ಮೈಸೂರು ಉದಯಗಿರಿ ಗಲಾಟೆ: ಕಾಂಗ್ರೆಸ್‌ ಸರ್ಕಾರ ವಿರುದ್ಧ ಗುಡುಗಿದ ವಿಜಯೇಂದ್ರ

ಮೈಸೂರು, ಫೆಬ್ರವರಿ 11: ದೆಹಲಿಯಲ್ಲಿ ಬಿಜೆಪಿ ಗೆಲುವಿಗೆ ಸಂಬಂಧಿಸಿಂದಂತೆ ಯುವಕನೊಬ್ಬ ಹಾಕಿದ ಸೋಷಿಯಲ್‌ ಮೀಡಿಯಾ ಪೋಸ್ಟ್‌, ಸಾಂಸ್ಕೃತಿಕ ನಗರಿ ಮೈಸೂರಿನ ಉದಯಗಿರಿಯಲ್ಲಿ ದೊಡ್ಡ ಅವಾಂತರವನ್ನೇ ಸೃಷ್ಟಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಪೋಸ್ಟ್‌ವೊಂದು ಪೊಲೀಸರ ಮೇಲೆ ಹಾಗೂ ಪೊಲೀಸ್‌ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸುವ ಹಂತಕ್ಕೆ ತಂದು ನಿಲ್ಲಿಸಿದೆ.

ಉದಯಗಿರಿ ಪೊಲೀಸ್ ಠಾಣೆಯ ಮೇಲೆ ತಡರಾತ್ರಿ ಕಲ್ಲು ತೂರಾಟ ನಡೆದಿದ್ದು, ಸದ್ಯ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಇದೀಗ ಈ ಗಲಾಟೆಯು ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತಿದ್ದು, ಘಟನೆಯನ್ನು ಬಿಜೆಪಿ ನಾಯಕರು ತೀವ್ರವಾಗಿ ಖಂಡಿಸುತ್ತಿದ್ದಾರೆ. ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದು, ಮೈಸೂರು ಕೋಮು ದಳ್ಳುರಿಗೆ ಸಿಲುಕುವ ಅಪಾಯಕ್ಕೆ ತಲುಪಿದರೆ ಕಾಂಗ್ರೆಸ್ ಸರ್ಕಾರವೇ ಅದರ ಹೊಣೆ ಹೊರಬೇಕಾದೀತು ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಸಿದ್ದಾರೆ.

BJP s B Y Vijayendra Condemns Udayagiri Violence and Warns Congress of Consequences

ಮೈಸೂರಿನ ಉದಯಗಿರಿಯಲ್ಲಿ ನಡೆದಿರುವ ಪುಂಡರ ಗುಂಪಿನ ಅಟ್ಟಹಾಸ ಕಾನೂನು ಸುವ್ಯವಸ್ಥೆಯನ್ನೇ ಮೂಲೋತ್ಪಾಟನೆ ಮಾಡುವ ವಿದ್ವಾಂಸಕ ಶಕ್ತಿಗಳ ಪ್ರದರ್ಶನವಾಗಿದೆ. ಅಲ್ಪಸಂಖ್ಯಾತರ ಓಲೈಕೆ ಕಾಂಗ್ರೆಸ್ ಸರ್ಕಾರದ ಆದ್ಯತೆ ಎಂಬಂತೆ ನಡೆದುಕೊಳ್ಳುತ್ತಿರುವ ಸರ್ಕಾರದ ಧೋರಣೆ ಮತೀಯವಾದಿ ಪುಂಡ ಪೋಕರಿಗಳಿಗೆ ರಹದಾರಿ ಕೊಟ್ಟಂತಾಗಿದೆ.

ಕೋಮುವಾದಿ ರಕ್ಕಸ ವರ್ತನೆಯನ್ನು ಸಮರ್ಥಿಸುವ ರೀತಿಯಲ್ಲಿ ಮಾತನಾಡಿರುವ ಸಚಿವ ಕೆ.ಎನ್‌ ರಾಜಣ್ಣ ಅವರು ಪೊಲೀಸರ ನೈತಿಕ ಸ್ಥೈರ್ಯವನ್ನು ಕುಗ್ಗಿಸುವ ಪರಿಯಲ್ಲಿ ಘಟನೆಯನ್ನು ವ್ಯಾಖ್ಯಾನಿಸಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಎನ್ ಆರ್ ಕ್ಷೇತ್ರದ ಉದಯಗಿರಿ ಠಾಣಾ ವ್ಯಾಪ್ತಿ ಹಿಂದಿನಿಂದಲೂ ಮುಸ್ಲಿಂ ಸಮುದಾಯದ ಬಾಹುಳ್ಯದಲ್ಲಿದ್ದು ನಿರಂತರವಾಗಿ ಮತೀಯ ದುಷ್ಕರ್ಮಿಗಳು ಕ್ರೌರ್ಯ ಮೆರೆಯುತ್ತಿದ್ದಾರೆ. ಪೊಲೀಸರ ಮೇಲೆ ಹಲ್ಲೆ ನಡೆಸುವಷ್ಟು ಬಲಿಷ್ಠರಾಗಿದ್ದಾರೆ. ಹಿಂದೂ ಕಾರ್ಯಕರ್ತರ ಸರಣಿ ಕೊಲೆಗಳು ಈ ವ್ಯಾಪ್ತಿಯಲ್ಲಿ ಈ ಹಿಂದೆಯೂ ನಡೆದಿದೆ.

ಇಷ್ಟಾಗಿಯೂ ಈ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆಯನ್ನು ನಿಯಂತ್ರಿಸುವ ಯಾವ ಕ್ರಮವನ್ನೂ ಕಾಂಗ್ರೆಸ್ ಸರ್ಕಾರ ಕೈಗೊಂಡಿಲ್ಲ. ಬದಲಾಗಿ ಈ ಪ್ರದೇಶವನ್ನು ವಿಧ್ವಂಸಕ ಚಟುವಟಿಕೆಯ ತಾಣವಾಗಿ ಪೋಷಿಸುತ್ತಿದೆ. ಅದರ ಪರಿಣಾಮವಾಗಿಯೇ ಕ್ಷುಲ್ಲಕ ಕಾರಣವನ್ನು ಮುಂದಿಟ್ಟುಕೊಂಡು ಕಿಡೆಗೇಡಿಗಳೆಲ್ಲ ಒಟ್ಟುಗೂಡಿ ದಂಗೆ ಎದ್ದು ಪೊಲೀಸರಿಗೆ ಸವಾಲೆಸೆದಿದ್ದಾರೆ.

BJP s B Y Vijayendra Condemns Udayagiri Violence and Warns Congress of Consequences

ಈ ಕೂಡಲೇ ಕಾಂಗ್ರಸ್‌ ಸರ್ಕಾರ ಕೋಮು ಪಕ್ಷಪಾತದ ಧೋರಣೆಯನ್ನು ಬದಿಗಿಟ್ಟು ಸಮಾಜಘಾತುಕ ದುಷ್ಟರ ವಿರುದ್ಧ ಕಠಿಣ ಕ್ರಮ ಜರುಗಿಸದಿದ್ದರೆ ಶಾಂತಿ-ಸುವ್ಯವಸ್ಥೆಗೆ ಹೆಸರಾದ ಮೈಸೂರು ಕೋಮು ದಳ್ಳುರಿಗೆ ಸಿಲುಕುವ ಅಪಾಯಕ್ಕೆ ತಲುಪಿದರೆ ಕಾಂಗ್ರೆಸ್ ಸರ್ಕಾರವೇ ಅದರ ಹೊಣೆ ಹೊರಬೇಕಾದೀತು ಎಂದು ಬಿ.ವೈ ವಿಜಯೇಂದ್ರ ಎಚ್ಚರಿಕೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+