Honeytrap: ಹನಿಟ್ರ್ಯಾಪ್ ಇವರ ಮೇಲೂ ಆಗಿದೆ: ಹೊಸ ಬಾಂಬ್ ಸಿಡಿಸಿದ ಯತೀಂದ್ರ ಸಿದ್ದರಾಮಯ್ಯ
ರಾಜ್ಯ ರಾಜಕಾರಣವನ್ನೇ ಬೆಚ್ಚಿ ಬೀಳಿಸಿರುವ ಹನಿಟ್ರ್ಯಾಪ್ ಪ್ರಕರಣವು ದಿನದಿಂದ ದಿನಕ್ಕೆ ಹೊಸ ತಿರುವುಗಳನ್ನು ಪಡೆದುಕೊಳ್ತಿದೆ. ಕಾಂಗ್ರೆಸ್ ಸಚಿವ ಕೆಎನ್ ರಾಜಣ್ಣ ಅವರೇ ಸದನದಲ್ಲಿ ಹನಿಟ್ರ್ಯಾಪ್ ಬಗ್ಗೆ ಹೇಳಿಕೆ ನೀಡಿ ಶಾಕ್ ಕೊಟ್ಟ ಬೆನ್ನಲ್ಲೇ ರಾಜಕೀಯವ ವಲಯದಲ್ಲಿ ಭಾರಿ ಚರ್ಚೆ ಹುಟ್ಟುಹಾಕಿದೆ. ನಿನ್ನೆಯಷ್ಟೇ ಹನಿಟ್ರ್ಯಾಪ್ ಬಗ್ಗೆ ಹಲವು ಮಹತ್ವದ ವಿಚಾರಗಳನ್ನು ಬಹಿರಂಗಪಡಿಸಿದ್ದ ಕೆಎನ್ ರಾಜಣ್ಣ ಅವರು ಯುವತಿಯೊಬ್ಬಳು ಹೈಕೋರ್ಟ್ ವಕೀಲೆ ಎಂದು ಹೇಳಿಕೊಂಡು ಬಂದಿದ್ದಾಗಿ ತಿಳಿಸಿದ್ದರು. ಈಗ ಸಿದ್ದರಾಮಯ್ಯ ಪುತ್ರ ಹಾಗೂ ಕಾಂಗ್ರೆಸ್ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.
ಕೆಲವರು ಹನಿಟ್ರ್ಯಾಪ್ ಮಾಡಬೇಕು ಎಂಬ ಕಾರಣಕ್ಕೆ ಸಚಿವರ ಮನೆಗಳಿಗೆ ಬರ್ತಾರೆ. ಹಾಗಾಗಿ ಸಚಿವರ ಮನೆಗಳಿಗೆ ಸಿಸಿಟಿವಿ ಹಾಕಿಸಲೇಬೇಕು. ಇನ್ನು ಸಚಿವರ ಮನೆಗಳಲ್ಲಿ ಸಿಸಿಟಿವಿ ಇಲ್ಲ ಎನ್ನುವ ವಿಚಾರದ ಬಗ್ಗೆ ನನಗೆ ಅಷ್ಟಾಗಿ ಗೊತ್ತಿಲ್ಲ. ಆದರೆ ತಂದೆ ಸಿಎಂ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಿಸಿಟಿವಿ ಇದೆ. ನಾನು ಕೂಡ ಅಲ್ಲೇ ಇರುವುದರಿಂದ ಇದರ ಬಗ್ಗೆ ನನಗೆ ಚೆನ್ನಾಗಿ ಗೊತ್ತಿದೆ. ಆದರೆ, ಬೇರೆಯವರ ಮನೆಗಳಲ್ಲಿ ಸಿಸಿಟಿವಿ ಇಲ್ಲದ ವಿಚಾರ ಗೊತ್ತಿಲ್ಲ ಎಂದು ಯತೀಂದ್ರ ಹೇಳಿದ್ದಾರೆ.

