ಆರ್.ಅಶೋಕ್ ಬಿಚ್ಚಿಟ್ಟ ಸಿದ್ದರಾಮಯ್ಯ ಸರ್ಕಾರದ ಸಾಧನೆ!
ಮೈಸೂರು, ಜ. 19 : 'ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ವರ್ಷ ನಿದ್ರೆ ಮಾಡಿ ಕಾಲ ಕಳೆದಿದ್ದಾರೆ. 1 ರೂ.ಗೆ ಅಕ್ಕಿ ಕೊಟ್ಟಿದ್ದು ಬಿಟ್ಟು ಯಾವುದೇ ಸಾಧನೆ ಮಾಡಿಲ್ಲ' ಎಂದು ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಸಿದ್ದರಾಮಯ್ಯ ಸರ್ಕಾರವನ್ನು ಟೀಕಿಸಿದ್ದಾರೆ.
ಸೋಮವಾರ ಹುಣಸೂರಿನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಪಾಲ್ಗೊಂಡಿದ್ದ ಆರ್.ಅಶೋಕ್ ಸಿದ್ದರಾಮಯ್ಯ ಸರ್ಕಾರವನ್ನು ವ್ಯಂಗ್ಯವಾಡಿದರು. ರಾಜ್ಯದಲ್ಲಿ ಚುನಾವಣೆ ಯಾವಾಗ ಎದುರಾಗುವುದೋ? ಎಂದು ಜನರು ಕಾದು ಕುಳಿತಿದ್ದಾರೆ ಎಂದು ಅಭಿಪ್ರಾಯಪಟ್ಟರು.

'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2 ವರ್ಷ ನಿದ್ರೆ ಮಾಡಿ ಕಾಲ ಕಳೆದಿದ್ದಾರೆ. ಇದರಿಂದ ಮತದಾರರು ಚುನಾವಣೆ ಎಷ್ಟು ಬೇಗ ಬರುತ್ತದೆ ಎಂದು ಕಾಯುತ್ತಿದ್ದಾರೆ. ಕಾಂಗ್ರೆಸ್‌ಗೆ ಮತ ನೀಡಿದ ಜನರಿಗೇ ಈಗ ಆ ಪಕ್ಷ ಬೇಡವಾಗಿದೆ ಎಂದು ಹೇಳಿದರು. [ಅರ್ಕಾವತಿ ಬಡಾವಣೆ ಫೈಟ್ ಯಾರು, ಏನು ಹೇಳಿದರು?]
'ಕರ್ನಾಟಕದ ಜನರಿಗೆ ಕಾಂಗ್ರೆಸ್ ಸರ್ಕಾರ ಬೇಡವಾಗಿದೆ. ಏಕೆಂದರೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎರಡು ವರ್ಷದಿಂದ 1 ರೂ.ಗೆ ಒಂದು ಕೆಜಿ ಅಕ್ಕಿ ನೀಡಿದ್ದನ್ನು ಬಿಟ್ಟರೆ ಯಾವುದೇ ಸಾಧನೆ ಮಾಡಿಲ್ಲವೆಂದು' ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸಿದರು. [ಸದಸ್ಯತ್ವ ಅಭಿಯಾನಕ್ಕೆ ಚಾಲನೆ]
'ರಾಜ್ಯದಲ್ಲಿ ಪ್ರತಿಪಕ್ಷ ಸರ್ಕಾರವನ್ನು ಟೀಕಿಸುವುದು ಬೇಡ, ಕಾಂಗ್ರೆಸ್ ಪಕ್ಷದ ಶಾಸಕರೇ ಸರ್ಕಾರವನ್ನು ಟೀಕಿಸುವಂತಾಗಿದೆ. ಸರ್ಕಾರ ಉರುಳುವುದಕ್ಕೆ ಕೆಲವು ದಿನ ಮಾತ್ರ ಬಾಕಿ ಉಳಿದಿದೆ ಎಂದು ಆರ್.ಅಶೋಕ್ ಭವಿಷ್ಯ ನುಡಿದರು.
'ಪ್ರಧಾನಿ ನರೇಂದ್ರ ಮೋದಿ ಸರ್ಕಾರ ದೇಶದಲ್ಲಿ ಉತ್ತಮ ಆಡಳಿತ ನೀಡುತ್ತಿದೆ. ಅದಕ್ಕೆ ಉದಾಹರಣೆ 6 ಬಾರಿ ಪೆಟ್ರೋಲ್, ಡಿಸೇಲ್ ದರ ಕಡಿಮೆ ಮಾಡಿರುವುದು ನಿಮ್ಮ ಕಣ್ಮುಂದೆ ಇದೆ. ಆದ್ದರಿಂದ ಜನರು ಬಿಜೆಪಿ ಪಕ್ಷದ ಸದಸ್ಯರಾಗಿ' ಎಂದು ಅಶೋಕ್ ಮನವಿ ಮಾಡಿದರು.
ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ, ಜಿಲ್ಲಾ ಬಿ.ಜೆ.ಪಿ. ಉಪಾಧ್ಯಕ್ಷೆ ರೀನಾ ಪ್ರಕಾಶ್, ಜಿಲ್ಲಾಧ್ಯಕ್ಷ ಹೇಮಂತ್ ಕುಮಾರ್ ಮುಂತಾದವರು ಪಾಲ್ಗೊಂಡಿದ್ದರು.












Click it and Unblock the Notifications