ರಾಜ್ಯ ರಾಜಕಾರಣ: ಚಾನ್ಸ್ ಕೊಟ್ಟರೆ ನೋಡೋಣ ಎಂದ ಮಲ್ಲಿಕಾರ್ಜುನ ಖರ್ಗೆ
ಮೈಸೂರು, ಜುಲೈ 23: ಚುನಾವಣಾ ಫಲಿತಾಂಶಕ್ಕೆ ಮುನ್ನವೇ ನಾನೇ ಸಿಎಂ ಎಂದು ಹೇಳಿಕೊಂಡು ತಿರುಗಾಡುವುದು ಸರಿಯಲ್ಲ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಚಾಟಿ ಬೀಸಿದ್ದಾರೆ.
ರಾಜ್ಯದ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಸ್ಥಾನದ ಕುರಿತ ಹೇಳಿಕೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ಸಿಎಂ ಗಾದಿಗೆ ಪೈಪೋಟಿ ಆರಂಭವಾಗಿದೆ. ಇದು ದೊಡ್ಡಮಟ್ಟದ ಚರ್ಚೆಗೆ ಕಾರಣವಾಗಿರುವುದರಿಂದ ಮೈಸೂರಿಗೆ ಆಗಮಿಸಿದ್ದ ಖರ್ಗೆ ಈ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
"ಸಿಎಂ ಯಾರಗಾಬೇಕು ಎಂಬುದು ಮೈಸೂರಿನಲ್ಲೂ, ಬೆಂಗಳೂರಿನಲ್ಲೂ ಕಲಬುರಗಿಯಲ್ಲೂ ತೀರ್ಮಾನವಾಗುವುದಿಲ್ಲ. ಪಕ್ಷದ ಹೈ ಕಮಾಂಡ್ ಅದನ್ನ ತೀರ್ಮಾನ ಮಾಡುತ್ತದೆ. ಚುನಾವಣೆ ಫಲಿತಾಂಶಕ್ಕೆ ಮುನ್ನವೇ ನಾನು ಸಿಎಂ.. ನಾನು ಸಿಎಂ ಎಂದು ಹೇಳುವುದು ಸರಿಯಲ್ಲ. ಅವತ್ತಿನ ರಾಜಕೀಯ ಪರಿಸ್ಥಿತಿ ಆಧಾರದ ಮೇಲೆ ಹೈ ಕಮಾಂಡ್ ಯಾರಿಗೆ ನಾಯಕತ್ವಕ್ಕೆ ಕೊಡಬೇಕು ಎಂಬುದನ್ನು ತೀರ್ಮಾನ ಮಾಡುತ್ತದೆ," ಎಂದರು.

ಕಾಂಗ್ರೆಸ್‌ನಲ್ಲಿ ಸಾಮೂಹಿಕ ನಾಯಕತ್ವ
ಕಾಂಗ್ರೆಸ್ ಯಾವಾಗಲೂ ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆ ಎದುರಿಸುತ್ತದೆ. ಈ ಬಾರಿ ಕೂಡ ವಿಶೇಷ ಏನು ಅಲ್ಲ. ಪ್ರತಿಬಾರಿಯೂ ನಾವು ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆಗೆ ಹೋಗುತ್ತೇವೆ. ಪಕ್ಷವನ್ನು ಅಧಿಕಾರಕ್ಕೆ ತರುವುದಷ್ಟೇ ನಮ್ಮ ಗುರಿ ಹಾಗೂ ಉದ್ದೇಶ. ಉಳಿದದ್ದು ಹೈಕಮಾಂಡ್ ನೋಡಿಕೊಳ್ಳುತ್ತದೆ. ಪಕ್ಷವನ್ನು ಅಧಿಕಾರಕ್ಕೆ ತರುವುದೇ ನಮ್ಮೆಲ್ಲರ ಉದ್ದೇಶ ಎಂದರು.
ರಾಜ್ಯ ರಾಜಕಾರಣಕ್ಕೆ ಖರ್ಗೆ ಮರಳುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಅವಕಾಶ ಕೊಟ್ಟರೆ ಬರುತ್ತೇನೆ. ಎಲ್ಲಾ ಸೇರಿ ಚಾನ್ಸ್ ಕೊಟ್ಟರೆ ನೋಡೋಣ ಎಂದು ತಿಳಿಸಿದರು.

