ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಎಂ ಆಗಿ ಮೊದಲ ಬಾರಿಗೆ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಸವರಾಜ ಬೊಮ್ಮಾಯಿ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ನವೆಂಬರ್ 2: ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ಬಸವರಾಜ ಬೊಮ್ಮಾಯಿ ಮಂಗಳವಾರ ಮೈಸೂರು ಜಿಲ್ಲೆಯ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದರು.

ಮೈಸೂರು ಜಿಲ್ಲೆ ಎಚ್.ಡಿ‌. ಕೋಟೆ ತಾಲ್ಲೂಕಿನ ಕಬಿನಿ ಗ್ರಾಮಕ್ಕೆ ತೆರಳಿ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿ ರಾಜ್ಯದಲ್ಲಿ ಎಲ್ಲಾ ಜಲಾಶಯಗಳು ಭರ್ತಿಯಾಗಿ ಜನ ಜಾನುವಾರುಗಳು ಸಮೃದ್ಧಿಯಾಗಲಿ ಎಂದು ಹಾರೈಸಿದರು.

ಮುಖ್ಯಮಂತ್ರಿಗಳ ಜೊತೆಯಲ್ಲಿ ನೀರಾವರಿ ಸಚಿವ ಗೋವಿಂದ ಕಾರಜೋಳ, ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಸ್ಥಳೀಯ ಶಾಸಕ ಅನಿಲ್ ಚಿಕ್ಕಮಾದು ಸಹ ಮುಖ್ಯಮಂತ್ರಿಗಳ ಜೊತೆಯಲ್ಲಿ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿ ನಮಿಸಿದರು.

Mysuru: Basavaraja Bommai Offered 1st Baagina To Kabini Reservoir As CM

ಈ ಎರಡು ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶದಿಂದ ರಾಜಕೀಯ ಧೃವೀಕರಣ ಆಗಲ್ಲ. ನಂಜನಗೂಡು ಮತ್ತು ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಏನಾಯಿತು ಎಂದು ನೋಡಿಲ್ಲವಾ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ನಿಧನದ ಬಗ್ಗೆ ಮಾತನಾಡಿದ ಅವರು, ಪುನೀತ್ ರಾಜ್‌ಕುಮಾರ್ ಎಲ್ಲಾ ಗೌರವಕ್ಕೂ ಅರ್ಹರು. ಅವರ ಬಗ್ಗೆ ನಮಗೆ ಅಪಾರ ಗೌರವವಿದೆ. ಸರ್ಕಾರ ಸಮಯ, ಸಂದರ್ಭ ನೋಡಿಕೊಂಡು ನಮ್ಮ ಪ್ರಸ್ತಾವವನ್ನು ಸಿದ್ದಪಡಿಸುತ್ತೇವೆ ಎಂದು ಪುನೀತ್ ರಾಜ್‌ಕುಮಾರ್‌ಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್‌ಗೆ ತಿರುಗೇಟು ನೀಡಿದರು.

ಸಿದ್ದರಾಮಯ್ಯ ತಮ್ಮ ಪ್ರಸ್ತಾವ ಸಲ್ಲಿಸಲಿ, ನಾವು ಎಲ್ಲವನ್ನೂ ಪರಿಶೀಲನೆ ಮಾಡುತ್ತೇವೆ. ಸರ್ಕಾರ ಸಮಯ, ಸಂದರ್ಭ ನೋಡಿಕೊಂಡು ತಮ್ಮ ಪ್ರಸ್ತಾವ ಸಿದ್ಧಪಡಿಸುತ್ತದೆ ಎಂದು ಹೇಳಿದರು. ಎಲ್ಲದಕ್ಕೂ ಒಂದು ನಿಯಮ ಇರುತ್ತದೆ. ಅದರಡಿಯಲ್ಲಿ ನಾವು ಸಾಗುತ್ತೇವೆ. ಪುನೀತ್ ಎಲ್ಲಾ ಗೌರವಕ್ಕೂ ಅರ್ಹರು, ಅವರಿಗೆ ಎಂತಹ ಪ್ರಶಸ್ತಿ ನೀಡಲು ಸರ್ವಸಮ್ಮತ ಒಪ್ಪಿಗೆ ಇದೆ ಎಂದು ಹೇಳಿದರು.

ಇದಕ್ಕೂ ಮುನ್ನ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಕಬಿನಿಗೆ ಆಗಮಿಸಿದ ಮುಖ್ಯಮಂತ್ರಿಗಳು ಅಲ್ಲಿಂದ ಜಲಾಶಯದವರೆಗೆ ಕಾರಿನಲ್ಲಿ ತೆರಳಿದರು. ನಂತರ ಸಚಿವ ಸಂಪುಟದ ಸದಸ್ಯರೊಂದಿಗೆ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.

ಉಪ ಚುನಾವಣೆ ಫಲಿತಾಂಶ:
ತೀವ್ರ ಕುತೂಹಲ ಕೆರಳಿಸಿದ್ದ ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಬಿಜೆಪಿಯ ರಮೇಶ್ ಭೂಸನೂರಗೆ 93,865 ಮತ, ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿಗೆ 62,680 ಮತ ಹಾಗೂ ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿಗೆ 4,353 ಮತ ದೊರೆತಿದ್ದು, 31,185 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಗೆ ಜಯ ಲಭಿಸಿದೆ.

ಇನ್ನು ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಜಯ ಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ್ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ತವರು ಜಿಲ್ಲೆಯಲ್ಲಿ ಮುಖಭಂಗ ಅನುಭವಿಸಿದ್ದಾರೆ.

English summary
Mysuru: Basavaraja Bommai offered 1st Baagina to Kabini Reservoir as Chief Minister.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X