ರಾಜ್ಯದ 28 ಕ್ಷೇತ್ರದಿಂದಲೂ ಬಿಎಸ್ಪಿ ಅಭ್ಯರ್ಥಿಗಳ ಸ್ಪರ್ಧೆ:ಎನ್. ಮಹೇಶ್

ಮೈಸೂರು, ಮಾರ್ಚ್ 12: ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. ಕನಿಷ್ಠ ಪಕ್ಷ 2 ಕ್ಷೇತ್ರಗಳಲ್ಲಾದರೂ ನಾವು ಜಯಗಳಿಸಬೇಕು. ಕಾರ್ಯಕರ್ತರು ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ಶಾಸಕ ಎನ್.ಮಹೇಶ್ ತಿಳಿಸಿದರು.

ಮೈಸೂರಿನಲ್ಲಿ ನಡೆದ ವಿಭಾಗ ಮಟ್ಟದ ಪದಾಧಿಕಾರಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಸಿ.ಎಸ್.ದ್ವಾರಕಾನಾಥ್ ಅವರು ಬಹುಜನ ಸಮಾಜ ಪಕ್ಷದಿಂದ ಸ್ಪರ್ಧಿಸಲಿದ್ದು, ಆ ಭಾಗದಲ್ಲಿ ಪಕ್ಷದ ವರಿಷ್ಠರಾದ ಮಾಯಾವತಿ ಅವರ ನೇತೃತ್ವದಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು ಎಂದು ತಿಳಿಸಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಹೊರಬೀಳಲಿದ್ದು, ಸರ್ಕಾರ ರಚನೆಯಲ್ಲಿ ಬಿಎಸ್ಪಿ ಪ್ರಧಾನ ಪಾತ್ರ ವಹಿಸಲಿದೆ ಎಂದ ಮಹೇಶ್ ಅವರು, ಕಾರ್ಯಕರ್ತರು ಧೃತಿಗೆಡದೆ ಪ್ರಯತ್ನಿಸಬೇಕು.ಕಳೆದ ಚುನಾವಣೆಯಲ್ಲಿ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳಲಾಗಿತ್ತು. ಈಗ ಕಾಂಗ್ರೆಸ್, ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿವೆ. ಹೀಗಾಗಿ, ಪಕ್ಷಕ್ಕೆ ಶಕ್ತಿ ಪ್ರದರ್ಶಿಸುವ ಹೆಚ್ಚಿನ ಅವಕಾಶ ಸಿಕ್ಕಂತಾಗಿದೆ ಎಂದು ಹೇಳಿದರು.

BSP candidates will be contest in 28 Lok Sabha constituencies:N.Mahesh

ಬಹುಜನ ಸಮಾಜ ಪಕ್ಷ ಕೇವಲ ಒಂದು ರಾಜಕೀಯ ಪಕ್ಷ ಅಲ್ಲ ಎಂಬುದನ್ನು ಅರಿಯಬೇಕು. ಇದೊಂದು ದೊಡ್ಡ ಚಳವಳಿ. ಸಮಾಜಮುಖಿ ಚಳವಳಿ. ಶೋಷಿತರ ಪರವಾದ ಚಳವಳಿ ಎಂದು ಮಹೇಶ್ ವ್ಯಾಖ್ಯಾನಿಸಿದರು.

ಪಕ್ಷದ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಎದುರಾಳಿ ಅಭ್ಯರ್ಥಿಗಳನ್ನು ತುಚ್ಛವಾಗಿ ಪರಿಗಣಿಸಬಾರದು. ಅವರ ವಿರುದ್ಧ ಅವಹೇಳನಕರವಾದ ಪೋಸ್ಟರ್ ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಿಸಬಾರದು ಎಂದು ಮಹೇಶ್ ಅವರು ಕಿವಿಮಾತು ಹೇಳಿದರು.

ಕೃಷ್ಣರಾಜ, ನರಸಿಂಹರಾಜ, ಚಾಮರಾಜ, ಚಾಮುಂಡೇಶ್ವರಿ ಕ್ಷೇತ್ರದ ಪಕ್ಷದ ಪದಾಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+