ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸ್ವಾತಂತ್ರ್ಯ ದಿನಾಚರಣೆ: ಈ ಬಾರಿ ಮೈಸೂರಿನಲ್ಲಿ 'ಮಿಡ್ ನೈಟ್ ಫ್ರೀಡಂ ರನ್' ಆಯೋಜನೆ

By Yashaswini
|
Google Oneindia Kannada News

ಮೈಸೂರು, ಆಗಸ್ಟ್ 14 : ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬಿಜೆಪಿ ಯುವ ಮೋರ್ಚಾ ರಾಜ್ಯ ಘಟಕದ ವತಿಯಿಂದ ಇಂದು (ಆ.14) ಮಧ್ಯರಾತ್ರಿ ಮೈಸೂರು ನಗರದಲ್ಲಿ 'ಮಿಡ್ ನೈಟ್ ಫ್ರೀಡಂ ರನ್' ಕಾರ್ಯಕ್ರಮ ಆಯೋಜಿಸಲಾಗಿದೆ.

ಮಧ್ಯರಾತ್ರಿ 12 ಗಂಟೆಗೆ ಸರಿಯಾಗಿ ಮೈಸೂರು ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಎದುರು ಧ್ವಜಾರೋಹಣ ನೆರವೇರಿಸಲಾಗುವುದು. ಬಳಿಕ ಇಲ್ಲಿಂದ ಮಿಡ್ ನೈಟ್ ಫ್ರೀಡಂ ರನ್ ಆರಂಭವಾಗಿ ಮೈಸೂರು ಅರಮನೆಯ ಸುತ್ತ ಒಂದು ಸುತ್ತು ಬರಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಸ್ವಾತಂತ್ರ್ಯ ದಿನ ಸಂಭ್ರಮದಲ್ಲಿ ಗಾಂಧೀಜಿ ಗೈರಾಗಿದ್ದರು, ಯಾಕೆ ಗೊತ್ತಾ?ಸ್ವಾತಂತ್ರ್ಯ ದಿನ ಸಂಭ್ರಮದಲ್ಲಿ ಗಾಂಧೀಜಿ ಗೈರಾಗಿದ್ದರು, ಯಾಕೆ ಗೊತ್ತಾ?

ಇದಕ್ಕೂ ಮುನ್ನ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಎದುರು ರಾತ್ರಿ 8.30ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಜೀವನ ಮತ್ತು ಸಾಧನೆ ಕುರಿತ 32 ನಿಮಿಷಗಳ ಕಿರುಚಿತ್ರ ಪ್ರದರ್ಶನ ನಡೆಯಲಿದೆ. ಬಳಿಕ ಬಿಗ್ ಬಾಸ್ ಖ್ಯಾತಿಯ ಚಂದನಶೆಟ್ಟಿ ಅವರ ಸಂಗೀತ ಕಾರ್ಯಕ್ರಮ ಇರಲಿದ್ದು, ನಂತರ ಈ ಓಟದ ಉದ್ದೇಶವೇನೆಂಬ ಬಗ್ಗೆ ಒಂದಿಷ್ಟು ಭಾಷಣ ಇರಲಿದೆ.

BJP Yuva Morcha State unit organized Mid Night Freedom Run in Mysore

ಓಟದಲ್ಲಿ ಸೆಲೆಬ್ರಿಟಿಗಳು ಪಾಲ್ಗೊಳ್ಳಲಿದ್ದು, ಸುಮಾರು 5 ಸಾವಿರ ಮಂದಿ ಓಟದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಮಿಡ್ ನೈಟ್ ರನ್ ಕಾರ್ಯಕ್ರಮವನ್ನು ಕಳೆದ ಎರಡು ವರ್ಷ ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಈ ಬಾರಿ ಮೈಸೂರಿನಲ್ಲಿ ಹಮ್ಮಿಕೊಂಡಿದ್ದು, ಇದರ ಜೊತೆಗೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

English summary
BJP Yuva Morcha State unit organized 'Mid Night Freedom Run' in Mysore on the occasion of Independence Day. Celebrities will be participating in this race.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X