ಮಳೆಯ ಹಿನ್ನೆಲೆಯಲ್ಲಿ ರಂಗನತಿಟ್ಟು ಪಕ್ಷಿಧಾಮದ ಬೋಟಿಂಗ್ ಸ್ಥಗಿತ
ರಂಗನತಿಟ್ಟು, ಜುಲೈ 22: "ನೀರಿನ ಹರಿವು ಹೆಚ್ಚಾದ ಕಾರಣ ರಂಗನತಿಟ್ಟು ಪಕ್ಷಿಧಾಮದಲ್ಲಿ ಪ್ರವಾಸಿಗರಾಗಿ ನಡೆಸಲಾಗುತ್ತಿದ್ದ ಬೋಟಿಂಗ್ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಕೊಡಗಿನಲ್ಲಿ ಮಳೆ ಪ್ರಮಾಣ ಹೆಚ್ಚಳಗೊಂಡಿದ್ದು, ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಬೋಟಿಂಗ್ ವ್ಯವಸ್ಥೆ ಸ್ಥಗಿತಗೊಳಿಸಲಾಗಿದೆ. ಮತ್ತೆ ಆರಂಭವಾಗುವ ದಿನಾಂಕವನ್ನು ಪ್ರಕಟಿಸಲಾಗುವುದು" ಎಂದು ಉಪ ವಲಯ ಅರಣ್ಯಾಧಿಕಾರಿ ಪುಟ್ಟಮಾದೇಗೌಡ ತಿಳಿಸಿದ್ದಾರೆ.
ಶ್ರೀರಂಗಪಟ್ಟಣದ ಬಳಿ ಇರುವ ಪಕ್ಷಿಧಾಮಕ್ಕೆ ಪ್ರತಿ ದಿನ ನೂರಾರು ಸಂಖ್ಯೆಯಲ್ಲಿ ಭೇಟಿ ನೀಡುತ್ತಾರೆ. ನದಿಯ ಎರಡೂ ಭಾಗದಲ್ಲಿ ಗೂಡು ಕಟ್ಟಿ ವಾಸಿಸುವ ಪಕ್ಷಿಗಳ ಫೋಟೋ ಕ್ಲಿಕ್ಕಿಸುವ ಎಷ್ಟೋ ಮಂದಿಗೆ ಇದು ಬಹು ನೆಚ್ಚಿನ ತಾಣ. ಇದೀಗ ಕೆಆರ್ ಎಸ್ ಅಣೆಕಟ್ಟಿನಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಟ್ಟಿರುವ ಹಿನ್ನೆಲೆಯಲ್ಲಿ ಬೋಟಿಂಗ್ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿದೆ.
ರಂಗನತಿಟ್ಟು ಪಕ್ಷಿಧಾಮದ ಆವರಣಕ್ಕೆ ಪ್ರವಾಸಿಗರು ಭೇಟಿ ನೀಡಬಹುದು. ಇದಕ್ಕೆ ಯಾವುದೇ ಅಡ್ಡಿಯಿಲ್ಲ. ಆದರೆ ಬೋಟಿಂಗ್ ಹೋಗಲು ಆಗುವುದಿಲ್ಲ. ಅಲ್ಲಿನ ಪ್ರಕೃತಿ ಸೌಂದರ್ಯ ವೀಕ್ಷಣೆಗೆ ಯಾವುದೇ ಅಡ್ಡಿ ಇಲ್ಲ. ಆದರೆ ಇದರಿಂದಾಗಿ ಪಕ್ಷಿಗಳಿಗೆ ಯಾವುದೇ ತೊಂದರೆ ಇಲ್ಲ.

ಕೆಆರ್ ಎಸ್ ನಿಂದ 1 ಲಕ್ಷ ಕ್ಯೂಸೆಕ್ ಗೂ ಹೆಚ್ಚಿನ ಪ್ರಮಾಣದ ನೀರು ಹೊರಬಂದಲ್ಲಿ ಮಾತ್ರ ಪಕ್ಷಿಗಳಿಗೆ ತೊಂದರೆಯಾಗುತ್ತದೆ. 1990ರ ದಶಕದಲ್ಲಿ ಈ ರೀತಿ ತೊಂದರೆಯಾಗಿತ್ತು. "ಪ್ರವಾಸಿಗರ ಸುರಕ್ಷತೆ ನಮಗೆ ಮುಖ್ಯ. ಈ ಹಿನ್ನೆಲೆಯಲ್ಲಿ ಬೋಟಿಂಗ್ ಸ್ಥಗಿತಗೊಳಿಸಲಾಗಿದೆ" ಎಂದು ಉಪ ವಲಯ ಅರಣ್ಯಾಧಿಕಾರಿ ಹೇಳಿದ್ದಾರೆ.












Click it and Unblock the Notifications