ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಬಿಜೆಪಿಗೆ ಅತ್ಯಾಚಾರಿಗಳೆಂದರೆ ಹೆಚ್ಚು ಪ್ರೀತಿ': ಕೆಪಿಸಿಸಿ ವಿವಾದಕಾರಿ ಟ್ವೀಟ್

|
Google Oneindia Kannada News

ಜಾಗತಿಕವಾಗಿ ಪ್ರವಾಸಿ ತಾಣವಾಗಿರುವ ಮೈಸೂರಿನಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಪಿಜಿಯಲ್ಲಿ ವಾಸ್ತವ್ಯವಿರುವ ಯುವತಿಯ ಮೇಲೆ ಪಾನಮತ್ತ ಕಾಮಾಂಧರು ಪೈಶಾಚಿಕ ಕೃತ್ಯವನ್ನು ಎಸಗಿದ್ದರು.

ಹೊರ ರಾಜ್ಯದಿಂದ ವ್ಯಾಸಂಗಕ್ಕೆ ಬಂದು ಖಾಸಗಿ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿರುವ ಎಂಬಿಎ ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯನೊಂದಿಗೆ ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಬಳಿ ತೆರಳಿದ ವೇಳೆ ಐದಾರು ಮಂದಿ ಯುವಕರ ತಂಡ ಆಕೆಯ ಗ್ಯಾಂಗ್ ರೇಪ್ ನಡೆಸಿದೆ ಎನ್ನಲಾಗಿದೆ.

ಮೈಸೂರಿನಲ್ಲಿ ಅತ್ಯಾಚಾರ; ಸರ್ಕಾರದ ಕಿವಿ ಹಿಂಡಿದ ಸಿದ್ದರಾಮಯ್ಯ!ಮೈಸೂರಿನಲ್ಲಿ ಅತ್ಯಾಚಾರ; ಸರ್ಕಾರದ ಕಿವಿ ಹಿಂಡಿದ ಸಿದ್ದರಾಮಯ್ಯ!

ಘಟನೆ ನಡೆದು ಒಂದು ದಿನದ ಮೇಲಾದರೂ, ಮೈಸೂರು ಪೊಲೀಸರಿಗೆ ಪುಂಡರ ಬಗ್ಗೆ ಸುಳಿವು ಸಿಕ್ಕಿಲ್ಲ. ಈಗಾಗಲೇ, ಬೆಂಗಳೂರಿನಿಂದ ಹಿರಿಯ ಅಧಿಕಾರಿಗಳನ್ನು ಮೈಸೂರಿಗೆ ಕಳುಹಿಸಿರುವ ರಾಜ್ಯ ಗೃಹಸಚಿವ ಅರಗ ಜ್ಞಾನೇಂದ್ರ ಅರಮನೆ ನಗರಿಗೆ ತೆರಳುವುದಾಗಿ ಹೇಳಿದ್ದಾರೆ. ಶುಕ್ರವಾರ (ಆ 27) ಜಿಲ್ಲಾ ಪೊಲೀಸ್​ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ, ಪ್ರಕರಣಗಳ ಬಗ್ಗೆ ಮಾಹಿತಿಯನ್ನು ಗೃಹ ಸಚಿವರು ಸಂಗ್ರಹಿಸಲಿದ್ದಾರೆ. ಎರಡು ದಿನಗಳ ಹಿಂದೆ ಇಲ್ಲಿ ದರೋಡೆ ಶೂಟ್‌ಔಟ್ ಕೂಡಾ ನಡೆದಿತ್ತು.

 ಅತ್ಯಾಚಾರ ಪ್ರಕರಣ: ಶುಕ್ರವಾರ ಮೈಸೂರು ಪೊಲೀಸರ ಸಭೆ ಕರೆದ ಗೃಹ ಸಚಿವ ಆರಗ ಜ್ಞಾನೇಂದ್ರ ಅತ್ಯಾಚಾರ ಪ್ರಕರಣ: ಶುಕ್ರವಾರ ಮೈಸೂರು ಪೊಲೀಸರ ಸಭೆ ಕರೆದ ಗೃಹ ಸಚಿವ ಆರಗ ಜ್ಞಾನೇಂದ್ರ

