ಕಮಲ ಹಿಡಿದುಕೊಂಡೇ 'ಕೈ' ನತ್ತ ಒಲವು ತೋರುತ್ತಿರುವ ಹಳ್ಳಿಹಕ್ಕಿ!
ಮೈಸೂರು, ಡಿಸೆಂಬರ್ 11; ಮಾಜಿ ಸಂಸದ, ಹಾಲಿ ವಿಧಾನ ಪರಿಷತ್ ಸದಸ್ಯ, ಹಳ್ಳಿಹಕ್ಕಿ ಎಂದೇ ಖ್ಯಾತಿ ಪಡೆದಿರುವ ಎಚ್. ವಿಶ್ವನಾಥ್ ಕಮಲ ಬಿಟ್ಟು 'ಕೈ' ಹಿಡಿಯುವ ಎಲ್ಲ ಲಕ್ಷಣಗಳು ಕಾಣುತ್ತಿದೆ. ಕಳೆದ ಕೆಲವು ತಿಂಗಳಿನಿಂದ ಸ್ವಪಕ್ಷ ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ಆರೋಪ ಮಾಡುತ್ತಾ ಕಾಂಗ್ರೆಸ್ ಪಕ್ಷದ ಪರ ಮಾತನಾಡುತ್ತಾ ಬರುತ್ತಿರುವುದನ್ನು ಗಮನಿಸಿದರೆ ಇವರ ನಡೆ ಬಹುತೇಕರಿಗೆ ಅರ್ಥವಾಗಿ ಹೋಗಿತ್ತು.
ಇದೀಗ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿ ಮಾಡಿರುವುದನ್ನು ಗಮನಿಸಿದರೆ ಎಲ್ಲೋ ಒಂದು ಕಡೆಗೆ ಬಿಜೆಪಿಯನ್ನು ಬಿಟ್ಟು ಕಾಂಗ್ರೆಸ್‌ಗೆ ಸೇರುತ್ತಾರೆ ಎಂಬುದು ಖಚಿತವಾದಂತೆ ತೋರುತ್ತಿದೆ. ಬೆಂಗಳೂರಿನಲ್ಲಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ರನ್ನು ಸಹ ಭೇಟಿ ಮಾಡಿದ್ದಾರೆ.
ಸಾಮಾನ್ಯವಾಗಿ ಇತ್ತೀಚೆಗಿನ ವರ್ಷಗಳಲ್ಲಿ ಎಚ್. ವಿಶ್ವನಾಥ್‌ರನ್ನು ಗಮನಿಸಿದರೆ ಅವರ ನಿರ್ಧಾರಗಳು ಅಚ್ಚರಿಯನ್ನು ಮೂಡಿಸುತ್ತವೆ. ಜತೆಗೆ ಅವರು ಯಾವುದೇ ಪಕ್ಷಕ್ಕೆ ಹೋದರೂ ಪಕ್ಷ ನಿಷ್ಠೆಯನ್ನು ಮರೆತು ಪಕ್ಷದ ವಿರುದ್ಧವೇ ಮಾತನಾಡುತ್ತಾರೆ ಎಂಬ ಆರೋಪಗಳಿವೆ.
ಆದರೆ ಬಹಳಷ್ಟು ಸಲ ಪಕ್ಷದ ವೇದಿಕೆಯಲ್ಲಿ ನಡೆಯಬೇಕಾದ ವಿಷಯನ್ನು ಸಾರ್ವಜನಿಕವಾಗಿ ಮಾತನಾಡಿ ಮುಜುಗರ ತಂದಿದ್ದು ಇದೆ. ಇದು ಪಕ್ಷದ ಮೇಲೆ ಪರಿಣಾಮ ಬೀರಿದೆ ಎನ್ನುವುದನ್ನು ತಳ್ಳಿಹಾಕುವಂತಿಲ್ಲ.

