ಮೈತ್ರಿ ಪಕ್ಷದ ನಾಯಕರ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ದೂರು : ರಾಮ್ ದಾಸ್

ಮೈಸೂರು, ಮಾರ್ಚ್ 29 : ಐಟಿ ದಾಳಿಗೊಳಗಾದ ವ್ಯಕ್ತಿಗಳಿಗೂ ಹಾಗೂ ಅವರ ರಕ್ಷಣೆಗೆ ನಿಂತಿರುವ ರಾಜ್ಯ ನಾಯಕರ ನಡುವೆ ಇರುವ ಸಂಬಂಧವನ್ನು ಕೂಲಂಕಷವಾಗಿ ತನಿಖೆ ನಡೆಸಬೇಕೆಂದು ಬಿಜೆಪಿ ವತಿಯಿಂದ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗುವುದು ಎಂದು ಶಾಸಕ ರಾಮದಾಸ್ ತಿಳಿಸಿದರು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಕುಮಾರಸ್ವಾಮಿ ಅವರು ತಮ್ಮ ವೈಯಕ್ತಿಕ ಮಾಹಿತಿ ಪಡೆಯಲು ಆದಾಯ ತೆರಿಗೆ ಕಚೇರಿಯಲ್ಲಿ ಗುಪ್ತಚರ ಅಧಿಕಾರಿಗಳನ್ನು ಇರಿಸುವ ಮೂಲಕ ಸರ್ಕಾರ ಹಾಗೂ ಆಡಳಿತ ಯಂತ್ರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಅವರು ದೂರಿದರು.

ಕಾನೂನು ಪಾಲಿಸಬೇಕಾದರೆ ಕರ್ತವ್ಯಕ್ಕೆ ಅಡ್ಡಿಯುಂಟು ಮಾಡಿದ್ದು, ಐಟಿ ದಾಳಿಯನ್ನು ಬಳಸಿಕೊಂಡು ರಾಜಕಾರಣ ನಡೆಸುತ್ತಿದ್ದಾರೆ.

ಹಿಂದೊಮ್ಮೆ ನಡೆದ ದಾಳಿಯನ್ನು ಕುಮಾರಸ್ವಾಮಿ ಅವರೇ ಸ್ವತಃ ಸಮರ್ಥಿಸಿಕೊಂಡಿರುವುದನ್ನು ಉಲ್ಲೇಖಿಸಿದ್ದರು. ಅ ಅಂದು ಅವರ ಹೇಳಿಕೆಯನ್ನು ಹಾಗೂ ಅವರ ಇಂದಿನ ಬದಲಾವಣೆಯನ್ನು ಪ್ರಶ್ನಿಸಿದರು.

BJP complains to governor against alliance party leaders: MLA Ram Das

ನಟರು, ರಾಜಕಾರಣಿಗಳು, ಜನಸಾಮಾನ್ಯರು ಎಲ್ಲರೂ ಆದಾಯ ತೆರಿಗೆ ಅಧಿಕಾರಿಗಳಿಗೆ ಒಂದೇ ಎಂದು ನೀಡಿದ್ದ ಹೇಳಿಕೆಯನ್ನು ಇಂದು ಕುಮಾರಸ್ವಾಮಿ ಮರೆತಿದ್ದಾರೆ. ಅಂದು ಇಲ್ಲದ ಆರೋಪವನ್ನು ಇಂದೇಕೆ ಇಲಾಖೆಯ ಮೇಲೆ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಅಲ್ಲದೇ ಗೌಪ್ಯವನ್ನು ಬಹಿರಂಗಗೊಳಿಸುವುದು ಸಂವಿಧಾನ ವಿರೋಧಿ ಚಟುವಟಿಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ಐಪಿಸಿ 353ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದರು.

ಐಟಿ ದಾಳಿಯನ್ನು ಖಂಡಿಸಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವುದು ಸಂವಿಧಾನ ವಿರೋಧಿ ನಡೆಯಾಗಿದ್ದು, ಸ್ವತಃ ಮುಖ್ಯಮಂತ್ರಿಗಳೇ ಅದನ್ನು ಉಲ್ಲಂಘನೆ ಮಾಡಿದ್ದು, ಕೂಡಲೇ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+