Bengaluru Mysuru Expressway ಟೋಲ್ ಸಂಗ್ರಹ: ಬಿಜೆಪಿ ಮುಖಂಡ ಎಚ್‌.ವಿಶ್ವನಾಥ್‌ ನೇತೃತ್ವದಲ್ಲಿ ಪ್ರತಿಭಟನೆ

ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯ ಕಾಮಗಾರಿಯನ್ನು ಸಂಪೂರ್ಣವಾಗಿ ಪೂರ್ಣಗೊಳಿಸದೆ ಟೋಲ್ ಸಂಗ್ರಹಿಸುತ್ತಿರುವುದನ್ನು ವಿರೋಧಿಸಿ ಬಿಜೆಪಿ ಮುಖಂಡ ಎಚ್.ವಿಶ್ವನಾಥ್ ಕರೆ ನೀಡಿರುವ ಪ್ರತಿಭಟನೆಗೆ ನಾನಾ ಪಕ್ಷಗಳು ಸೇರಿದಂತೆ ಎಲ್ಲಾ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಮೈಸೂರು, ಮಾರ್ಚ್ 17: ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಟೋಲ್‌ ಸಂಗ್ರಹಿಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ದಿನೇ ದಿನೇ ಪ್ರತಿಭಟನೆಯ ಕಾವು ಹೆಚ್ಚಾಗುತ್ತಿದೆ. ಇಂದು( ಮಾರ್ಚ್‌ 17)ರಂದು ಮೈಸೂರಿಲ್ಲಿ ಪ್ರತಿಭಟನೆ ನಡೆಯಲಿದೆ.

ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯ ಕಾಮಗಾರಿಯನ್ನು ಸಂಪೂರ್ಣವಾಗಿ ಪೂರ್ಣಗೊಳಿಸದೆ ಟೋಲ್ ಸಂಗ್ರಹಿಸುತ್ತಿರುವುದನ್ನು ವಿರೋಧಿಸಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಕರೆ ನೀಡಿರುವ ಪ್ರತಿಭಟನೆಗೆ ನಾನಾ ಪಕ್ಷಗಳು ಸೇರಿದಂತೆ ಎಲ್ಲಾ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

Bengaluru Mysuru Expressway Toll Collection Against Protest In Mysuru

ಮೈಸೂರು ನಗರದ ಜಲದರ್ಶಿನಿಯಲ್ಲಿ ನಡೆದ ಸಭೆಯಲ್ಲಿ ಮೈಸೂರು ಜಿಲ್ಲಾ ಕಸಾಪ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ, ಕಟ್ಟಡ ಕಾರ್ಮಿಕರ ಸಂಘಟನೆ, ಮೈಸೂರು ಕನ್ನಡ ವೇದಿಕೆ, ಒಕ್ಕಲಿಗರ ವಿಕಾಸ ವೇದಿಕೆ ಸೇರಿದಂತೆ ನಾನಾ ಪಕ್ಷಗಳ ರಾಜಕೀಯ ಮುಖಂಡರು ಭಾಗವಹಿಸಿ ಬೆಂಬಲ ನೀಡಿ ಪ್ರತಿಭಟನೆಯಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದಾರೆ. ಮಾರ್ಚ್‌ 17, ಶುಕ್ರವಾರದಂದು ಬೆಳಗ್ಗೆ 10.30ಕ್ಕೆ ಮೈಸೂರು- ಬೆಂಗಳೂರು ರಸ್ತೆಯ ರಿಂಗ್ ರಸ್ತೆ ಜಂಕ್ಷನ್‌ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಯಲಿದೆ.

ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್, 'ಪ್ರತಿಭಟನೆಯಲ್ಲಿ ಕಪ್ಪು ಪಟ್ಟಿ ಧರಿಸಿ ಯಾವುದೇ ಧಿಕ್ಕಾರದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಪ್ರತಿಭಟನೆ ನಡೆಸೋಣ, ಪ್ರತಿಭಟನಾ ಸ್ಥಳದಲ್ಲಿಯೇ ಸಭೆ ನಡೆಸಿ ಮುಂದಿನ ಹೋರಾಟದ ರೂಪುರೇಷೆ ಬಗ್ಗೆ ತೀರ್ಮಾನ ಕೈಗೊಳ್ಳೋಣ' ಎಂದು ಮನವಿ ಮಾಡಿದರು.

Bengaluru Mysuru Expressway Toll Collection Against Protest In Mysuru

ಜಲದರ್ಶಿನಿಯಲ್ಲಿ ನಡೆದ ಸಭೆಯಲ್ಲಿ ಇತಿಹಾಸ ತಜ್ಞ ಪಿ.ವಿ.ನಂಜರಾಜ ಅರಸ್, ಜಿಲ್ಲಾ ಕಸಾಪ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು, ಪಾಲಿಕೆ ಮಾಜಿ ಸದಸ್ಯ ಆರ್.ಸೋಮಸುಂದರ್, ತಾಯೂರು ವಿಠಲ ಮೂರ್ತಿ, ಒಕ್ಕಲಿಗರ ವಿಕಾಸ ವೇದಿಕೆಯ ಅಧ್ಯಕ್ಷೆ ಯಮುನಾ ಸೇರಿದಂತೆ ಹಲವರು ಇದ್ದರು.

ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ಮಾರ್ಚ್ 14ರಿಂದ ಟೋಲ್ ಸಂಗ್ರಹ ಆರಂಭವಾಗಿದೆ. ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುವ ವಾಹನಗಳಿಗೆ ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆ ಬಳಿ ಟೋಲ್ ಸಂಗ್ರಹಿಸಲಾಗುತ್ತಿದ್ದು ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನಗಳಿಗೆ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಪ್ಲಾಜಾ ಬಳಿ ಟೋಲ್ ಸಂಗ್ರಹಿಸಲಾಗುತ್ತಿದೆ.

ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ದುಬಾರಿ ಟೋಲ್‌ ಸಂಗ್ರಹಿಸಲಾಗುತ್ತಿದೆ ಎಂದು ಟೋಲ್ ಸಂಗ್ರಹ ಆರಂಭವಾದ ದಿನದಿಂದ ಪ್ರತಿಭಟನೆಗಳು ನಡೆಯುತ್ತಿದ್ದು, ಗುರುವಾರ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಸತತ ಎರಡು ಗಂಟೆಗೂ ಹೆಚ್ಚು ಕಾಲ ರಾಮನಗರದಲ್ಲಿ ಪ್ರತಿಭಟನೆ ನಡೆಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+