ಲೋಕಸಭೆ ಚುನಾವಣೆಯಲ್ಲಿ ಸೋಲು
ಹಲವು ವರ್ಷಗಳ ಹಿಂದೆ ರಾಜ್ಯ ರಾಜಕೀಯದಿಂದ ದೂರವಾಗಿ ಕೇಂದ್ರದತ್ತ ಮುಖ ಮಾಡಿದ ಅವರು ಮೈಸೂರು ಕೊಡಗು ಸಂಸದರಾಗಿ ಕಾರ್ಯನಿರ್ವಹಿಸಿದ್ದಾರೆ. ಬಳಿಕ ಮೋದಿ ಅಲೆಯಲ್ಲಿ ಕೊಚ್ಚಿ ಹೋಗಿ ಪ್ರತಾಪ್ ಸಿಂಹ ಅವರ ಮುಂದೆ ಸೋಲನ್ನು ಅನುಭವಿಸಬೇಕಾಯಿತು. ಇದಕ್ಕೆ ಕಾರಣವಾಗಿದ್ದು ಕಾಂಗ್ರೆಸ್‌ನಲ್ಲಿದ್ದಾಗ ದೇವೇಗೌಡರ ಕುಟುಂಬದ ವಿರುದ್ಧ ಆರೋಪಗಳನ್ನು ಮಾಡುತ್ತಾ ಬಂದಿದ್ದು.
2014ರ ಲೋಕಸಭಾ ಚುನಾವಣೆಯಲ್ಲಿ ಸೋತ ಬಳಿಕ ಅವರು ಕಾಂಗ್ರೆಸ್‌ನಲ್ಲಿ ಮೂಲೆ ಗುಂಪಾದರು. ರಾಜ್ಯದಲ್ಲಿ ಆಗ ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ವಿಶ್ವನಾಥ್ ಅವರಿಗೆ ಮಣೆ ಹಾಕಲಿಲ್ಲ. ಹೀಗಾಗಿ ಕಾಂಗ್ರೆಸ್‌ನಲ್ಲಿದ್ದರೆ ಉಳಿಗಾಲವಿಲ್ಲ ಎಂದು ಅರಿತು ಅವರು ಜೆಡಿಎಸ್‌ನತ್ತ ಮುಖ ಮಾಡಿದರು.

ಆಪರೇಷನ್ ಕಮಲ ಖೆಡ್ಡಾಕ್ಕೆ ಬಿದ್ದ ಹಳ್ಳಿಹಕ್ಕಿ
2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಹುಣಸೂರು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಎಚ್. ವಿಶ್ವನಾಥ್ ಅವರು ಗೆಲುವನ್ನು ಸಾಧಿಸಿದರು. ನಂತರ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗ ತಮಗೆ ಸಚಿವ ಸ್ಥಾನ ಸಿಗಬಹುದೆಂದು ಕಾದು ಕುಳಿತರು. ಆದರೆ ಅದು ಸಾಧ್ಯವಾಗಲಿಲ್ಲ.
ಅದಾದ ಬಳಿಕ ನಡೆದ ರಾಜಕೀಯ ವಿದ್ಯಮಾನದಲ್ಲಿ ಆಪರೇಷನ್ ಕಮಲದ ಖೆಡ್ಡಾಕ್ಕೆ ಬಿದ್ದ ಅವರು ಜೆಡಿಎಸ್ ಬಿಟ್ಟು ಬಿಜೆಪಿ ಸೇರಿದರು. ಆ ನಂತರ ನಡೆದ ಉಪಚುನಾವಣೆಯಲ್ಲಿ ಹುಣಸೂರು ಕ್ಷೇತ್ರದಿಂದ ಸ್ಪರ್ಧಿಸಿದರಾದರೂ ಜನ ಅವರನ್ನು ಕೈಹಿಡಿಯಲಿಲ್ಲ. ಆದರೆ ವಿಧಾನಸಭೆ ಚುನಾವಣೆಯಲ್ಲಿ ಸೋತರೂ ಸಹ ಬಿಜೆಪಿ ಅವರನ್ನು ಎಂಎಲ್ ಸಿ ಮಾಡಿತು.

