ಮೈಸೂರು; ಬಿಜೆಪಿ ಮುಖಂಡನನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು
ಮೈಸೂರು, ಮಾರ್ಚ್ 06 : ಮೈಸೂರು ನಗರದಲ್ಲಿ ಬಿಜೆಪಿ ಮುಖಂಡನ ಹತ್ಯೆಯಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಕೊಲೆಯಾದ ಬಿಜೆಪಿ ಮುಖಂಡ ಎಸ್. ಆನಂದ್ ಮೈಸೂರು ನಗರ ಬಿಜೆಪಿ ಸ್ಲಂ ಮೋರ್ಚಾ ಉಪಾಧ್ಯಕ್ಷರಾಗಿದ್ದರು. ಶುಕ್ರವಾರ ಬೆಳಗ್ಗೆ ಕುವೆಂಪು ನಗರದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಶವ ಪತ್ತೆಯಾಗಿದೆ.
ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಎಸ್. ಆನಂದ್ ಹತ್ಯೆ ಮಾಡಲಾಗಿದೆ. ಮೂರು ಅಥವ ನಾಲ್ಕು ಜನರ ತಂಡ ಈ ಹತ್ಯೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಗುರುವಾರ ರಾತ್ರಿ ಎಸ್. ಆನಂದ್ ಮನೆಯಲ್ಲಿ ಸ್ನೇಹಿತನ ಹುಟ್ಟು ಹಬ್ಬದ ಅಂಗವಾಗಿ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಪಾರ್ಟಿಯಲ್ಲಿ ಯಾವುದೋ ವಿಚಾರಕ್ಕೆ ಜಗಳ ನಡೆದು ಆನಂದ್ ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.
ಮೈಸೂರು ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. "ಬಿಯರ್ ಬಾಟಲ್‌ನಿಂದ ಚುಚ್ಚಿ ಹತ್ಯೆ ಮಾಡಲಾಗಿದೆ. ಪ್ರಕರಣದ ಸಂಬಂಧ ಒಬ್ಬನನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ" ಎಂದು ಹೇಳಿದರು.












Click it and Unblock the Notifications