ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆನ್‌ಲೈನ್ ಕ್ಯಾಂಪೇನ್: ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ!

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜೂನ್ 12: ನಿರ್ಗಮಿತ ಮೈಸೂರು ಜಿಲ್ಲಾಧಿಕಾರಿ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪರ ಮತ್ತೆ ಆನ್‌ಲೈನ್ ಕ್ಯಾಂಪೇನ್ ಶುರುವಾಗಿದೆ.

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯನ್ನು ಮತ್ತೆ ಮೈಸೂರಿಗೆ ಜಿಲ್ಲಾಧಿಕಾರಿಯಾಗಿ ನೇಮಿಸುವಂತೆ ಸಾಮಾಜಿಕ ಜಾಲತಾಣದಲ್ಲಿ ಒತ್ತಾಯ ಮಾಡಲಾಗುತ್ತಿದೆ.

"ರೋಹಿಣಿ ಸಿಂಧೂರಿ ಆಂಧ್ರಕ್ಕೆ ಹೋಗಿ ಮಕ್ಕಳನ್ನಾಡಿಸಲಿ''

"ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ" ಸಹಿ ಸಂಗ್ರಹ ಅಭಿಯಾನ ಶುರುವಾಗಿದ್ದು, "ಚೇಂಜ್ ಆರ್ಗ್' ಸಾಮಾಜಿಕ ಮಾಧ್ಯಮದಲ್ಲಿ ಅಭಿಯಾನ ಆರಂಭಿಸಲಾಗಿದೆ.

Mysuru: Bring Back Rohini Sindhuri As Mysuru DC: Online Campaign Has Been Launched

ಈಗಾಗಲೇ ಸುಮಾರು 26 ಸಾವಿರ ಜನರಿಂದ ಸಹಿ ಸಂಗ್ರಹ ಮಾಡಲಾಗಿದ್ದು, ರೋಹಿಣಿ ಸಿಂಧೂರಿಯನ್ನು ಮರಳಿ ಮೈಸೂರು ಜಿಲ್ಲಾಧಿಕಾರಿಯನ್ನಾಗಿ ನೇಮಿಸುವಂತೆ ಮನವಿ ಮಾಡಲಾಗುತ್ತಿದೆ.

ಸಹಿ ಸಂಗ್ರಹ ಅಭಿಯಾನದ ಮೂಲಕ ರಾಷ್ಟ್ರಪತಿ ರಾಮನಾಥ್ ಕೋವಿಂದ್‌ಗೆ ಮನವಿ ಮಾಡಿದ್ದು, ರೋಹಿಣಿ ಸಿಂಧೂರಿ ಭೂ ಮಾಫಿಯಾದ ಬಲಿಪಶು ಎಂದು ಹೇಳಿಕೊಂಡ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಬೆಂಬಲ ವ್ಯಕ್ತವಾಗುತ್ತಿದೆ.

Mysuru: Bring Back Rohini Sindhuri As Mysuru DC: Online Campaign Has Been Launched

35 ಸಾವಿರ ಸಹಿ ಸಂಗ್ರಹಿಸುವ ಗುರಿ ಹೊಂದಲಾಗಿದ್ದು, ಆನ್‌ಲೈನ್ ಅಭಿಯಾನ ಮುಂದುವರಿಕೆಯಾಗಲಿದೆ ಎಂದು ಅಭಿಯಾನ ಆಯೋಜಕರು ಹೇಳಿದ್ದಾರೆ.

ಐಎಎಸ್ ಅಧಿಕಾರಿಗಳಾದ ಶಿಲ್ಪಾನಾಗ್ ಮತ್ತು ರೋಹಿಣಿ ಸಿಂಧೂರಿ ಅಸಮಾಧಾನ ಬಹಿರಂಗವಾದ ನಂತರ ಈ ಇಬ್ಬರೂ ಅಧಿಕಾರಿಗಳನ್ನು ಕಳೆದ ಒಂದು ವಾರದ ಹಿಂದೆ ವರ್ಗಾವಣೆ ಮಾಡಿ, ಅವರ ಜಾಗಕ್ಕೆ ಬೇರೆ ಅಧಿಕಾರಿಗಳನ್ನು ನೇಮಿಸಲಾಗಿದೆ.

English summary
Online campaign has been launched to bring back Rohini Sindhuri as Deputy Commissioner of Mysuru. After the transfer of Rohini Sindhuri a 2009 batch IAS officer, a social media campaign is launched at various levels to muster support for the officer who claimed to be a victim of land mafia.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X