• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಿಜೆಪಿಯ ನಡೆ ಪಂಚಾಯಿತಿಗಳ ಕಡೆಗೆ: ಸಚಿವ ಎಸ್.ಟಿ ಸೋಮಶೇಖರ್

By ಮೈಸೂರು ಪ್ರತಿನಿಧಿ
|

ಮೈಸೂರು, ನವೆಂಬರ್ 8: ಬಿಜೆಪಿಯ ನಡೆ ಪಂಚಾಯಿತಿಗಳ ಕಡೆಗೆ ಎಂಬ ಗುರಿಯನ್ನಿಟ್ಟುಕೊಂಡು ಕಾರ್ಯನಿರ್ವಹಣೆ ಮಾಡಲಾಗುತ್ತಿದೆ. ತಳಮಟ್ಟದಿಂದ ಪಕ್ಷವನ್ನು ಅಧಿಕಾರಕ್ಕೆ ತರುವುದೇ ನಮ್ಮ ಗುರಿ. ನಮಗಾಗಿ ದುಡಿದ ಕಾರ್ಯಕರ್ತರ ಚುನಾವಣೆಗೆ ನಾವು ಶ್ರಮ ಹಾಕುತ್ತೇವೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.

ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಬೆಟ್ಟದಪುರದಲ್ಲಿ ಬಿಜೆಪಿ ಶಕ್ತಿ ಕೇಂದ್ರ ಹಾಗೂ ಮಹಾಶಕ್ತಿ ಕೇಂದ್ರದ ಪ್ರಮುಖರ ಸಭೆಯಲ್ಲಿ ಮಾತನಾಡಿ, ಶೀಘ್ರದಲ್ಲೇ ಗ್ರಾಮ ಪಂಚಾಯತಿ ಚುನಾವಣೆಯನ್ನು ಘೋಷಣೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ನಾವು ತ್ವರಿತವಾಗಿ ಸಂಘಟನೆ ಮಾಡಿ ಕಾರ್ಯಕರ್ತರು ಗೆಲ್ಲಬೇಕೆಂಬ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುವುದು. ನಿಮ್ಮ ಗೆಲುವಿಗೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು. ಹೇಗೆ ನಮ್ಮ ಚುನಾವಣೆಗಳಿಗೆ ನಾವು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೆವೋ, ಹಾಗೇ ನಮಗಾಗಿ ದುಡಿದ ಕಾರ್ಯಕರ್ತರ ಚುನಾವಣೆಗೂ ನಾವು ಅದೇ ರೀತಿ ದುಡಿಯಬೇಕು ಎಂಬ ತೀರ್ಮಾನಕ್ಕೆ ಬಂದಿದ್ದೇನೆ. ಈ ಹಿನ್ನೆಲೆಯಲ್ಲಿ ನಾನು ಜಿಲ್ಲಾ ಪ್ರವಾಸ ಕೈಗೊಂಡಿದ್ದೇನೆ ಎಂದು ಹೇಳಿದರು.

ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರವಧಿ 5 ವರ್ಷಕ್ಕೆ

ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರವಧಿ 5 ವರ್ಷಕ್ಕೆ

ಕಳೆದ ಸರ್ಕಾರದಲ್ಲಿ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರವಧಿ 5 ವರ್ಷಕ್ಕೆ ಹಾಗೂ ಮೀಸಲಾತಿಯನ್ನು 10 ವರ್ಷಕ್ಕೆ ಬದಲಾವಣೆ ಮಾಡುವ ನಿಯಮವನ್ನು ತರಲಾಗಿತ್ತು. ಆದರೆ, ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ಅದನ್ನು ಬದಲಾಯಿಸಿ, ಅಧಿಕಾರಾವಧಿಯನ್ನು ತಲಾ ಎರಡೂವರೆ ವರ್ಷ ಹಾಗೂ ಮೀಸಲಾತಿಯನ್ನು 5 ವರ್ಷಕ್ಕೆ ನಿಗದಿಪಡಿಸಿದ್ದಾರೆ ಎಂದು ತಿಳಿಸಿದರು.

ಮೈಸೂರಲ್ಲಿ ಭಾರೀ ಬೇಡಿಕೆ ಸೃಷ್ಟಿಸಿರುವ ಸಗಣಿಯ ಹಣತೆಗಳುಮೈಸೂರಲ್ಲಿ ಭಾರೀ ಬೇಡಿಕೆ ಸೃಷ್ಟಿಸಿರುವ ಸಗಣಿಯ ಹಣತೆಗಳು

