ಬ್ರ್ಯಾಂಡ್ ಬೆಂಗಳೂರು ಮಾದರಿ ಜ.26ರಿಂದ ಮೂರು ದಿನ ಬ್ರ್ಯಾಂಡ್ ಮೈಸೂರು ಉತ್ಸವ
ಮೈಸೂರು, ಡಿಸೆಂಬರ್ 19: ಮೈಸೂರಿಗೆ ಜಾಗತಿಕ ಮಾರುಕಟ್ಟೆ ಸೃಷ್ಟಿಸಿ, ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಜ. 26ರಿಂದ ಮೂರು ದಿನ ಬ್ರ್ಯಾಂಡ್ ಮೈಸೂರು ಫೆಸ್ಟ್ ಆಯೋಜಿಸಲು ಪ್ರವಾಸೋದ್ಯಮ ಇಲಾಖೆ ನಿರ್ಧರಿಸಿದೆ.
ಮೈಸೂರಿನಲ್ಲಿ ಈ ಸಂಬಂಧ ಮಾಹಿತಿ ನೀಡಿದ ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ.ಮಹದೇವಪ್ಪ,' ಮೈಸೂರು ೆಸ್ಟ್ ಅಂಗವಾಗಿ ಮೈಸೂರು ಪರಂಪರೆಯನ್ನು ಬಿಂಬಿಸುವ ಅತ್ಯುತ್ತಮ ಕಲಾ ತಂಡಗಳಿಂದ ನಗಾರಿ, ಡೊಳ್ಳು, ಭರತನಾಟ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಮಕ್ಕಳು ಹಾಗೂ ದೊಡ್ಡವರಿಗಾಗಿ ಚಿತ್ರಸಂತೆ, ಜಾಗತಿಕ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿರುವ ಮೈಸೂರು ಸ್ಥಳೀಯ ಉತ್ಪನ್ನಗಳನ್ನು ಉತ್ತಮ ಗುಣಮಟ್ಟದಲ್ಲಿ ನಿರ್ದಿಷ್ಟ ಬೆಲೆಗೆ ಒಂದೇ ಸೂರಿನಡಿ ಮಾರಾಟ ಮಾಡಲು ಮಾರ್ಕೆಟಿಂಗ್ ಆಯೋಜನೆ, ಆಹಾರಮೇಳ, ್ಯಾಷನ್ ಶೋ ( ವಿವಿಧ ಬ್ರಾಂಡ್ ವಸ್ತುಗಳ ಮಾರಾಟಗಾರರಿಂದ ಸೇಲ್ಸ್ ಉತ್ತೇಜನಕ್ಕಾಗಿ), ಗಾಳಿಪಟ ಉತ್ಸವ, ರಾಕ್ ಬ್ಯಾಂಡ್ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮಾತನಾಡಿ, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವಪ್ರಸಿದ್ಧ ಅಂಬಾವಿಲಾಸ ಅರಮನೆ ಮುಂಭಾಗ ಇನ್ನು ಮುಂದೆ ಸುಮಾರು 26 ವಾರಾಂತ್ಯಗಳಲ್ಲಿ ನಾನಾ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿ ಪ್ರವಾಸಿಗರನ್ನು ಆಕರ್ಷಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜನವರಿ ಮೊದಲ ವಾರದಲ್ಲಿ ಜಿಲ್ಲಾ ಪ್ರವಾಸೋದ್ಯಮ ಸಮಿತಿ ಸಭೆ ಕರೆದು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವ ಕುರಿತು ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದರು.
ಪ್ರತಿ ತಿಂಗಳು ಒಂದೊಂದು ಕಾರ್ಯಕ್ರಮ ನಡೆಸಲು ಚಿಂತನೆ ಮಾಡಲಾಗಿದೆ. ಸೋಮನಾಥಪುರದಲ್ಲಿ ೆಬ್ರವರಿ ತಿಂಗಳಲ್ಲಿ ಉತ್ಸವ ನಡೆಸಲು ಕ್ರಿಯಾಯೋಜನೆ ರೂಪಿಸಿ ಸಲ್ಲಿಸುವಂತೆ ಪ್ರವಾಸೋದ್ಯಮ ಸಚಿವರು ಹೇಳಿದ್ದಾರೆ. ಅದೇ ರೀತಿ ಚುಂಚನಕಟ್ಟೆ ಜಲಪಾತೋತ್ಸವ ನಡೆಸಲು ಬೇಡಿಕೆ ಬಂದಿದೆ. ಹೀಗಾಗಿ, ಪ್ರತಿ ತಿಂಗಳು ಪ್ರವಾಸೋದ್ಯಮಕ್ಕೆ ಪೂರಕವಾಗುವ ಕಾರ್ಯಕ್ರಮಗಳನ್ನು ನಡೆಸಲು ಯೋಜನೆ ಹಾಕಿಕೊಳ್ಳಲಾಗುತ್ತಿದೆ ಎಂದರು.
ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಎಂ.ಕೆ.ಸವಿತಾ ಮಾತನಾಡಿ, ಮೈಸೂರು ಪ್ರವಾಸೋದ್ಯಮವನ್ನು ಉತ್ತೇಜಿಸಲು ಈಗಾಗಲೇ ಬ್ರ್ಯಾಂಡ್ ಮೈಸೂರು ಲೋಗೋವನ್ನು ಬಿಡುಗಡೆ ಮಾಡಲಾಗಿದೆ. ಜ.26ರಿಂದ ಮೂರು ದಿನ ಕಾರ್ಯಕ್ರಮ ನಿಗದಿಪಡಿಸಲಾಗಿದೆ. ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವ ಜತೆಗೆ ಇತರ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತದೆ,'' ಎಂದರು.

'ಪ್ರವಾಸೋದ್ಯಮ ಇಲಾಖೆ ವತಿಯಿಂದ 50 ಲಕ್ಷ ರೂ.ಅನುದಾನ ನೀಡಲಿದ್ದು, ಉಳಿದ ಅನುದಾನವನ್ನು ಒದಗಿಸಬೇಕಿದೆ ಎಂದು ಪ್ರಸ್ತಾಪಿಸಿದರು. ಪ್ರತಿಕ್ರಿಯಿಸಿದ ಸಚಿವ ಡಾ.ಎಚ್.ಸಿ.ಮಹದೇವಪ್ಪ, ''ಮೂರು ದಿನ ಅದ್ಧೂರಿಯಾಗಿ ಮಾಡಬೇಕಾದರೆ 50 ಲಕ್ಷ ಸಾಕಾಗುವುದಿಲ್ಲ. ಇಲಾಖೆಗೆ 50 ಲಕ್ಷ ರೂ. ಹೆಚ್ಚುವರಿ ಅನುದಾನಕ್ಕೆ ಪ್ರಸ್ತಾಪ ಮಾಡಬೇಕು. ಪ್ರಾಯೋಜಕತ್ವದ ಮೂಲಕ ಒಂದು ಕೋಟಿ ರೂ. ಸಂಗ್ರಹಿಸಿ ಕಾರ್ಯಕ್ರಮ ರೂಪಿಸಬಹುದು,'' ಎಂದು ಹೇಳಿದರು.
ಸಭೆಯಲ್ಲಿ ಪೋಲಿಸ್ ವರಿಷ್ಠಾಧಿಕಾರಿ ಸೀಮಾಲಾಟ್ಕರ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ದಿನೇಶ್ ಕುರ್ಮಾ, ಪ್ರಾಚ್ಯ ವಸ್ತು ಸಂಗ್ರಹಾಲಯದ ಆಯುಕ್ತರಾದ ದೇವರಾಜು, ಡಿಸಿಪಿ ಮುತ್ತುರಾಜ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ.ಕೆ ಹರೀಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಹೋಟೆಲ್ ಓರ್ನ ಅಸೋಸಿಯೇಷನ್ ನ ಅಧ್ಯಕ್ಷರಾದ ನಾರಾಯಣ್ ಗೌಡ, ಮೈಸೂರು ವಾಣಿಜ್ಯ ಹಾಗೂ ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಕೆ ಬಿ ಲಿಂಗರಾಜು, ಮೈಸೂರು ಸಂಘ ಸಂಸ್ಥೆಗಳ ಅಧ್ಯಕ್ಷರಾದ ಪ್ರಶಾಂತ್ ಬಿ.ಎಸ್., ಮೈಸೂರು ಮರ್ಚೆಂಟ್ ಅಸೋಸಿಯೇಷನ್ ಅಧ್ಯಕ್ಷರಾದ ಆನಂದ್, ಮೈಸೂರು ಟ್ರಾವೆಲ್ಸ್ ಅಸೋಸಿಯೇಷನ್ ನ ಅಧ್ಯಕ್ಷ ಜೆ.ಪಿ ಅರಸ್, ಜವಾಜಿ ಹೋಟೆಲ್ ಗ್ರೂಪ್ಸನ ಜೆ. ಬಾಪೂಜಿ ಸೇರಿದಂತೆ ಇತರರು ಉಪಸ್ಥಿತರಿದ್ದರು.












Click it and Unblock the Notifications