ದೇಶಕ್ಕಾಗಿ ಮನೆಯವರನ್ನೇ ಕಳೆದುಕೊಂಡವರು
ಸೋನಿಯಾ ಗಾಂಧಿಗೆ ಇಡಿ ವಿಚಾರಣೆ ವಿಚಾರ ಕುರಿತು ಮಾತನಾಡಿದ ಅವರು, ಗಾಂಧಿ ಕುಟುಂಬವನ್ನು ವಿಚಾರಣೆಗೆ ಕರೆದ ಕೂಡಲೇ ನಾವು ಮಾನಸಿಕವಾಗಿ ಕುಗ್ಗುವುದಿಲ್ಲ. ಈ ದೇಶಕ್ಕಾಗಿ ಮನೆಯವರನ್ನೇ ಕಳೆದುಕೊಂಡವರು ಒಂದು ಕೋಟಿ ರೂ. ಅವ್ಯವಹಾರ ಮಾಡುತ್ತಾರ?,ಸ್ವಾತಂತ್ರ್ಯ ಹೋರಾಟ ಮಾಡಿ, ಚಳುವಳಿಗಳನ್ನ ತ್ಯಾಗ ಬಲಿದಾನ ಮಾಡಿರುವ ಪಕ್ಷ ನಮ್ಮದು. ಬಿಜೆಪಿಯವರು ಇಂತಹ ಕುಂಟು ನೆಪವೊಡ್ಡಿ

ಬಿಎಸ್‌ವೈ ನಿರ್ಧಾರ ವೈಯಕ್ತಿಕ
ಚುನಾವಣಾ ರಾಜಕಾರಣದಿಂದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನಿವೃತ್ತಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ ಖರ್ಗೆ, " ಎಲ್ಲರಿಗೂ ಅವರ ಅವರದ್ದೆ ಆದ ತೀರ್ಮಾನಗಳನ್ನ ತೆಗೆದುಕೊಳ್ಳುವ ಸ್ವತಂತ್ರ ಇರುತ್ತದೆ. ಅದು ಅವರ ವೈಯಕ್ತಿಕ ನಿರ್ಧಾರ. ಅದರ ಬಗ್ಗೆ ನಾನೇನು ಮಾತನಾಡಲ್ಲ. ನಾವು ಯಾರೇ ಇರಲಿ ಬಿಡಲಿ ದೇಶ ಅಂತೂ ಇರುತ್ತದೆ. ನಾನಿಲ್ಲ ಅಂದ್ರೆ ಇನ್ನೊಬ್ಬರು ಬರುತ್ತಾರೆ. ಹಾಗೇ ಯಡಿಯೂರಪ್ಪ ಯೋಚನೆ ಮಾಡಿರಬಹುದು " ಎಂದು ಹೇಳಿದರು. ಮಾನಸಿಕವಾಗಿ ಕುಗ್ಗಿಸಲು ಸಾಧ್ಯವಿಲ್ಲ. ತನ್ನ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಇಂತಹ ಗಿಮಿಕ್ ಗಳನ್ನ ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿದರು.

ಸೋನಿಯಾ ಗಾಂಧಿ ವಿಚಾರಣಗೆ ಖಂಡಿಸಿ ಪ್ರತಿಭಟನೆ
ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನು ಜಾರಿ ನಿರ್ದೇಶನಾಲಯದ (ಇಡಿ) ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್ ಹೋರಾಟ ನಡೆಸಿದ್ದಾರೆ. ರಾಜ್ಯದ ಜಿಲ್ಲಾ ವಿಭಾಗಗಳಲ್ಲಿ ಕಾಂಗ್ರೆಸ್ ನಾಯಕರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನಾ ಮೆರಣಿಗೆ ನಡೆದಿದ್ದು, ಬಿಜೆಪಿಯ ದ್ವೇಷದ ರಾಜಕಾರಣವನ್ನು ಖಂಡಿಸಿದ್ದಾರೆ.












Click it and Unblock the Notifications