Get Updates
Get notified of breaking news, exclusive insights, and must-see stories!

ಪರಿಷತ್ ಫೈಟ್‌; ಒಂದು ಕ್ಷೇತ್ರ, ಬಿಜೆಪಿ-ಜೆಡಿಎಸ್ ಎರಡೂ ನಾಮಪತ್ರ!

ಮೈಸೂರು, ಮೇ 16: ವಿಧಾನ ಪರಿಷತ್‌ನ 6 ಕ್ಷೇತ್ರಗಳ ಚುನಾವಣೆಯಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರ ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಮೈತ್ರಿಯಲ್ಲಿ ಸೀಟು ಯಾರಿಗೆ? ಎಂಬುದು ಪ್ರಶ್ನೆ.

ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಹಾಸನ ಜಿಲ್ಲಾ ವ್ಯಾಪ್ತಿಯನ್ನು ಒಳಗೊಂಡಿರುವ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಮಾಜಿ ಎಂಎಲ್‌ಸಿ ಮರಿತಿಬ್ಬೇಗೌಡ ಕಾಂಗ್ರೆಸ್ ಅಭ್ಯರ್ಥಿ.

BJP JDS File Nomination Form South Teachers Seat What About Alliance

ಜೂನ್ 3ರಂದು ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಗುರುವಾರ ಕೊನೆಯ ದಿನವಾಗಿತ್ತು. ಇಂದು ಜೆಡಿಎಸ್‌ ಅಭ್ಯರ್ಥಿಯಾಗಿ ವಿವೇಕಾನಂದ ನಾಮಪತ್ರ ಸಲ್ಲಿಸಿದರು. ಬುಧವಾರ ಬಿಜೆಪಿ ಅಭ್ಯರ್ಥಿ ಡಾ. ಇ. ಸಿ. ನಿಂಗರಾಜೇಗೌಡ ನಾಮಪತ್ರ ಸಲ್ಲಿಸಿದ್ದರು.

ಯಾರಿಗೆ ಸಿಗಲಿದೆ ಸೀಟು?; ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ವಾಪಸ್ ಪಡೆಯಲು ಮೇ 20 ಕೊನೆಯ ದಿನವಾಗಿದೆ. ಬಿಜೆಪಿ ಡಾ. ಇ. ಸಿ. ನಿಂಗರಾಜೇಗೌಡ ಬಿ-ಫಾರಂ ಇಲ್ಲದೇ ನಾಮಪತ್ರ ಸಲ್ಲಿಸಿದ್ದು, ಅವರು ಕಣದಿಂದ ಹಿಂದೆ ಸರಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಗುರುವಾರ ಜೆಡಿಎಸ್‌ ಅಭ್ಯರ್ಥಿ ವಿವೇಕಾನಂದ ನಾಮಪತ್ರ ಸಲ್ಲಿಕೆ ಮಾಡುವಾಗ ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ, ಜೆಡಿಎಸ್‌ನ ಸಾ. ರಾ. ಮಹೇಶ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು. ಆದರೆ ಸೀಟು ಯಾರಿಗೆ? ಎಂಬ ಗುಟ್ಟು ಯಾರೂ ಬಿಟ್ಟುಕೊಡಲಿಲ್ಲ.

ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ಜೆಡಿಎಸ್ ಪ್ರಭಾವ ಇದೆ. ಆದ್ದರಿಂದ ಜೆಡಿಎಸ್‌ ಅಭ್ಯರ್ಥಿ ವಿವೇಕಾನಂದ ಕಣದಲ್ಲಿ ಉಳಿಯಲಿದ್ದಾರೆ. ಡಾ. ಇ. ಸಿ. ನಿಂಗರಾಜೇಗೌಡ ಬಿ-ಫಾರಂ ಸಲ್ಲಿಕೆ ಮಾಡಿಲ್ಲ. ಆದ್ದರಿಂದ ನಾಮಪತ್ರ ತಿರಸ್ಕಾರವಾಗಬಹುದು.

ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆ, ಸೀಟು ಹಂಚಿಕೆಯಂತೆ ಎರಡು ಕ್ಷೇತ್ರ ಜೆಡಿಎಸ್‌ಗೆ, 4 ಕ್ಷೇತ್ರ ಬಿಜೆಪಿಗೆ ಎಂಬ ಸುದ್ದಿ ಇತ್ತು. ಆದರೆ ಬಿಜೆಪಿ ನೈಋತ್ಯ ಶಿಕ್ಷಕ ಕ್ಷೇತ್ರವನ್ನು ಮಾತ್ರ ಜೆಡಿಎಸ್‌ಗೆ ಬಿಟ್ಟುಕೊಟ್ಟಿತ್ತು. ಈಗ ದಕ್ಷಿಣ ಶಿಕ್ಷಕರ ಕ್ಷೇತ್ರವೂ ಜೆಡಿಎಸ್ ಪಾಲಾಗುವ ನಿರೀಕ್ಷೆ ಇದೆ.

