ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿದ್ದರಾಮಯ್ಯ ವಿರುದ್ಧದ ಮೊಕದ್ದಮೆ ಮೈಸೂರಿಗೆ ವರ್ಗಾವಣೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಫೆಬ್ರವರಿ 23: ಕೊಡವರ ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡಿದ್ದಾರೆಂದು ಆರೋಪಿಸಿ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಮೈಸೂರಿನ ಅಶೋಕಪುರಂ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.

2020ರ ಡಿಸೆಂಬರ್ 18ರಂದು ಅರವಿಂದ ನಗರದ ಕಾಲಭೈರವೇಶ್ವರ ಕಲ್ಯಾಣ ಮಂಟಪದಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಗ್ರಾಮ ಜನಾಧಿಕಾರ ಸಮಾವೇಶದಲ್ಲಿ ಸಿದ್ದರಾಮಯ್ಯ ಅವರು ಪಾಲ್ಗೊಂಡಿದ್ದರು.

ಯೋಗಿ ಎಂದಾದ್ರೂ ದನ ಸಾಕಿದ್ರಾ,ಸೆಗಣಿ ಬಾಚಿದ್ರಾ? ಸಿದ್ದು ಟ್ವೀಟಾಸ್ತ್ರ! ಯೋಗಿ ಎಂದಾದ್ರೂ ದನ ಸಾಕಿದ್ರಾ,ಸೆಗಣಿ ಬಾಚಿದ್ರಾ? ಸಿದ್ದು ಟ್ವೀಟಾಸ್ತ್ರ!

ಸಮಾರಂಭದಲ್ಲಿ ಭಾಷಣ ಮಾಡುವಾಗ ಸಿದ್ದರಾಮಯ್ಯ, "ಕೊಡವರು ಸಹ ದನದ ಮಾಂಸವನ್ನು ತಿನ್ನುತ್ತಾರೆ" ಎಂದು ಹೇಳಿಕೆ ನೀಡಿದ್ದರು. ಇಂತಹ ಹೇಳಿಕೆ ಮೂಲಕ ಅವರು ಕೊಡವ ಜನಾಂಗದ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಗೋ ಹತ್ಯೆ ನಿಷೇಧದಿಂದ ಮೃಗಾಲಯದ ಪ್ರಾಣಿಗಳಿಗೆ ಆಹಾರ ಸಮಸ್ಯೆ ಇಲ್ಲ ಗೋ ಹತ್ಯೆ ನಿಷೇಧದಿಂದ ಮೃಗಾಲಯದ ಪ್ರಾಣಿಗಳಿಗೆ ಆಹಾರ ಸಮಸ್ಯೆ ಇಲ್ಲ

Case Against Siddaramaiah Transferred To Mysuru Ashokapuram Police Station

ಉದ್ದೇಶಪೂರ್ವಕವಾಗಿ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆಂದು ಆರೋಪಿಸಿ ಮಾಜಿ ಜಿಲ್ಲಾ ಪಂಚಾಯತ್‌ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ ಐಪಿಸಿ ಸೆಕ್ಷನ್ 153ರಡಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಗೋ ಹತ್ಯೆ ನಿಷೇಧ ಸುಗ್ರೀವಾಜ್ಞೆ ರಾಜ್ಯಪಾಲರ ಅಂಕಿತಕ್ಕೆ ರವಾನೆಗೋ ಹತ್ಯೆ ನಿಷೇಧ ಸುಗ್ರೀವಾಜ್ಞೆ ರಾಜ್ಯಪಾಲರ ಅಂಕಿತಕ್ಕೆ ರವಾನೆ

ಈ ಘಟನೆಯು ಮೈಸೂರು ನಗರದ ಅಶೋಕಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದರಿಂದ ಪ್ರಕರಣವನ್ನು ವರ್ಗಾವಣೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಮೈಸೂರು ಪೊಲೀಸರು ತನಿಖೆ ಮುಂದುವರೆಸಲಿದ್ದಾರೆ.

English summary
Based on a complaint by Ravi Kushalappa Madikeri rural police have registered an FIR against former CM Siddaramaiah for his statement on Kodavas consuming beef. Now case transferred to Mysuru Ashokapuram police station.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X