಖ್ಯಮಂತ್ರಿಗಳು ಅಲ್ಲಿಂದ ಜಲಾಶಯದವರೆಗೆ ಕಾರಿನಲ್ಲಿ ತೆರಳಿದರು. ನಂತರ ಸಚಿವ ಸಂಪುಟದ ಸದಸ್ಯರೊಂದಿಗೆ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.
ಉಪ ಚುನಾವಣೆ ಫಲಿತಾಂಶ:
ತೀವ್ರ ಕುತೂಹಲ ಕೆರಳಿಸಿದ್ದ ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಭರ್ಜರಿ ಗೆಲುವು ಸಾಧಿಸಿದ್ದಾರೆ.
ಬಿಜೆಪಿಯ ರಮೇಶ್ ಭೂಸನೂರಗೆ 93,865 ಮತ, ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿಗೆ 62,680 ಮತ ಹಾಗೂ ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿಗೆ 4,353 ಮತ ದೊರೆತಿದ್ದು, 31,185 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಗೆ ಜಯ ಲಭಿಸಿದೆ.
ಇನ್ನು ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಜಯ ಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ್ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ತವರು ಜಿಲ್ಲೆಯಲ್ಲಿ ಮುಖಭಂಗ ಅನುಭವಿಸಿದ್ದಾರೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications