ಅ.21ಕ್ಕೆ ಬೈ ಎಲೆಕ್ಷನ್ ಘೋಷಣೆ; ಮೈತ್ರಿ ಮುರಿದ ಎಚ್ ಡಿಕೆ

Recommended Video

      ಬೈ ಎಲೆಕ್ಷನ್ ಬಗ್ಗೆ ಕುಮಾರಸ್ವಾಮಿ ಹೀಗಂದ್ರು..? | HD Kumaraswamy

      ಮೈಸೂರು, ಸೆಪ್ಟೆಂಬರ್ 21: ರಾಜ್ಯದಲ್ಲಿ 15 ಜಿಲ್ಲೆಗಳಲ್ಲಿ ಅಕ್ಟೋಬರ್ 21ರಂದು ಬೈ ಎಲೆಕ್ಷನ್ ಘೋಷಣೆಯಾದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮೈತ್ರಿ ಮುರಿದಿದ್ದಾರೆ.

      ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಉಪ ಚುನಾವಣೆ ಘೋಷಣೆಯಾಗಿದೆ. ಎಲ್ಲಾ ಕ್ಷೇತ್ರಗಳಿಗೆ ಸ್ವತಂತ್ರವಾಗಿ ಜೆಡಿಎಸ್ ಅಭ್ಯರ್ಥಿಯನ್ನು ನಿಲ್ಲಿಸುವುದಾಗಿ ಘೊಷಣೆ ಮಾಡಿದ್ದಾರೆ.

      By Election On Oct 21 HD Kumaraswamy Broken Coalition

      "ಉಪ ಚುನಾವಣೆ ಫಲಿತಾಂಶದ ಮೇಲೆ ರಾಜ್ಯದ ಮುಂದಿನ ರಾಜಕೀಯ ದಿಕ್ಕು ನಿರ್ಧಾರವಾಗುತ್ತದೆ. ಎಲ್ಲಾ ಕ್ಷೇತ್ರಗಳಿಗೆ ಸ್ವತಂತ್ರವಾಗಿ ಜೆಡಿಎಸ್ ಅಭ್ಯರ್ಥಿ ಹಾಕುತ್ತೇವೆ. ಹುಣಸೂರು ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಗೆಲ್ಲಲೇಬೇಕು. ನನ್ನ ಇಡೀ ಸಮಯವನ್ನು ಹುಣಸೂರು ಚುನಾವಣೆ ಗೆಲ್ಲಲು ನೀಡುತ್ತೇನೆ. ಕಾರ್ಯಕರ್ತರು ಉತ್ಸಾಹದಿಂದ ಹೊರಟರೆ ಯಾರ ಹಣ ಬಲವೂ ನಡೆಯಲ್ಲ. ಕೆಟ್ಟ ಸರ್ಕಾರದಲ್ಲಿ ನನಗೆ ಬೆಂಬಲ ಸರಿ ಇಲ್ಲದಿದ್ದಾಗಲೂ ರೈತರ ಪರ ಕೆಲಸ ಮಾಡಿದ್ದೇನೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಯಾರು ರೈತರ ಪರ ಇದ್ದಾರೆ ಅನ್ನೋದು ಜನ ಗಮನಿಸಲಿ. ಕೊಡಗು ಸ್ವಚ್ಛ ಮಾಡಿ ಅಂದರೆ ಮೈಸೂರನ್ನು ಸ್ವಚ್ಛ ಮಾಡಲು ಜಿಲ್ಲಾ ಉಸ್ತುವಾರಿ ಸಚಿವರು ಓಡಾಡುತ್ತಿದ್ದಾರೆ" ಎಂದರು.

      "ಸಾಲ ಮನ್ನಾ ವಿಚಾರದಲ್ಲಿ ನನಗೆ ದೊಡ್ಡ ಪ್ರಚಾರ ದೊರಕಲಿಲ್ಲ. ಕೆಲಸ ಮಾಡಿದ್ದೇನೆ, ಆದರೆ ಪ್ರಚಾರ ಸಿಗಲೇ ಇಲ್ಲ" ಎಂದು ಎಚ್‍ಡಿಕೆ ಅಸಮಾಧಾನ ಹೊರಹಾಕಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+