ಬಿಜೆಪಿ, ಆರ್‌ಎಸ್‌ಎಸ್ ವಿರುದ್ಧ ಟೀಕೆ
ಆದರೆ ಅದ್ಯಾಕೋ ಗೊತ್ತಿಲ್ಲ. ಬಿಜೆಪಿಯಲ್ಲಿ ಅವರು ಸರಿಹೋಗಲೇ ಇಲ್ಲ. ಅಲ್ಲಿಯೂ ಅವರಿಗೆ ಸಚಿವ ಸ‍್ಥಾನ ಸಿಗಲಿಲ್ಲ. ಹೀಗಾಗಿ ಅದೊಂದು ಮುನಿಸು ಅವರಲ್ಲಿ ಇದ್ದೇ ಇತ್ತು. ಜತೆಗೆ ಅವರು ಯಾವುದೇ ಪಕ್ಷದಲ್ಲಿದ್ದರೂ ತಪ್ಪನ್ನು ಖಡಾಖಂಡಿತವಾಗಿ ಟೀಕಿಸುವುದಕ್ಕೆ ಹೆಸರುವಾಸಿಯಾಗಿದ್ದು ಅದರಂತೆ ಬಿಜೆಪಿಯಲ್ಲಿದ್ದುಕೊಂಡೇ ಯಡಿಯೂರಪ್ಪರಿಂದ ಆರಂಭವಾಗಿ ಎಲ್ಲರನ್ನು ಆಗಾಗ್ಗೆ ಕುಟುಕುತ್ತಿದ್ದರು.
ಬಹಳಷ್ಟು ಸಲ ಇದು ಬಿಜೆಪಿಗೆ ಮುಜುಗರ ತಂದಿದ್ದರೂ ಅವರ ಬಗ್ಗೆ ಉದಾಸೀನ ತೋರಿದ್ದರು. ಈ ಹಿಂದೆ ಸಿದ್ದರಾಮಯ್ಯ ಅವರನ್ನು ಟೀಕಿಸುತ್ತಿದ್ದವರು ಇತ್ತೀಚೆಗಿನ ದಿನಗಳಲ್ಲಿ ಮೆದುಧೋರಣೆ ತೋರಲಾರಂಭಿಸಿದರಲ್ಲದೆ, ಆರ್‌ಎಸ್‌ಎಸ್, ಬಿಜೆಪಿ ವಿರುದ್ಧವೇ ಮಾತನಾಡಲು ಶುರು ಮಾಡಿದ್ದರು. ವಿಶ್ವನಾಥ್ ಅವರ ಈ ನಡೆ ರಾಜಕೀಯದಲ್ಲಿ ಒಂದಿಷ್ಟು ಅಚ್ಚರಿ ಮತ್ತು ಚರ್ಚೆಗೆ ಗ್ರಾಸವಾಗಿತ್ತು.

ವಿಶ್ವನಾಥ್ ಅವರ ಮುಂದಿನ ನಿರ್ಧಾರಗಳೇನು?
ಮುಂದಿನ ವಿಧಾನಸಭಾ ಚುನಾವಣೆ ವೇಳೆಗೆ ಎಚ್. ವಿಶ್ವನಾಥ್ ಅವರು ಬಿಜೆಪಿಗೆ ವಿದಾಯ ಹೇಳುವ ಲಕ್ಷಣಗಳು ಇದೀಗ ಗೋಚರಿಸುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ. ಹೀಗಾಗಿ ಮುಂದಿನ ಚುನಾವಣೆ ವೇಳೆಗೆ ಕಾಂಗ್ರೆಸ್‌ಗೆ ಹೋಗಿ ಯಾವುದಾದರೊಂದು ಕ್ಷೇತ್ರದಿಂದ ಸ್ಪರ್ಧಿಸುವ ಆಲೋಚನೆ ಮಾಡಿದ್ದಾರಾ? ಅಥವಾ 2024ರ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿದ್ದಾರೋ ಗೊತ್ತಿಲ್ಲ.
ಆದರೆ ಅವರು ಹೆಚ್ಚು ದಿನ ಬಿಜೆಪಿಯಲ್ಲಿ ಉಳಿಯಲ್ಲ ಎಂಬುದಂತು ಖಾತರಿಯಾಗಿದೆ. ಆದರೆ ಕಾಂಗ್ರೆಸ್‌ನ ರಾಜ್ಯ ನಾಯಕರು ಅಷ್ಟು ಸುಲಭವಾಗಿ ಮಣೆ ಹಾಕುತ್ತಾರೋ ಗೊತ್ತಿಲ್ಲ. ಹೈಕಮಾಂಡ್ ಮೂಲಕ ಮತ್ತೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ಪ್ರವೇಶಿಸಲು ಬೇಕಾದ ತಂತ್ರಗಳನ್ನು ಮಾಡುತ್ತಿರುವುದಂತು ಸತ್ಯ. ಮುಂದಿನ ಅವರ ನಿರ್ಧಾರಗಳೇನು ಎಂಬುದನ್ನು ಕಾದು ನೋಡಬೇಕಿದೆ.
-
Thalapathy Vijay Assets: ನಾಮಪತ್ರ ಸಲ್ಲಿಸಿದ ವಿಜಯ್, ಇವರ ಒಟ್ಟು ಆಸ್ತಿ ಎಷ್ಟು? ಇಲ್ಲಿದೆ ಮಾಹಿತಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ತಮಿಳುನಾಡು ಚುನಾವಣೆ 2026: ಟಿವಿಎಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಎರಡು ಕ್ಷೇತ್ರಗಳಿಂದ ನಟ ದಳಪತಿ ವಿಜಯ್ ಸ್ಪರ್ಧೆ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ











Click it and Unblock the Notifications