ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೀಸಲಾತಿ ವಿರೋಧಿಸುತ್ತಿದ್ದವರೇ ಬಿಜೆಪಿಯವರು:ಸಿದ್ದರಾಮಯ್ಯ

|
Google Oneindia Kannada News

ಮೈಸೂರು, ಜನವರಿ 9 : ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶೇಕಡ 10ರಷ್ಟು ಮೀಸಲಾತಿ ನೀಡಲು ಮಸೂದೆ ಮಾಡಿರುವುದು ಬಿಜೆಪಿ ಚುನಾವಣಾ ಗಿಮಿಕ್ ಅಷ್ಟೇ. ಆದರೆ ಮೇಲ್ವರ್ಗದ ಬಡವರಿಗೆ ಮೀಸಲಾತಿ ನೀಡಬೇಕೆನ್ನುವುದು ಸ್ವಾಗತಾರ್ಹ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲಾತಿ ವಿರೋಧಿಸುತ್ತಿದ್ದವರೇ ಬಿಜೆಪಿಯವರು. ಆದರೆ ಈಗ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶೇಕಡ 10 ಮೀಸಲಾತಿ ನೀಡಲು ಬಿಲ್ ಮಂಡನೆ ಮಾಡಲು ಮುಂದಾಗಿದ್ದಾರೆ. ಲೋಕಸಭೆ ಚುನಾವಣೆ ಹಿನ್ನಲೆ ಈಗ ಬಿಲ್ ಮಂಡನೆಗೆ ಆಸಕ್ತಿ ತೋರುತ್ತಿದ್ದಾರೆ ಎಂದು ಹೇಳಿದರು.

ಮೇಲ್ವರ್ಗದವರಿಗೂ ಉದ್ಯೋಗದಲ್ಲಿ ಮೀಸಲಾತಿ, ಯಾರು ಇದಕ್ಕೆ ಅರ್ಹರು? ಮೇಲ್ವರ್ಗದವರಿಗೂ ಉದ್ಯೋಗದಲ್ಲಿ ಮೀಸಲಾತಿ, ಯಾರು ಇದಕ್ಕೆ ಅರ್ಹರು?

ಇದೇ ವೇಳೆ ಕಾರ್ಮಿಕ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿದ್ದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಮುಷ್ಕರದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳನ್ನು ಹೊರತು ಪಡಿಸಿ ಉಳಿದ ಕಾರ್ಮಿಕ ಸಂಘಟನೆಗಳೆಲ್ಲಾ ಭಾಗಿಯಾಗಿವೆ. ಕಾರ್ಮಿಕರ ಮುಷ್ಕರ ನ್ಯಾಯಯುತವಾಗಿದೆ. ಅವರ ಸಮಸ್ಯೆಗಳನ್ನು ನಿವಾರಿಸಲು ಕೇಂದ್ರ ಸರ್ಕಾರ ಮುಂದಾಗಬೇಕು.

BJP oppose reservation: Siddaramaiah

ದೇಶದ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಮುಷ್ಕರ ಇದಕ್ಕೂ ಕಾಂಗ್ರೆಸ್ ಯಾವುದೇ ಸಂಬಂಧವಿಲ್ಲ. ರಾಷ್ಟ್ರೀಯ ಬಂದ್ ನಲ್ಲಿ ಯಾವುದೇ ಯಶಸ್ವಿಯಾಗುವುದಿಲ್ಲ. ರಾಷ್ಟೀಯ ಬಂದ್ ಗೂ ಕಾಂಗ್ರೆಸ್ ಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದರು.

ನಿಗಮ ಮಂಡಳಿ ನೇಮಕಾತಿ ಬಗ್ಗೆ ಸಚಿವ ಹೆಚ್.ಡಿ ರೇವಣ್ಣ ಅಸಮಾಧಾನ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಈ ವಿಚಾರವನ್ನು ಹಾದಿ ಬೀದಿಯಲ್ಲಿ ಮಾತನಾಡುವುದಿಲ್ಲ. ಮುಂದಿನ ವಾರ ಸಮನ್ವಯ ಸಮಿತಿ ಸಭೆ ನಡೆಯಲಿದೆ. ಸಮನ್ವಯ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಮುಂಬರುವ ಲೋಕಸಭಾ ಚುನಾವಣೆಯ ಸೀಟು ಹಂಚಿಕೆ ಕುರಿತು ಮಾತುಕತೆ ನಡೆಸಲಾಗುತ್ತದೆ ಎಂದರು.

ಮೇಲ್ವರ್ಗದವರಿಗೂ ಮೀಸಲಾತಿ! ಮೋದಿ ಸರ್ಕಾರದ ನಡೆಗೆ ಟ್ವಿಟ್ಟಿಗರು ಏನಂದ್ರು? ಮೇಲ್ವರ್ಗದವರಿಗೂ ಮೀಸಲಾತಿ! ಮೋದಿ ಸರ್ಕಾರದ ನಡೆಗೆ ಟ್ವಿಟ್ಟಿಗರು ಏನಂದ್ರು?

ಸಚಿವ ಸಿ ಪುಟ್ಟರಂಗಶೆಟ್ಟಿ ಹಣ ಆರೋಪ ವಿಚಾರ, ಸದ್ಯ ಪ್ರಕರಣ ಎಸಿಬಿ ನಲ್ಲಿ ತನಿಖೆ ಹಂತದಲ್ಲಿದೆ. ನ್ಯಾಯಾಲಯದಲ್ಲಿ ಪ್ರಕರಣ ಇದೆ ಹೀಗಾಗಿ ಪ್ರಕರಣದಲ್ಲಿ ಮಾತನಾಡುವುದು ಸೂಕ್ತವಲ್ಲ ಎಂದು ತಿಳಿಸಿದರು.

English summary
Siddaramaiah Said that BJP oppose reservation. But now Modi Cabinet approves 10 percent reservation for economically backward among upper castes.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X