ಬುಧವಾರ ನಾಮಪತ್ರ ಸಲ್ಲಿಸಿದ ಬಳಿಕ ಡಾ. ಇ. ಸಿ. ನಿಂಗರಾಜೇಗೌಡ ಮೈಸೂರಿನಲ್ಲಿ ಬಿಜೆಪಿ ನಾಯಕರು, ಸಂಘ ಪರಿವಾರದವರನ್ನು ಭೇಟಿಯಾಗಿದ್ದರು. ಜೆಡಿಎಸ್ ಮೈತ್ರಿ ಧರ್ಮ ಪಾಲನೆ ಮಾಡಬೇಕು ಎಂದು ಹೇಳಿದ್ದರು. ಆದ್ದರಿಂದ ಚುನಾವಣಾ ಕಣ ಕುತೂಹಲಕ್ಕೆ ಕಾರಣವಾಗಿದೆ.

ಸುಮಾರು 18 ಸಾವಿರ ಮತಗಳನ್ನು ಹೊಂದಿರುವ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಮಾಜಿ ಎಂಎಲ್‌ಸಿ ಮರಿತಿಬ್ಬೇಗೌಡ ಕಾಂಗ್ರೆಸ್ ಅಭ್ಯರ್ಥಿ. ಕಳೆದ ಬಾರಿ ಅವರು ಜೆಡಿಎಸ್‌ನಿಂದ ಇದೇ ಕ್ಷೇತ್ರದಲ್ಲಿ ಕಣಕ್ಕಿಳಿದು ಗೆದ್ದಿದ್ದರು. ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಸೇರಿ ಈ ಬಾರಿಯ ಚುನಾವಣೆ ಟಿಕೆಟ್ ಪಡೆದಿದ್ದಾರೆ.

ಜೆಡಿಎಸ್‌ ಅಭ್ಯರ್ಥಿ ವಿವೇಕಾನಂದ ಗುರುವಾರ ಒಬ್ಬರೇ ನಾಮಪತ್ರ ಸಲ್ಲಿಕೆ ಮಾಡಿಲ್ಲ. ಮೈಸೂರಿನ ಪ್ರಾದೇಶಿಕ ಆಯುಕ್ತರ ಕಛೇರಿಯಲ್ಲಿ ಅವರು ನಾಮಪತ್ರ ಸಲ್ಲಿಸುವ ಮುನ್ನ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಡಾ. ಧನಂಜಯ್ ಸರ್ಜಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಅಶೋಕ್ ಉಪಸ್ಥಿತರಿದ್ದರು.

ಬಳಿಕ ಇದೇ ಕಛೇರಿಯಲ್ಲಿ ಜೆಡಿಎಸ್‌ ಅಭ್ಯರ್ಥಿ ವಿವೇಕಾನಂದ ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಬಿ. ವೈ. ರಾಘವೇಂದ್ರ, ಸಾ. ರಾ. ಮಹೇಶ್‌ ಜೊತೆಗಿದ್ದರು. ಆದ್ದರಿಂದ ಸೀಟು ಜೆಡಿಎಸ್‌ಗೆ ಬಿಟ್ಟುಕೊಡಲಾಗಿದೆ. ಆದರೆ ಈ ಕುರಿತು ಅಧಿಕೃತವಾಗಿ ನಾಯಕರು ಯಾವುದೇ ಹೇಳಿಕೆಯನ್ನು ನೀಡಿಲ್ಲ.

ಜೂನ್ 3ರಂದು ಈಶಾನ್ಯ ಪದವೀಧರ, ನೈಋತ್ಯ ಪದವೀಧರ, ಬೆಂಗಳೂರು ಪದವೀಧರ ಮತ್ತು ಆಗ್ನೇಯ ಶಿಕ್ಷಕ, ನೈಋತ್ಯ ಶಿಕ್ಷಕ ಹಾಗೂ ದಕ್ಷಿಣ ಶಿಕ್ಷಕ ಸೇರಿ ಒಟ್ಟು 6 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಜೂನ್ 6ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+