ಇನ್ನು ಬಿಜೆಪಿಯವರ ವಿಚಾರಕ್ಕೆ ಬಂದರೆ, ಬಿಜೆಪಿಯಲ್ಲೇ ಹಲವು ಹನಿಟ್ರ್ಯಾಪ್‌ಗಳು ನಡೆದಿವೆ. ಬಿಜೆಪಿಯ ನಾಯಕರ ವಿಡಿಯೋಗಳನ್ನ ಬಿಜೆಪಿ ಪಕ್ಷದವರೇ ಮಾಡಿಕೊಂಡು ಇಟ್ಟಿದ್ದಾರೆ. ವಿಡಿಯೋವನ್ನ ಬಿಜೆಪಿಯವರೇ ಮಾಡಿಕೊಂಡು ಇಟ್ಟಿದ್ದಾರೆ. ಈ ಕಾರಣಕ್ಕಾಗಿಯೇ ಕೆಲ ಬಿಜೆಪಿ ಶಾಸಕರು, ಮಾಜಿ ಮುಖ್ಯಮಂತ್ರಿ ಸೇರಿದಂತೆ ಹಲವು ಬಿಜೆಪಿ ನಾಯಕರು ಕೋರ್ಟ್‌ನಿಂದ ಸ್ಟೇ ತಂದಿದ್ದಾರೆ. ಅವರ ಕಥೆಯೇ ಹೀಗಿರುವಾಗ ಬಿಜೆಪಿಯವರಿಗೆ ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡಲು ಯಾವ ನೈತಿಕತೆ ಇದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಚಿವರ ಸರ್ಕಾರಿ ನಿವಾಸಗಳಲ್ಲಿ ಸಿಸಿಟಿವಿ ಇಲ್ಲ ಎನ್ನುವ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಅವರ ಮನೆಗೆ ಪೊಲೀಸ್ ಬಂದೂಬಸ್ತ್ ಕೂಡ ಬಿಗಿಯಾಗಿದೆ. ಇಲ್ಲಿಗೆ ಯಾರೇ ಬಂದರೂ ವಿಡಿಯೋ ರೆಕಾರ್ಡ್ ಆಗು ತ್ತದೆ. ಹಾಗಾಗಿ ಉಳಿದ ಸಚಿವರ ಮನೆಗೂ ಸಿಸಿಟಿವಿ ಕ್ಯಾಮರಾ ಹಾಕಲೇಬೇಕು. ಏಕೆಂದರೆ, ಸಿಸಿಟಿವಿ ಇದ್ದರೆ ಹನಿಟ್ರ್ಯಾಪ್ ಮಾಡುವವರ ಮೇಲೆ ನಿಗಾ ಇಡಬಹುದು ಎಂದೂ ಯತೀಂದ್ರ ಹೇಳಿದ್ದಾರೆ.

ಇನ್ನು ಸದನದಲ್ಲಿ ಕಾಂಗ್ರೆಸ್ ನಾಯಕರು ಬಿಜೆಪಿ ಶಾಸಕ ಬನಸಗೌಡ ಪಾಟೀಲ್ ಯತ್ನಾಳ್ ಅವರಿಗೆ ಚೀಟಿ ಕೊಟ್ಟ ವಿಚಾರ ಕುರಿತು ಮಾತನಾಡಿ, ನಮ್ಮ ಕಾಂಗ್ರೆಸ್ ನಾಯಕರು ಸದನದಲ್ಲಿ ಹನಿಟ್ರ್ಯಾಪ್ ಬಗ್ಗೆ ಮಾತನಾಡಿರುವುದು ಮಾತ್ರ ನನಗೆ ಗೊತ್ತಿದೆ. ಅದರ ಬಗ್ಗೆ ಮಾತ್ರ ನಾನು ಮಾತನಾಡಬಹುದು, ಆದರೆ ಯತ್ನಾಳ್ ಅವರಿಗೆ ಚೀಟಿ ಕೊಟ್ಟಿದ್ದು ಯಾರು ಎಂಬ ವಿಚಾರವೇ ನನಗೆ ಗೊತ್ತಿಲ್ಲ ಎಂದಿದ್ದಾರೆ. ಸದ್ಯ ಹನಿಟ್ರ್ಯಾಪ್ ವಿಚಾರವಾಗಿ ಕಾಂಗ್ರೆಸ್ ನಾಯಕರು ಬಿಜೆಪಿ ಮೇಲೆ, ಬಿಜೆಪಿ ನಾಯಕರು ಕಾಂಗ್ರೆಸ್ ಮೇಲೆ ಆರೋಪಗಳನ್ನು ಮಾಡುತ್ತಿದ್ದು, ಈ ಜಾಲದಲ್ಲಿ ಯಾರೆಲ್ಲ ಸಿಲುಕಿದ್ದಾರೆ ಎಂಬುದು ತನಿಖೆಯಿಂದ ಮಾತ್ರ ಹೊರಬರಲಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications