ಯಡಿಯೂರಪ್ಪ-ಎಚ್ಡಿಕೆ ಪರಸ್ಪರ ಎದುರಾದಾಗ ಏನಾಯಿತು ನೋಡಿ?
Recommended Video

ಮೈಸೂರು, ಆಗಸ್ಟ್ 28: ರಾಜಕೀಯ ಬದ್ಧ ಕಡುವೈರಿಗಳಾದ ಹಾಲಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪರಸ್ಪರ ಎದುರಾಗಿ ಹಸ್ತಲಾಘವ ಮಾಡಿ ಒಂದೇ ವೇದಿಕೆ ಹಂಚಿಕೊಂಡ ಘಟನೆ ಮಂಗಳವಾರ ನಡೆಯಿತು.
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರಸ್ಪರ ನಾಯಕರು ಎದುರುಬದರಾದರು. ಈ ವೇಳೆ ವೇದಿಕೆಯಲ್ಲಿ ಕುಳಿತಿದ್ದ ಮಾಜಿ ಸಿಎಂ ಯಡಿಯೂರಪ್ಪ, ಹಾಲಿ ಸಿಎಂ ಎಚ್ ಡಿ ಕುಮಾರಸ್ವಾಮಿ ಬರುತ್ತಿದ್ದಂತೆ ಅವರನ್ನು ಬರಮಾಡಿಕೊಂಡು ತಮ್ಮ ಪಕ್ಕದಲ್ಲೇ ಕೂರಿಸಿಕೊಂಡ ಘಟನೆಯೂ ನಡೆಯಿತು.
ಪರಸ್ಪರ ಉಭಯ ಕುಶಲೋಪರಿ ವಿಚಾರಸಿಕೊಂಡರು, ಸುಮಾರು ಹೊತ್ತು ನಗುನಗುತ್ತಾ ಮಾತನಾಡಿಕೊಂಡರು. ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.

ಸುತ್ತೂರಿನ ಮೊಲ ಗದ್ದುಗೆಗೆ ಮೊದಲು ವೆಂಕಯ್ಯ ನಾಯ್ಡು ಭೇಟಿ ನೀಡಿ ಪೂಜೆ ಸಲ್ಲಿಸಿದರು, ಬಳಿಕ ಶ್ರೀ ಚನ್ನವೀರ ಗುರುಕುಲದ ಉದ್ಘಾಟನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ತುಮಕೂರಿನ ಸಿದ್ದಗಂಗಾ ಮಠದ ಕಿರಿಯ ಸ್ವಾಮೀಜಿ ಸಿದ್ದಲಿಂಗ ಸ್ವಾಮೀಜಿ, ಸಚಿವರಾದ ಜಿ.ಟಿ.ದೇವೇಗೌಡ, ಪುಟ್ಟರಂಗಶೆಟ್ಟಿ, ಸಿ.ಎಸ್.ಪುಟ್ಟರಾಜು, ಸಾ.ರಾ.ಮಹೇಶ್, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಭಾಗಿಯಾಗಿದ್ದರು.












Click it and Unblock the Notifications