"ಯುವತಿಯ ಜೊತೆಗಿದ್ದ ಸ್ನೇಹಿತ ಕೊಟ್ಟ ದೂರು ಮತ್ತು ಮಾಹಿತಿಯ ಆಧಾರದ ಮೇಲೆ ಕೇಸು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದೇವೆ" ಎಂದು ಮೈಸೂರು ಪೊಲೀಸ್ ಅಯುಕ್ತರಾದ ಡಾ.ಚಂದ್ರಗುಪ್ತ ಹೇಳಿದ್ದಾರೆ. ಘಟನೆಯ ಬಗ್ಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ), ಟ್ವೀಟ್ ಮೂಲಕ ಬಿಜೆಪಿ ಸರಕಾರದ ಕಿವಿಹಿಂಡಿದೆ. ಬಿಜೆಪಿಯವರಿಗೆ ಅತ್ಯಾಚಾರಿಗಳೆಂದರೆ ಪ್ರೀತಿ ಎನ್ನುವ ವಿವಾದಕಾರಿ ಟ್ವೀಟ್ ಅನ್ನು ಕಾಂಗ್ರೆಸ್ ಮಾಡಿದೆ.

ಬಿಜೆಪಿಯ ಮಹಿಳಾ ವಿರೋಧಿ ಧೋರಣೆ ಹಾಗೂ ಮಹಿಳಾ ರಕ್ಷಣೆಯ ಬಗೆಗೆ ಇರುವ ಉದಾಸೀನತೆ

"ಸಾಂಸ್ಕೃತಿಕ ನಗರಿ ಎನಿಸಿಕೊಂಡ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಡೆದ ಅತ್ಯಾಚಾರ ಪ್ರಕರಣವು @BJP4Karnataka ಸರ್ಕಾರದ ಕಳಪೆ ಕಾನೂನು ಸುವ್ಯವಸ್ಥೆಗೆ ಕನ್ನಡಿ. ಹಿಂದೊಮ್ಮೆ ಮಾಧ್ಯಮ ವರದಿಗಾರ್ತಿಗೆ @ikseshwarappa ಅವರು ಆಡಿದ ಅಸಂಬದ್ಧ ಮಾತುಗಳೇ ಬಿಜೆಪಿಯ ಮಹಿಳಾ ವಿರೋಧಿ ಧೋರಣೆ ಹಾಗೂ ಮಹಿಳಾ ರಕ್ಷಣೆಯ ಬಗೆಗೆ ಇರುವ ಉದಾಸೀನತೆ ತೋರುತ್ತದೆ" ಎಂದು ಬಿಜೆಪಿ ಮುಖಂಡರಾದ ಕೆ.ಎಸ್.ಈಶ್ವರಪ್ಪನವರ ಹೇಳಿಕೆಯನ್ನು ಉಲ್ಲೇಖಿಸಿ ಕೆಪಿಸಿಸಿ ಟ್ವೀಟ್ ಮಾಡಿದೆ.

ಉತ್ತರ ಪ್ರದೇಶದ ಮಾದರಿಯಲ್ಲಿಯೇ ರಾಜ್ಯದಲ್ಲೂ ಅತ್ಯಾಚಾರ ಪ್ರಕರಣಗಳು

"@BJP4Karnataka ಅಧಿಕಾರಕ್ಕೆ ಬಂದಮೇಲೆ ಉತ್ತರ ಪ್ರದೇಶದ ಮಾದರಿಯಲ್ಲಿಯೇ ರಾಜ್ಯದಲ್ಲೂ ಅತ್ಯಾಚಾರ ಪ್ರಕರಣಗಳು ಘಟಿಸುತ್ತಿವೆ. ಬಿಜೆಪಿ ಸದಾ ಜಪಿಸುವ 'ಯುಪಿ ಮಾಡೆಲ್'ನ್ನು ರಾಜ್ಯದಲ್ಲಿ ಈ ಮೂಲಕ ಜಾರಿಗೊಳಿಸಲು ತೀರ್ಮಾನಿಸಿದೆ. ಚಾಮುಂಡಿ ಬೆಟ್ಟದಂತಹ ಪ್ರವಾಸಿತಾಣದಲ್ಲೂ ಪೊಲೀಸ್ ರಕ್ಷಣೆ, ಗಸ್ತು ಇಲ್ಲದಿರುವುದು ಸರ್ಕಾರದ ವೈಫಲ್ಯ ಗೃಹಸಚಿವರೇ. ಯುವತಿಯನ್ನು ಅತ್ಯಾಚಾರವೆಸಗಿದ ಮಾಜಿ ಸಚಿವರ ರಕ್ಷಣೆ ನಿಂತಂತೆ ಮೈಸೂರಿನ ಅತ್ಯಾಚಾರಿಗಳ ರಕ್ಷಣೆಯನ್ನೂ ಮಾಡುವಂತಿದೆ @BJP4Karnataka ಸರ್ಕಾರ. ಅತ್ಯಾಚಾರಿ ಶಾಸಕ, ಮಾಜಿ ಸಚಿವರನ್ನು ಹೊಂದಿದ ಬಿಜೆಪಿಗೆ ಅತ್ಯಾಚಾರಿಗಳೆಂದರೆ ಹೆಚ್ಚು ಪ್ರೀತಿ!ಸಿದ್ದು ಸವದಿಯನ್ನ ರಕ್ಷಿಸಿದ ಮಹಿಳಾ ವಿರೋಧಿ ಬಿಜೆಪಿಯಿಂದ ಮಹಿಳೆಯರು ರಕ್ಷಣೆ ಬಯಸುವುದು ವ್ಯರ್ಥ" ಕೆಪಿಸಿಸಿ ಟ್ವೀಟ್ ಮಾಡಿದೆ.

