ವರುಣ ಕ್ಷೇತ್ರದ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಭರ್ಜರಿ ಪ್ರಚಾರ
ಮೈಸೂರು, ಏಪ್ರಿಲ್, 18: ವರುಣಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹಲವಾರು ಗ್ರಾಮಗಳಲ್ಲಿ ಮಂಗಳವಾರ ದಿನವಿಡೀ ಬಿಜೆಪಿ ಅಭ್ಯರ್ಥಿಯಾದ ಸಚಿವ ವಿ.ಸೋಮಣ್ಣ ಭರ್ಜರಿ ಚುನಾವಣಾ ಪ್ರಚಾರವನ್ನು ಮಾಡಿ ಗಮನ ಸೆಳೆದರು.
ಮೊದಲಿಗೆ ಲಿಲಿತಾದ್ರಿಪುರದಲ್ಲಿ ವಿ.ಸೋಮಣ್ಣ ಮತಯಾಚನೆ ಪ್ರಾರಂಭಿಸಿದರು. ಗ್ರಾಮಕ್ಕೆ ಆಗಮಿಸಿದ ಅವರನ್ನು ಸುಮಾರು 25 ಅಡಿ ಎತ್ತರದ ಭಾರಿ ಗಾತ್ರದ ಸೇಬಿನ ಹಾರವನ್ನು ಕ್ರೇನ್ ಮೂಲಕ ಹಾಕುವ ಮೂಲಕ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ನಂತರ ಗ್ರಾಮದಲ್ಲಿರುವ ಬಸವೇಶ್ವರರ ದೇವಸ್ಥಾನಕ್ಕೆ ಭೇಟಿ ನೀಡಿದ ವಿ.ಸೋಮಣ್ಣ ಪೂಜೆ ಸಲ್ಲಿಸಿದರು.

ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ
ಬಳಿಕ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಹಾಗೆಯೇ ಗ್ರಾಮದಲ್ಲಿರುವ ದಲಿತರ ಬಡಾವಣೆಗೆ ಭೇಟಿ ನೀಡಿ, ಅಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಚುನಾವಣಾ ಪ್ರಚಾರ ನಡೆಸಿದರು.
ಅಭಿವೃದ್ಧಿ ಕೆಲಸಗಳು ಬಾಕಿ ಇವೆ
ನಂತರ ಮಾತನಾಡಿದ ಅವರು, ಲಲಿತಾದ್ರಿಪುರ ಗ್ರಾಮವನ್ನು ಮೈಸೂರಿನ ಮಹಾರಾಜರು ಬಹಳ ಸುಂದರವಾಗಿ ನಿರ್ಮಿಸಿದ್ದಾರೆ. ಇಲ್ಲಿ ಎಲ್ಲಾ ಜಾತಿಯ ಜನರು ಸೌಹಾರ್ದತೆಯಿಂದ ಬಾಳ್ವೆ ನಡೆಸುತ್ತಿದ್ದಾರೆ. ಈ ಗ್ರಾಮದಲ್ಲಿ ಹಲವುವಾರು ಅಭಿವೃದ್ಧಿ ಕೆಲಸಗಳು ನಡೆದಿವೆ. ಇನ್ನೂ ನಡೆಯಬೇಕಾಗಿದೆ. ಇಲ್ಲಿ ಬಸವ ಭವನವನ್ನು ನಿರ್ಮಿಸುವುದಕ್ಕಾಗಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪನವರು ಮೂರು ಕೋಟಿ ರೂಪಾಯಿಗಳನ್ನು ನೀಡಿದ್ದಾರೆ ಎಂದರು.
ಮೈಸೂರು ನಗರಕ್ಕೆ ಬಹಳ ಹತ್ತಿರವಾಗಿರುವ ಈ ಗ್ರಾಮವನ್ನು ಮತ್ತಷ್ಟು ಅಭಿವೃದ್ಧಿಪಡಿಸಿ, ಇಲ್ಲಿ ವಾಸಿಸುತ್ತಿರುವ ಜನರಿಗೆ ಅಗತ್ಯವಾದ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕಾಗಿದೆ. ಹಾಗಾಗಿ ಗ್ರಾಮದ ಜನರು ಈ ಬಾರಿಯ ಚುನಾವಣೆಯಲ್ಲಿ ನನಗೆ ಸಾಮೂಹಿಕವಾಗಿ ಬೆಂಬಲ ನೀಡಿ, ಮತದಾನ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಸಂಸದ ಪ್ರತಾಪ್ ಸಿಂಹ ಮಾತನಾಡಿ, ಲಲಿತಾದ್ರಿಪುರ ಮೈಸೂರು ನಗರದಲ್ಲಿಯೇ ಇದೆ. ಆದರೆ ಇನ್ನೂ ಕೂಡ ನಗರಪಾಲಿಕೆಯ ವ್ಯಾಪ್ತಿಗೆ ಸೇರಿಲ್ಲ. ಇದನ್ನು ಸೇರಿಸಿ, ಸಮಗ್ರವಾಗಿ ಅಭಿವೃದ್ಧಿ ಮಾಡಿ, ಇಲ್ಲಿನ ಜನರಿಗೆ ಅಗತ್ಯವಿರುವಂತಹ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಬೇಕಾಗಿದೆ. ಹಾಗಾಗಿ ಗ್ರಾಮದ ಜನರು ಬಿಜೆಪಿ ಅಭ್ಯರ್ಥಿಯಾದ ವಿ.ಸೋಮಣ್ಣನವರಿಗೆ ಸಂಪೂರ್ಣವಾಗಿ ಬೆಂಬಲ ನೀಡಿ, ಮತವನ್ನು ನೀಡಬೇಕು ಎಂದು ಮನವಿ ಮಾಡಿದರು.
