ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಸ್‍ಡಿಪಿಐ ಕಾಂಗ್ರೆಸ್ ಪಕ್ಷದ ಪಾಪದ ಕೂಸು: ಬಿ.ವೈ ವಿಜಯೇಂದ್ರ ಆರೋಪ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಆಗಸ್ಟ್ 17: ಎಸ್‍ಡಿಪಿಐ ಸಂಘಟನೆ ಕಾಂಗ್ರೆಸ್ ಪಕ್ಷದ ಪಾಪದ ಕೂಸಾಗಿದ್ದು, ಬೆಂಗಳೂರಿನ ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿಯ ಗಲಭೆಯ ಹಿಂದೆ ಕಾಂಗ್ರೆಸ್ ಪಕ್ಷದ ಪಿತೂರಿಯಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಆರೋಪಿಸಿದರು.

ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‍ಡಿಪಿಐ ಸಂಘಟನೆಯು ಕಾಂಗ್ರೆಸ್ ನವರು ಬಿತ್ತಿದ ಬೀಜ ಈಗ ಹೆಮ್ಮರವಾಗಿ ಬೆಳೆದಿದೆ. ಇದೇ ಕಾರಣದಿಂದ ಬೆಂಗಳೂರಿನ ಗಲಭೆ ವಿಚಾರದಲ್ಲಿ ಕಾಂಗ್ರೆಸ್ ತನ್ನ ಶಾಸಕನ ಪರ ನಿಲ್ಲಬೇಕೋ ಅಥವಾ ಎಸ್‍ಡಿಪಿಐ ಪರ ನಿಲ್ಲಬೇಕೋ ಎಂಬ ಗೊಂದಲದಲ್ಲಿ ಮುಳುಗಿದೆ ಎಂದು ವಾಗ್ದಾಳಿ ನಡೆಸಿದರು.

ಡಿಜೆ ಹಳ್ಳಿ ಗಲಭೆಕೋರರಿಂದಲೇ ಆಸ್ತಿ ಪಾಸ್ತಿ ನಷ್ಟ ವಸೂಲಿ: ಸಿಎಂ ನೇತೃತ್ವದ ಸಭೆಯಲ್ಲಿ ಮಹತ್ವದ ನಿರ್ಧಾರಡಿಜೆ ಹಳ್ಳಿ ಗಲಭೆಕೋರರಿಂದಲೇ ಆಸ್ತಿ ಪಾಸ್ತಿ ನಷ್ಟ ವಸೂಲಿ: ಸಿಎಂ ನೇತೃತ್ವದ ಸಭೆಯಲ್ಲಿ ಮಹತ್ವದ ನಿರ್ಧಾರ

ಎಸ್‍ಡಿಪಿಐ ಅನ್ನು ಕಾಂಗ್ರೆಸ್ ಅಸ್ತ್ರವಾಗಿ ಬಳಸಿಕೊಳ್ಳುತ್ತಿದ್ದು, ಎಸ್‍ಡಿಪಿಐ ಕಚೇರಿಗೆ ಪೊಲೀಸರು ಭೇಟಿ ನೀಡಿದಾಗ ಮಾರಕಾಸ್ತ್ರಗಳು ಪತ್ತೆಯಾಗಿವೆ. ಹೀಗಾಗಿ ಅಲ್ಲಿಯೇ ಗಲಭೆ ನಡೆಸಲು ಸಭೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಇನ್ನಷ್ಟು ತನಿಖೆಯಾಗಬೇಕಿದೆ ಎಂದರು.

Mysuru: BJP State Vice-President BY Vijayendra Reacted On DJ Halli Riot

ಬಿಜೆಪಿ ಪಕ್ಷದ ಬಗ್ಗೆ ಮಾತನಾಡಲು ಕಾಂಗ್ರೆಸ್ ಗೆ ಯಾವುದೇ ನೈತಿಕತೆಯಿಲ್ಲ, ಕಾಂಗ್ರೆಸ್ ಪಕ್ಷದ ಆಂತರಿಕ ಕಚ್ಚಾಟದಿಂದ ಬೆಂಗಳೂರು ಗಲಭೆ ಸಂಭವಿಸಿದ್ದು, ಕಾಂಗ್ರೆಸ್ ನಾವಿಕನಿಲ್ಲದ ದೋಣಿಯಂತಾಗಿದೆ ಎಂದು ಟೀಕಿಸಿದರು.

ಇದೇ ವೇಳೆ ಸಂಸದ ವಿ.ಶ್ರೀನಿವಾಸ ಪ್ರಸಾದ್ ನಿವಾಸಕ್ಕೆ ಭೇಟಿ ನೀಡಿದ ಬಗ್ಗೆ ಮಾತನಾಡಿದ ಅವರು, ಶ್ರೀನಿವಾಸ್ ಪ್ರಸಾದ್ ಅವರು ಹಿರಿಯ ನಾಯಕರಾಗಿದ್ದು, ನಾನು ಅವರ ಮಾರ್ಗದರ್ಶನ ಪಡೆದುಕೊಳ್ಳುತ್ತೇನೆ. ಹೀಗಾಗಿ ಅವರ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡಿದ್ದೇನೆ. ಆದರೆ ಈ ವೇಳೆ ಯಾವುದೇ ರಾಜಕೀಯ ವಿಚಾರ ಚರ್ಚೆ ನಡೆದಿಲ್ಲ ಎಂದರು.

ಎಚ್.ವಿಶ್ವನಾಥ್ ಅವರಿಗೆ ಮಂತ್ರಿ ಸ್ಥಾನ ನೀಡುವ ವಿಚಾರ ಪ್ರಸ್ತಾಪವಾಗಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳು ತೀರ್ಮಾನ ಮಾಡಲಿದ್ದಾರೆ. ವಿಶ್ವನಾಥ್ ಅವರು ತ್ಯಾಗ ಮಾಡಿ ಬಿಜೆಪಿಗೆ ಬಂದಿದ್ದಾರೆ. ಈಗಲೂ ನನ್ನ ತಂದೆಯ ಜೊತೆಗಿದ್ದಾರೆ. ನಾನು ಮೈಸೂರಿಗೆ ಬಂದಾಗಲೆಲ್ಲಾ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಳ್ಳುತ್ತೇನೆ ಎಂದು ಹೇಳಿದರು.

ನಿಗಮ, ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಆಗದ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಹಾಗೂ ಪಕ್ಷದ ರಾಜ್ಯಾಧ್ಯಕ್ಷರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಶೀಘ್ರದಲ್ಲೇ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಆಗಲಿದೆ ಎಂದರು.

English summary
BJP state vice-president BY Vijayendra alleged that the Congress party was behind the riots in the DG Halli and KG Halli in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X