ನಮ್ಮ ಸರ್ಕಾರ ಈ ಕಾನೂನು ತೊಡಕನ್ನು ನಿವಾರಿಸಿದೆ

ನಮ್ಮ ಸರ್ಕಾರ ಈ ಕಾನೂನು ತೊಡಕನ್ನು ನಿವಾರಿಸಿದೆ

ನಾವು ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿದ್ದರಿಂದ ರೈತರಿಗೆ ಈಗ ತಮ್ಮ ಬೆಳೆಯನ್ನು ರಾಜ್ಯದಲ್ಲಿ ಬೇಕಾದರೂ ಮಾರಾಟ ಮಾಡುವ ಅಧಿಕಾರವನ್ನು ನೀಡಿದಂತಾಗಿದೆ. ಜೊತೆಗೆ ಎಪಿಎಂಸಿ ಪರವಾನಗಿ ಹೊಂದಿ ಬೇರೆಡೆ ಮಾರಾಟ ಮಾಡಿದರೆ ದಂಡ ವಿಧಿಸುವುದಲ್ಲದೆ, ಪರವಾನಗಿಯನ್ನೇ ರದ್ದುಪಡಿಸಲಾಗುತ್ತಿತ್ತು. ಈಗ ನಮ್ಮ ಸರ್ಕಾರ ಈ ಕಾನೂನು ತೊಡಕನ್ನು ನಿವಾರಿಸಿದೆ ಎಂದು ತಿಳಿಸಿದರು.

ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಸಹ ರೈತರಿಗೆ ಸಾರ್ವಜನಿಕರಿಗೆ ಸಾಕಷ್ಟು ಅನುಕೂಲಗಳು ಆಗುತ್ತಿದೆ ಎಂದು ಸಚಿವರು ತಿಳಿಸಿದರು.

ಬಿಜೆಪಿ ಸೇರ್ಪಡೆಗೊಂಡ ಯುವ ಸಮೂಹ

ಬಿಜೆಪಿ ಸೇರ್ಪಡೆಗೊಂಡ ಯುವ ಸಮೂಹ

ದಸರಾಕ್ಕೆ ಸಂಬಂಧಿಸಿದಂತೆ ಲೆಕ್ಕ ಕೊಡುವುದಿಲ್ಲ ಎಂಬ ಆರೋಪ ಪ್ರತಿವರ್ಷ ಕೇಳಿ ಬರುತ್ತಿತ್ತು. ಹಾಗಾಗಿ ದಸರಾ ಮುಗಿದ ತಕ್ಷಣ ಲೆಕ್ಕ ಕೊಟ್ಟಿದ್ದೇವೆ. ಒಂದೂವರೆ ಕೋಟಿಯಲ್ಲಿ 10 ದಿನದ ದಸರಾ ಆಚರಣೆ ಮಾಡಿ ಸರಳವಾಗಿ ಮಾಡಿ ತೋರಿಸಲಾಗಿದೆ. ಒಟ್ಟಾರೆಯಾಗಿ 7.8 ಕೋಟಿ ರುಪಾಯಿ ಉಳಿತಾಯವಾಗಿದೆ ಎಂದು ಸಚಿವರು ತಿಳಿಸಿದರು.

ಇದೇ ವೇಳೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳನ್ನು ತೊರೆದು ಬಿಜೆಪಿ ಸೇರ್ಪಡೆಗೊಂಡ ಯುವಕರಿಗೆ, ಪಕ್ಷದ ಶಾಲು ನೀಡುವ ಮೂಲಕ ಅಧಿಕೃತವಾಗಿ ಬರಮಾಡಿಕೊಳ್ಳಲಾಯಿತು. ಮಾಜಿ ಶಾಸಕರಾದ ಬಸವರಾಜಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾರ್ಯಕರ್ತರ ಬೆನ್ನಿಗೆ ಪಕ್ಷ ಇದೆ

ಕಾರ್ಯಕರ್ತರ ಬೆನ್ನಿಗೆ ಪಕ್ಷ ಇದೆ

ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಹುಣಸವಾಡಿಯಲ್ಲಿ ಬಿಜೆಪಿ ಶಕ್ತಿ ಕೇಂದ್ರ ಹಾಗೂ ಮಹಾಶಕ್ತಿ ಕೇಂದ್ರದ ಪ್ರಮುಖರ ಸಭೆಯಲ್ಲಿ ಸಚಿವರಾದ ಎಸ್‌.ಟಿ.ಸೋಮಶೇಖರ್ ಮಾತನಾಡಿ, ಕಾರ್ಯಕರ್ತರ ಬೆನ್ನಿಗೆ ಪಕ್ಷ ಹಾಗೂ ಉಸ್ತುವಾರಿ ಸಚಿವರಾಗಿ ತಾವು ಬೆಂಬಲವಾಗಿ ನಿಲ್ಲುವುದಲ್ಲದೆ, ಕಾನೂನುಬದ್ಧವಾದ ಎಲ್ಲ ರೀತಿಯ ಕೆಲಸಗಳನ್ನು ಮಾಡಿಕೊಡುತ್ತೇನೆ.

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸುವ ಮೂಲಕ ಮುಂದಿನ ತಾಲೂಕು, ಜಿಲ್ಲಾ ಮಟ್ಟದ ಚುನಾವಣೆಗಳಲ್ಲಿಯೂ ಗೆಲುವಿನ ಚುಕ್ಕಾಣಿಯನ್ನು ಹಿಡಿಯಬೇಕು ಎಂದು ಕರೆ ನೀಡಿದರು.

English summary
"Our aim is to bring the party to power at the grassroots level," Cooperative Minister ST Somashekhar said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X