• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೈಸೂರು: ಲಂಚ ಕೇಳಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎಸಿಬಿ ಬಲೆಗೆ

By ಮೈಸೂರು ಪ್ರತಿನಿಧಿ
|

ಮೈಸೂರು, ಸೆಪ್ಟೆಂಬರ್ 4: ಕೃಷಿ ಹೊಂಡ ನಿರ್ಮಾಣಕ್ಕೆ ಹಣ ಮಂಜೂರು ಮಾಡಲು ರೈತರೊಬ್ಬರ ಬಳಿ ಲಂಚದ ಬೇಡಿಕೆ ಇಟ್ಟ ತಿ.ನರಸೀಪುರ ತಾಲೂಕಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯು ಎಸಿಬಿ ಬಲೆಗೆ ಬಿದ್ದಿದ್ದಾರೆ.

ಯಾಚೇನಹಳ್ಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರೇಶ್ ಎಂಬುವವರೇ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದವರಾಗಿದ್ದಾರೆ. ಯಲಚೇನಹಳ್ಳಿಯ ರೈತ ಹೇಮಂತ್‌ ಅವರು ತಮ್ಮ ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡಲು ಸರ್ಕಾರದ ಹಣ ಮಂಜೂರಾತಿ ಕೋರಿ ಅರ್ಜಿ ಸಲ್ಲಿಸಿದ್ದರು.

ಮೈಸೂರು; 8 ವರ್ಷಗಳ ನಂತರ ಪತ್ತೆಯಾದರು ಕೊಲೆಗೆ ಯತ್ನಿಸಿದ್ದ ಆರೋಪಿಗಳು

ಆದರೆ ಹಣ ಮಂಜೂರು ಮಾಡಬೇಕೆಂದರೆ 20 ಸಾವಿರ ರೂ. ಲಂಚ ನೀಡಬೇಕೆಂದು ಪಿಡಿಒ ಚಂದ್ರೇಶ್ ಒತ್ತಾಯ ಮಾಡುತ್ತಿದ್ದರು. ಹಾಗಾಗಿ ಹೇಮಂತ್ ಈ ಕುರಿತು ಎಸಿಬಿಗೆ ದೂರು ನೀಡಿದ್ದರು.

ದೂರಿನ ಆಧಾರದ ಮೇಲೆ ಗುರುವಾರ ದಾಳಿ ನಡೆಸಿದ ಎಸಿಬಿ ಪೊಲೀಸರು 20 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಚಂದ್ರೇಶ್ ನನ್ನು ವಶಕ್ಕೆ ಪಡೆದಿದ್ದಾರೆ. ಎಸಿಬಿ ಡಿವೈಎಸ್ಪಿ ಪರಶುರಾಮಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.

English summary
A Gram Panchayat development officer in T.Narasipura taluk, who had demanded a bribe from a farmer to finance the construction of farm pits, has fallen into the ACB trap.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X