ಮಹಿಳಾ ನಾಯಕಿಯರು ಭೇಟಿಯಾಗದಿರುವುದು ಬಿಜೆಪಿಯ ನಿರ್ಲಕ್ಷ್ಯ ಧೋರಣೆಗೆ ನಿದರ್ಶನ

"ಮೈಸೂರಿನಂತಹ ನಗರದಲ್ಲಿ ಅತ್ಯಾಚಾರ ಪ್ರಕರಣ ನಡೆದು 24 ಗಂಟೆಗೂ ಅಧಿಕ ಸಮಯ ಕಳೆದಿದ್ದರೂ ಆರೋಪಿಗಳನ್ನು ಬಂಧಿಸಲಾಗದ್ದು @BJP4Karnataka ಆಡಳಿತದಲ್ಲಿ ಗೃಹ ಇಲಾಖೆಯ ಕಾರ್ಯಕ್ಷಮತೆ ಕುಸಿದಿರುವುದಕ್ಕೆ ಸಾಕ್ಷಿ. ಇದುವರೆಗೂ ಗೃಹಸಚಿವರು, ಬಿಜೆಪಿಯ ಮಹಿಳಾ ನಾಯಕಿಯರು ಸಂತ್ರಸ್ತೆಯನ್ನು ಭೇಟಿಯಾಗದಿರುವುದು ಬಿಜೆಪಿಯ ನಿರ್ಲಕ್ಷ್ಯ ಧೋರಣೆಗೆ ನಿದರ್ಶನ"ಎಂದು ಕರ್ನಾಟಕ ಕಾಂಗ್ರೆಸ್ ಘಟಕ ಟ್ವೀಟ್ ಮೂಲಕ ಬಿಜೆಪಿ ಸರಕಾರದ ಆಡಳಿತ ವೈಖರಿಯನ್ನು ಲೇವಡಿ ಮಾಡಿದೆ.

ಟ್ವೀಟ್ ಮೂಲಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ, ಆಡಳಿತ ಯಂತ್ರ ಕುಸಿದಿದೆ

"ಮೈಸೂರಿನಲ್ಲಿ ನಡೆದಿರುವ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ರಾಜ್ಯದಲ್ಲಿ ಕುಸಿದುಬಿದ್ದಿರುವ ಕಾನೂನು-ಸುವ್ಯವಸ್ಥೆಗೆ ಸಾಕ್ಷಿ. ಪೊಲೀಸರು ತಕ್ಷಣ ದುಷ್ಕರ್ಮಿಗಳನ್ನು ಬಂಧಿಸಿ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಿ, ಭಯಭೀತ ಜನರಲ್ಲಿ ಧೈರ್ಯ ತುಂಬಬೇಕು. ಮೈಸೂರು ಮಾತ್ರವಲ್ಲ ಇಡೀ ರಾಜ್ಯದಲ್ಲಿ ಅಪರಾಧಗಳ‌ ಸಂಖ್ಯೆ‌ ಹೆಚ್ಚಾಗುತ್ತಿದೆ.‌ @CMofKarnataka ಅವರು, ಬಹಳಷ್ಟು ಬೇಗ ಸಂಪುಟ ವಿಸ್ತರಣೆಯ ಸಂಕಟದಿಂದ‌ ಪಾರಾಗಿ ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧಗಳ ನಿಯಂತ್ರಣಕ್ಕೆ ಗಮನ ಹರಿಸಬೇಕು. #LawlessKarnataka" ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

English summary
Mysuru Gang Rape Case: Karnataka congress tweeted that BJP is protecting gang rape case accused. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X