ಜುಲೈನಿಂದ ಬೆಂಗಳೂರು-ಮೈಸೂರು ಏರ್ ಇಂಡಿಯಾ ಸಂಚಾರ

ಮೈಸೂರು, ಜೂ. 01 : ಬೆಂಗಳೂರು-ಮೈಸೂರು ನಡುವೆ ಏರ್ ಇಂಡಿಯಾ ವಿಮಾನ ಹಾರಾಟ ಜುಲೈನಲ್ಲಿ ಆರಂಭವಾಗುವ ನಿರೀಕ್ಷೆ ಇದೆ. ಎರಡು ನಗರಗಳ ನಡುವೆ ವಿಮಾನ ಸೇವೆ ಆರಂಭಿಸುವ ಸಂಬಂಧ ಪ್ರವಾಸೋದ್ಯಮ ಇಲಾಖೆ ಏರ್‌ ಇಂಡಿಯಾಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಸರ್ಕಾರ ವಿಮಾನ ಹಾರಾಟವನ್ನು ಆರಂಭಿಸಲು ಮುಂದಾಗಿದೆ. ಜೆಟ್‌ ಏರ್‌ ವೇಸ್ ಸೇರಿದಂತೆ ಹಲವು ಕಂಪನಿಗಳಿಗೆ ಸರ್ಕಾರ ಪ್ರಸ್ತಾವನೆ ಸಲ್ಲಿಸಿತ್ತು. ಈ ಪೈಕಿ ಏರ್ ಇಂಡಿಯಾ ಸಂಚಾರ ಆರಂಭಿಸಲು ಒಪ್ಪಿಗೆ ನೀಡಿದೆ. [ಬೆಂಗಳೂರು-ಮೈಸೂರು ನಡುವೆ ಏರ್ ಇಂಡಿಯಾ ಹಾರಾಟ]

air india

ಬೆಂಗಳೂರು-ಮೈಸೂರು ನಡುವೆ ವಿಮಾನ ಹಾರಾಟ ಆರಂಭಿಸಿದರೆ ಆರ್ಥಿಕ ಸಹಕಾರವನ್ನು ನೀಡುವುದಾಗಿ ಇಲಾಖೆ ಪ್ರಸ್ತಾವನೆಯಲ್ಲಿ ತಿಳಿಸಿದೆ. ಸರ್ಕಾರ ಸುಮಾರು 1 ಕೋಟಿ ರೂ.ಗಳ ಆರ್ಥಿಕ ನೆರವನ್ನು ಏರ್‌ ಇಂಡಿಯಾಕ್ಕೆ ಪ್ರಾಥಮಿಕವಾಗಿ ಒದಗಿಸಲಿದೆ. [ಮಂಡಕಳ್ಳಿ ವಿಮಾನ ನಿಲ್ದಾಣದ ಬಗ್ಗೆ ಓದಿ]

ಪ್ರವಾಸೋದ್ಯಮ ಇಲಾಖೆ ಹಣಕಾಸಿನ ನೆರವು ಕುರಿತು ಸರ್ಕಾರಕ್ಕೆ ಪತ್ರ ಬರೆದಿದೆ. ಸರ್ಕಾರದಿಂದ ಒಪ್ಪಿಗೆ ದೊರೆತ ಬಳಿಕ ಅದನ್ನು ಏರ್‌ ಇಂಡಿಯಾಕ್ಕೆ ಕಳುಹಿಸಲಾಗುತ್ತದೆ. ಸುಮಾರು 1 ತಿಂಗಳಿನಲ್ಲಿ ಈ ಪ್ರಕ್ರಿಯೆಗಳು ಪೂರ್ಣಗೊಳ್ಳುವ ನಿರೀಕ್ಷೆ ಇದ್ದು, ಜುಲೈನಲ್ಲಿ ವಿಮಾನ ಹಾರಾಟ ಆರಂಭವಾಗುವ ನಿರೀಕ್ಷೆ ಇದೆ. [ಬೆಂಗಳೂರು-ಮೈಸೂರು ಆರು ಪಥದ ರಸ್ತೆ ವಿಳಂಬ?]

ಮೈಸೂರು ನಗರದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ವಿಮಾನ ಹಾರಾಟ ಆರಂಭಿಸಲು ನಿರ್ಧರಿಸಲಾಗಿದೆ. ಏರ್ ಇಂಡಿಯಾ ಸೇವೆ ಒದಗಿಸಲು ಒಪ್ಪಿಗೆ ನೀಡಿದೆ. ಈ ಕುರಿತು ಒಂದು ಸುತ್ತಿನ ಮಾತುಕತೆಯನ್ನು ಪೂರ್ಣಗೊಳಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.

ಬೆಂಗಳೂರು-ಮೈಸೂರು ನಡುವಿನ ವಿಮಾನ ಸಂಚಾರ 2014 ಸೆಪ್ಟೆಂಬರ್‌ನಲ್ಲಿ ಸ್ಥಗಿತಗೊಂಡಿತ್ತು. ಉಭಯ ನಗರಗಳ ನಡುವೆ ಸಂಚರಿಸುತ್ತಿದ್ದ ಸ್ಪೈಸ್ ಜೆಟ್‌ ಸೆ.5ರಿಂದ ಸೇವೆಯನ್ನು ಸ್ಥಗಿತಗೊಳಿಸಿತ್ತು. ಇದಕ್ಕೂ ಮೊದಲು ಹಾರಾಟ ನಡೆಸುತ್ತಿದ್ದ ಕಿಂಗ್ ಫಿಷರ್ ಸೇವೆ ಸಹ ಸ್ಥಗಿತಗೊಂಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+