ಮುನ್ನಡೆ ಸಾಧಿಸಿದ ಸಂತಸದಲ್ಲಿ ಪ್ರತಾಪ್ ಸಿಂಹ

ಮೈಸೂರು, ಮೇ 23 : ಸಿದ್ದರಾಮಯ್ಯನವರ ಪ್ರತಿಷ್ಠೆಯ ಕ್ಷೇತ್ರವಾಗಿದ್ದ ಮೈಸೂರಿನಲ್ಲಿ ಅವರಿಗೆ ತೀವ್ರ ಮುಖಭಂಗವಾದಂತಿದೆ. ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಹಾಗೂ ಕಾಂಗ್ರೆಸ್ ಅಭ್ಯರ್ಥಿ ವಿಜಯಶಂಕರ್ ನಡುವೆ ಮುಖಾಮುಖಿ ಏರ್ಪಟ್ಟಿದೆ. ಮೈಸೂರು - ಕೊಡಗು ಕ್ಷೇತ್ರದಲ್ಲಿ ಈ ಬಾರಿ ಕಮಲ ಕೇಕೆ ಹಾಕುತ್ತಿದೆ. ಪ್ರತಾಪ್ ಸಿಂಹ ಭಾರೀ ಮತಗಳ ಮುನ್ನಡೆ ಸಾಧಿಸಿದ್ದಾರೆ.

ಮೈಸೂರು - ಕೊಡಗು ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹಾಗೂ 2014ರ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಹಾಲಿ ಸಂಸದರಾಗಿರುವ ಪ್ರತಾಪ್ ಸಿಂಹ ತಮ್ಮ ಎದುರಾಳಿ ಸಿ.ಎಚ್.ವಿಜಯಶಂಕರ್ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಸದ್ಯ ಸಂಸದ ಪ್ರತಾಪ್ ಸಿಂಹ, ಕಾಂಗ್ರೆಸ್ ಹಾಗೂ ದೋಸ್ತಿ ಅಭ್ಯರ್ಥಿ ವಿಜಯಶಂಕರ್ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ.

BJP candidate prathap simha leads in mysore

22 ಅಭ್ಯರ್ಥಿಗಳು ಮೈಸೂರು - ಕೊಡಗು ಲೋಕಸಭೆ ಕ್ಷೇತ್ರದಲ್ಲಿ ನಿಂತಿದ್ದರೂ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಹಾಗೂ ಮೈತ್ರಿ ಅಭ್ಯರ್ಥಿ ವಿಜಯಶಂಕರ್ ನಡುವೆ ನೇರ ಹಣಾಹಣಿ ಎದುರಾಗಿದೆ. 2014ರ ಲೋಕಸಭೆ ಚುನಾವಣೆಯಲ್ಲಿ ಪ್ರತಾಪ್ ಸಿಂಹ 31,608 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಅಂತರದಿಂದ ಮತ್ತೊಮ್ಮೆ ಪ್ರತಾಪ್ ಸಿಂಹ ವಿಜಯಶಾಲಿಯಾಗುವುದರಲ್ಲಿ ಅನುಮಾನವಿಲ್ಲವೆಂಬ ಮಾತು ಕೇಳಿಬರುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+