ಉ.ಪ್ರ. ಗೆಲುವು: ಮೈಸೂರು ಬಿಜೆಪಿಯಲ್ಲಿ ಸಂಭ್ರಮಾಚರಣೆ

ಮೈಸೂರು, ಮಾರ್ಚ್ 11; ಭಾರೀ ಕುತೂಹಲ ಕೆರಳಿಸಿದ್ದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಉತ್ತರಪ್ರದೇಶ ಹಾಗೂ ಉತ್ತರಾಖಂಡದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದರಿಂದಾಗಿ ಮೈಸೂರು ನಗರ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿಹಂಚಿ ಸಂಭ್ರಮಿಸಿದರು.

ಮೈಸೂರಿನ ಅಗ್ರಹಾರ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿಗೆ ಜೈಕಾರ ಕೂಗಿದರು. ಬಳಿಕ ಪಟಾಕಿ ಸಿಡಿಸಿ, ಸಿಹಿಹಂಚುವ ಮೂಲಕ ತಮ್ಮ ಸಂತಸವನ್ನು ವ್ಯಕ್ತಪಡಿಸಿದರು.[ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿರುಗಾಳಿ ಎಬ್ಬಿಸಿದ ಮೋದಿ 9 ಹೇಳಿಕೆ]

BJP activists celebrating success in Mysore

ಈ ಸಂದರ್ಭ ಮಾತನಾಡಿದ ಕಾರ್ಯಕರ್ತರು ಮೋದಿಯವರು ಕಾಂಗ್ರೆಸ್ ಮುಕ್ತ ಭಾರತವನ್ನು ನಿರ್ಮಾಣ ಮಾಡಬೇಕೆನ್ನುವ ಸದಾಶಯ ಹೊಂದಿದ್ದು, ಅದರಂತೆ ಜನತೆ ಬಿಜೆಪಿಯತ್ತ ಒಲವು ತೋರುತ್ತಿದ್ದಾರೆ. ಸ್ವಾತಂತ್ರ್ಯಾನಂತರದಿಂದ ಕಾಂಗ್ರೆಸ್ ಆಡಳಿತ ದೇಶದಲ್ಲಿ ಯಾವುದೇ ಬದಲಾವಣೆಯನ್ನೂ ತಂದಿಲ್ಲ. ಈಗ ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಜನತೆ ಬಿಜೆಪಿಯತ್ತ ಒಲವು ತೋರಿದ್ದಾರೆ ಎಂದರು.

ಸುಮಾರು ಐವತ್ತಕ್ಕೂ ಅಧಿಕ ಕಾರ್ಯಕರ್ತರು ಸಂಭ್ರಮದಲ್ಲಿ ಪಾಲ್ಗೊಂಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+