ಚಾಮುಂಡಿ ಬೆಟ್ಟದಲ್ಲಿ ವಿಜಯೇಂದ್ರ ವಿಶೇಷ ಪೂಜೆ, ವರುಣಾಕ್ಕೆ ಭೇಟಿ

Recommended Video

      Karnataka Elections 2018 : ಯಡಿಯೂರಪ್ಪ ಮಗ ಬಿ ವೈ ವಿಜಯೇಂದ್ರ ಚಾಮುಂಡಿ ಬೆಟ್ಟಕ್ಕೆ ಭೇಟಿ | Oneindia Kannada

      ಮೈಸೂರು, ಏಪ್ರಿಲ್ 02 : ಮೈಸೂರು ಜಿಲ್ಲೆಯ ಚುನಾವಣಾ ಕಣ ರಂಗೇರುತ್ತಿದೆ. ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಮೈಸೂರಿಗೆ ಭೇಟಿ ನೀಡಿದ್ದಾರೆ. ವರುಣಾ ಕ್ಷೇತ್ರದಿಂದ ಅವರು ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ.

      ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು

      ಸೋಮವಾರ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಅವರು ವರುಣಾ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ಅವರನ್ನು ಸ್ವಾಗತಿಸಲು ಬಿಜೆಪಿ ಕಾರ್ಯಕರ್ತರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

      BY Vijayendra visits Chamundi Hills, Mysuru

      ವರುಣಾ ಕ್ಷೇತ್ರಕ್ಕೆ ಹೋಗುವ ಮೊದಲು ವಿಜಯೇಂದ್ರ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಭಾನುವಾರ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಅವರು ವಿಶೇಷ ಪೂಜೆ ಸಲ್ಲಿಸಿದ್ದರು.

      ಮುಗೂರು ದೇವಾಲಯಕ್ಕೆ ಭೇಟಿ : ಮೂಗೂರು ದೇವಾಲಯಕ್ಕೂ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು. ಟಿ.ನರಸೀಪುರ ತಾಲೂಕಿನ ಮೂಗೂರಿನಲ್ಲಿ ತ್ರಿಪುರ ಸುಂದರಮ್ಮಣ್ಣಿ ದೇವಾಲಯವಿದೆ.
      ಇದೊಂದು ಪುರಾತನ‌ ದೇವಾಲಯವಾಗಿದೆ.

      BY Vijayendra visits Chamundi Hills, Mysuru

      2013ರ ಚುನಾನವಣೆಯಲ್ಲಿ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಜಯಗಳಿಸಿದ್ದರು. ಯಡಿಯೂರಪ್ಪ ಆಪ್ತ ಸಹಾಯಕ ಕಾಪು ಸಿದ್ದಲಿಂಗಸ್ವಾಮಿ ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. 54,744 ಮತಗಳನ್ನು ಪಡೆದಿದ್ದರು.

      ಈ ಬಾರಿಯ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ. ವರುಣಾ ಕ್ಷೇತ್ರದಿಂದ ಡಾ.ಯತೀಂದ್ರ ಅವರು ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+