• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದಿಢೀರ್ ಉಸಿರಾಟದ ತೊಂದರೆ; ಶಾಸಕ ರಾಮದಾಸ್ ಆಸ್ಪತ್ರೆಗೆ ದಾಖಲು

By ಮೈಸೂರು ಪ್ರತಿನಿಧಿ
|

ಮೈಸೂರು, ಅಕ್ಟೋಬರ್ 19: ಮೈಸೂರಿನ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ಎಸ್.ಎ.ರಾಮದಾಸ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಮುಂಜಾನೆ 5 ಗಂಟೆ ಹೊತ್ತಿಗೆ ಅವರಿಗೆ ಏಕಾಏಕಿ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡಿದೆ.

ಕೂಡಲೇ ಮೈಸೂರಿನ ಜಯದೇವ ಆಸ್ಪತ್ರೆಗೆ ಶಾಸಕ ರಾಮದಾಸ್ ಅವರು ದಾಖಲಾಗಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲು ಮೈಸೂರಿನ ಜಯದೇವ ಆಸ್ಪತ್ರೆ ವೈದ್ಯರು ಮುಂದಾಗಿದ್ದಾರೆ ಎಂಬ ಮಾಹಿತಿಯಿದೆ.

ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಆಸ್ಪತ್ರೆಯಲ್ಲಿ ರಾಮದಾಸ್ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಕಳೆದ ಎರಡು ದಿನಗಳಿಂದಲೂ ಮೈಸೂರು ದಸರಾ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಿದ್ದರು. ಇದೀಗ ದಿಢೀರ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಪರೀಕ್ಷಾ ವರದಿ ಇನ್ನೂ ಬರಬೇಕಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಕಳೆದ ಫೆಬ್ರುವರಿ ತಿಂಗಳಲ್ಲಿಯೂ ರಾಮದಾಸ್ ಅವರು ಮೈಸೂರಿನ ಜಯದೇವ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಆಗ ಅವರಿಗೆ ಲಘು ಹೃದಯಾಘಾತವಾಗಿತ್ತು. ಆನಂತರ ಹೃದಯಕ್ಕೆ ಸ್ಟಂಟ್ ಅಳವಡಿಕೆ ಮಾಡಲಾಗಿತ್ತು.

English summary
MLA Ramdas admitted to jayadeva hospital due to breathing problem
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X