• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ವಾಹನ ಓಡಿಸುವಾಗ ಪೊಲೀಸರಿಗೆ ಸಿಕ್ಕಿಬಿದ್ದ ಬಾಲಕ ಆತ್ಮಹತ್ಯೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜುಲೈ 1: ನಂಬರ್ ಪ್ಲೇಟ್ ಇಲ್ಲದ ದ್ವಿಚಕ್ರ ವಾಹನ ಓಡಿಸಿ ಪೊಲೀಸರಿಗೆ ಸಿಕ್ಕಿಬಿದ್ದ ಬಾಲಕನೊಬ್ಬ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಸುಣ್ಣದಕೇರಿಯಲ್ಲಿ ನಡೆದಿದೆ.

ದರ್ಶನ್ (17) ಎಂಬಾತ ವಾಹನ ಓಡಿಸುವಾಗ ಪೊಲೀಸರು ತಡೆದು ವಾಹನವನ್ನು ವಶಕ್ಕೆ ಪಡೆದಿದ್ದರು. ಪೋಷಕರನ್ನು ಠಾಣೆಗೆ ಕರೆದುಕೊಂಡು ಬರುವಂತೆ ತಿಳಿಸಿದ್ದರು. ಆದರೆ ಪೊಲೀಸ್‌ ಠಾಣೆಯಲ್ಲಿ ತಮ್ಮ ಮಗನಿಗೆ ಥಳಿಸಿದ್ದಾರೆ, ಇದರಿಂದ ಬೇಸರಗೊಂಡು ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.

 ಮೂರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಮೂರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಬೈಕ್ ತಪಾಸಣೆ ವೇಳೆ ಹಿಂಬದಿಯಲ್ಲಿ ನಂಬರ್ ಪ್ಲೇಟ್ ಇರಲಿಲ್ಲ. ಇದನ್ನು ಪ್ರಶ್ನೆ ಮಾಡಿ, ಪೊಲೀಸರು ಬೈಕ್ ವಶಕ್ಕೆ ಪಡೆದಿದ್ದರು. ನಂತರ ಬಾಲಕ ಹಾಗೂ ಆತನ ಸ್ನೇಹಿತನನ್ನು ಮನೆಗೆ ಕಳುಹಿಸಿದ್ದರು. ಆದರೆ ಠಾಣೆಯಲ್ಲಿ ಆದ ಅವಮಾನ ಸಹಿಸಲಾಗದೆ ಮನೆಗೆ ಬಂದು ಸ್ನಾನದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಕೆ.ಆರ್‌. ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

English summary
A boy who was caught by police driving a two-wheeler without a number plate committed suicide in mysuru
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X