BBC Documentry: ಸಿದ್ದರಾಮಯ್ಯವರು ಬಿಬಿಸಿ ಸಾಕ್ಷ್ಯಚಿತ್ರ ವಿರೋಧಿಸಬೇಕು: ಸಿಎಂ ಹೀಗೆ ಹೇಳಿದ್ದೇಕೆ?

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಕುರಿತಾದ ಬಿಬಿಸಿಯ ಸಾಕ್ಷ್ಯಚಿತ್ರ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಹಲವೆಡೆ ಸಂಚಲನ ಮೂಡಿಸಿತ್ತು. ಸಾಕ್ಷಚಿತ್ರದ ಪ್ರದರ್ಶನ ಬಗ್ಗೆ ಪರ ವಿರೋಧ ಚರ್ಚೆಗಳು, ಟೀಕೆಗಳು ಮುಂದುವರಿದಿವೆ. ಈ ಮಧ್ಯೆ ಮುಖ್ಯಮಂತ್ರಿಗಳು ವಿರೋಧ ಪಕ್ಷ ಕಾಂ

ಮೈಸೂರು, ಜನವರಿ 29: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಕುರಿತಾದ ಬಿಬಿಸಿಯ ಸಾಕ್ಷ್ಯಚಿತ್ರ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಹಲವೆಡೆ ಸಂಚಲನ ಮೂಡಿಸಿತ್ತು. ಸಾಕ್ಷಚಿತ್ರದ ಪ್ರದರ್ಶನ ಬಗ್ಗೆ ಪರ ವಿರೋಧ ಚರ್ಚೆಗಳು, ಟೀಕೆಗಳು ಮುಂದುವರಿದಿವೆ. ಈ ಮಧ್ಯೆ ಮುಖ್ಯಮಂತ್ರಿಗಳು ವಿರೋಧ ಪಕ್ಷ ಕಾಂಗ್ರೆಸ್ ಸಹ ಇದನ್ನು ವಿರೋಧಿಸಬೇಕು ಎಂದು ಹೇಳಿದ್ದಾರೆ.

ಭಾನುವಾರ ಮೈಸೂರಿನಲ್ಲಿ ಕಾರ್ಯಕ್ರಮವೊಂದರ ಪಾಲ್ಗೊಂಡು ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಸತ್ಯವನ್ನು ತಿರುಚಿ ಮಾಡಿರುವ ಬಿಬಿಸಿ ಸಾಕ್ಷ್ಯಚಿತ್ರವನ್ನೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರೂ ಸಹ ವಿರೋಧಿಸಬೇಕು.

BBC Documentry: Siddaramaiah should oppose the BBC documentary, says CM Bommai

ದೇಶದಲ್ಲಿ ಆಂತರಿಕವಾಗಿ ಭಿನ್ನಾಭಿಪ್ರಾಯಗಳು ಏನೇ ಇದ್ದರೂ ಸಹ, ದೇಶದ ಗೌರವದ ಪ್ರಶ್ನೆ ಬಂದಾಗ ನಾವೆಲ್ಲರೂ ಒಂದಾಗಬೇಕು. ಇಂತಹ ವಿಚಾರದಲ್ಲಿ ಅದರಲ್ಲೂ ಸತ್ಯವನ್ನು ತಿರುಚಿ ಮಾಡಿರುವ ಬಿಬಿಸಿ ಸಾಕ್ಷ್ಯಚಿತ್ರವನ್ನೂ ವಿರೋಧಿಸಬೇಕು ಎಂದು ಬಿಬಿಸಿ ಸಾಕ್ಷ್ಯ ಚಿತ್ರ ನಿರ್ಬಂಧ ಮಾಡುವ ಕುರಿತು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರ ಟ್ವೀಟ್ ಕುರಿತಂತೆ ಕೇಳಿದ ಪ್ರಶ್ನೆಗೆ ಅವರು ಹೀಗೆ ಪ್ರತಿಕ್ರಿಯೆ ನೀಡಿದರು.

ಸಾಕ್ಷ್ಯಚಿತ್ರ ವಿಚಾರ ಇದು ಇಡೀ ದೇಶದ ಗೌರವದ ಪ್ರಶ್ನೆ. ಉದ್ದೇಶಪೂರ್ವಕವಾಗಿ ಚರಿತ್ರೆ ಬದಲಾವಣೆ ಮಾಡಿ, ದೇಶದ ಚಾರಿತ್ರ್ಯ ಹರಣ ಮಾಡುವಾಗ ಜನ ಸಹಜವಾಗಿ ಪ್ರತಿಕ್ರಿಯೆ ನೀಡುತ್ತಾರೆ. ಸತ್ಯ ತಿರುಚಿ ಮಾಡಿರುವ ಈ ಸಾಕ್ಷ್ಯಚಿತ್ರವನ್ನು ಸಿದ್ದರಾಮಯ್ಯನವರೂ ವಿರೋಧ ಮಾಡಬೇಕು. ರಾಜಕೀಯವಾಗಿ ಭಿನ್ನಾಭಿಪ್ರಾಯಗಳು ಇರುವುದು ಸಹಜ. ಆದರೆ ದೇಶ ಗೌರವ ವಿಚಾರದಲ್ಲಿ ರಾಜಕೀಯ ಎಲ್ಲ ಬದಿಗಿಟ್ಟು ಎಲ್ಲರೂ ಒಂದಾಗಬೇಕು ಎಂದು ಬೊಮ್ಮಾಯಿ ಹೇಳಿದರು.