ಮುಖಂಡ ಕಾ.ಪು.ಸಿದ್ದಲಿಂಗಸ್ವಾಮಿ ಮಾತನಾಡಿ, ನಾನು ಈ ಹಿಂದೆ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾಗ 2 ಸಾವಿರ ಮತಗಳನ್ನು ಈ ಗ್ರಾಮದ ಜನರು ನೀಡುವ ಮೂಲಕ ಬೆಂಬಲಿಸಿದ್ದರು. ಈಗ ಬಿಜೆಪಿ ಅಭ್ಯರ್ಥಿಯಾದ ವಿ.ಸೋಮಣ್ಣನವರಿಗೆ ಗ್ರಾಮದ ಎಲ್ಲಾ ಕೋಮಿನ ಜನರು ಸಾಮೂಹಿಕವಾಗಿ ಮತ ನೀಡುವ ಮೂಲಕ ಚುನಾವಣೆಯಲ್ಲಿ ಅವರನ್ನು ಗೆಲ್ಲಿಸಿಕೊಡಬೇಕೆಂದು ಮನವಿ ಮಾಡಿದರು.
ಗ್ರಾಮದ ಮುಖಂಡರಾದ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ನೇತೃತ್ವದಲ್ಲಿ ನಡೆದ ಈ ಭರ್ಜರಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ಲಿಂಗಾಯಿತರು, ಒಕ್ಕಲಿಗ, ದಲಿತರ, ವಿಶ್ವಕರ್ಮ ಜನಾಂಗದ ಯುವ ಸಂಘ, ಸಂಸ್ಥೆಗಳ ನೂರಾರು ಮಂದಿ ಯುವಕರು, ಗ್ರಾಮದ ವಿವಿಧ ಕೋಮಿನ ಯಜಮಾನರು, ಮುಖಂಡರುಗಳು, ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು, ಯುವಕರು, ಮಹಿಳೆಯರು ಭಾಗವಹಿಸಿದ್ದರು.
ರೋಡ್ ಶೋ ವೇಳೆ ತೆರೆದ ವಾಹನದಲ್ಲಿ ಸಾಗುತ್ತಿದ್ದ ವಿ.ಸೋಮಣ್ಣ, ಸಂಸದ ಪ್ರತಾಪ್ ಸಿಂಹಗೆ ಹೂವಿನ ಸುರಿಮಳೆಗೈದರು.
ಬಳಿಕ ವಿ.ಸೋಮಣ್ಣ ಅವರು ಅಹಲ್ಯ ಗ್ರಾಮ, ಗೌಡರಹುಂಡಿ, ಶ್ರೀರಾಂಪುರ, ಕೆಂಬಾಲು, ಬಿದರಗೂಡು, ಹಳ್ಳಿಕೆರೆಹುಂಡಿ, ಮರಳೂರು ಗೊದ್ದನಪುರ, ಏಚಗಳ್ಳಿ, ಹಳ್ಳಿದಿಡ್ಡಿ, ತಾಂಡವಾಪುರ, ಅಡಕನಹಳ್ಳಿಹುಂಡಿ, ಬಂಚಹಳ್ಳಿಹುಂಡಿ, ಚಿಕ್ಕಯ್ಯನಛತ್ರ, ಬಸವನಪುರ, ಕೆಂಪಿಸಿದ್ದನಹುಂಡಿ, ಹೆಜ್ಜಿಗೆ, ತೊರೆಮಾವು, ಇಮ್ಮಾವು, ಜಕ್ಕಳ್ಳಿ, ಹುಳಿಮಾವು ಗ್ರಾಮಗಳಲ್ಲಿ ಬಿರುಸಿನ ಚುನಾವಣಾ ಪ್ರಚಾರ ನಡೆಸಿ, ಗ್ರಾಮದ ಜನರಲ್ಲಿ ಮತಯಾಚನೆ ಮಾಡಿದರು.
-
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ












Click it and Unblock the Notifications