ಕಾಗಿನೆಲೆ ಶ್ರೀಗಳು ನಮ್ಮ ಗುರುಗಳು
ಕಾಗಿನೆಲೆ ಮಠದ ಈಶ್ವರಾನಂದಪುರಿ ಸ್ವಾಮೀಜಿ ಗುರುಗಳ ಕೈಯಲ್ಲಿದ್ದ ಮೈಕ್ ಕಿತ್ತುಕೊಳ್ಳುವ ಪ್ರಶ್ನೆ ಇಲ್ಲ. ಅವರು ನಮ್ಮ ಗುರುಗಳು. ಅವರು ಪ್ರಸ್ತಾಪಿಸಿದ ವಿಷಯಕ್ಕೆ ಮಾತ್ರವೇ ಪ್ರತಿಕ್ರಿಯೆ ನೀಡಿದ್ದೇನೆ. ಅದಾದ ಬಳಿಕ ಅವರೂ ಮಾತನಾಡಿದ್ದಾರೆ. ಈ ವೇಳೆ ವಿಶ್ವನಾಥ್ ಅವರು ಅಲ್ಲಿರಲಿಲ್ಲ ಎಂದು ಪ್ರಶ್ನೆಯೊಂದಕ್ಕೆ ಬೊಮ್ಮಾಯಿ ಉತ್ತರಿಸಿದರು.

BBC Documentry: Siddaramaiah should oppose the BBC documentary, says CM Bommai

ಏನಿದು ಸಾಕ್ಷ್ಯಚಿತ್ರ?
ಬ್ರೀಟಿಷ್ ಬ್ರಾಡ್‌ಕಾಸ್ಟಿಂಗ್ ಕಂಪನಿ (BBC) 2002ರಲ್ಲಿ ನಡೆದ ಗೋಧ್ರಾ ಗಲಭೆಯಲ್ಲಿ ಈಗಿನ ಪ್ರಧಾನಿ ನರೇಂದ್ರ ಮೋದಿಯವರು ಪಾತ್ರ ಕುರಿತು ಸಾಕ್ಷ್ಯಚಿತ್ರ ತಯಾರಿಸಿದೆ. ಇದರ ಪ್ರದರ್ಶನಕ್ಕೆ ಎಡಪಂಥಿಯ ಬೆಂಬಲಿಗರು ಸೇರಿದಂತೆ ದೆಹಲಿ ಜವಾಹರ್ ಲಾಲ್ ನೆಹರು (JNU), ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯ ಸೇರಿದಂತೆ ಪ್ರತಿಷ್ಠಿತ ಕಾಲೇಜುಗಳಲ್ಲಿ ಸ್ಕ್ರಿನಿಂಗ್ ವ್ಯವಸ್ಥೆ ಮಾಡಿಕೊಂಡಿದ್ದರು. ಹಲವು ಬಾರಿ ಸಾಕ್ಷ್ಯಚಿತ್ರ ಪ್ರದರ್ಶಿಸದಂತೆ ಎಚ್ಚರಿಕೆ ನೀಡಿದ್ದರೂ ಸಹ ಜವಾಹರ್ ಲಾಲ್ ನೆಹರು ಪ್ರದರ್ಶನಕ್ಕೆ ಮುಂದಾಗಿತ್ತು. ಈ ವೇಳೆ ವಿದ್ಯುತ್ ಸ್ಥಗಿತಗೊಳಿಸಲಾಗಿತ್ತು.
ಇದಾದ ಬಳಿಕ ದೆಹಲಿಯಲ್ಲಿನ ಜಾಮೀಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 12ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಯಿತು. ಸಾಕ್ಷ್ಯಚಿತ್ರದ ಪ್ರದರ್ಶನಕ್ಕೆ ಒತ್ತಾಯಿಸಿ ಬಿಜೆಪಿ ವಿರುದ್ಧ ಧಿಕ್ಕಾರದ ಘೋಷಣೆಗಳು ಮೊಳಗಿದವು. ಅನೇಕ ಕಡೆ ಪ್ರತಿಭಟನೆ ನಡೆದವು. ಸದ್ಯ ಈ ವಿಚಾರ ಬೂದಿ ಮುಚ್ಚಿದ ಕೆಂಡಂತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+