ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು ಜಿಲ್ಲಾಧಿಕಾರಿ ಹುದ್ದೆ; ನಾಳೆ ಸಿಎಟಿ ವಿಚಾರಣೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಅಕ್ಟೋಬರ್ 6: ನೂತನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹುದ್ದೆಯಲ್ಲಿ ಮುಂದುವರೆಯುತ್ತಾರೋ ಅಥವಾ ಹಿಂದಿನ ಜಿಲ್ಲಾಧಿಕಾರಿ ಬಿ.ಶರತ್ ಅವರೇ ಮತ್ತೆ ಜಿಲ್ಲಾಧಿಕಾರಿಯಾಗುತ್ತಾರೋ ಎಂಬ ಕುತೂಹಲಕ್ಕೆ ನಾಳೆ ತೆರೆ ಬೀಳಲಿದೆ.

ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ಏಕಾಏಕಿ ತಮ್ಮನ್ನು ವರ್ಗಾವಣೆ ಮಾಡಿದ ಕ್ರಮ ಪ್ರಶ್ನಿಸಿ ನಿರ್ಗಮಿತ ಜಿಲ್ಲಾಧಿಕಾರಿ ಬಿ. ಶರತ್ ಕೇಂದ್ರ ಆಡಳಿತ ನ್ಯಾಯಮಂಡಳಿ (ಸಿಎಟಿ) ಮೆಟ್ಟಿಲೇರಿದ್ದು, ಈ ಸಂಬಂಧ ನಾಳೆ, ಅಕ್ಟೋಬರ್ 7ರಂದು ನಡೆಯಲಿರುವ ಸಿಎಟಿ ವಿಚಾರಣೆ ಮಹತ್ವ ಪಡೆದುಕೊಂಡಿದೆ.

 ಒಂದೇ ತಿಂಗಳಲ್ಲಿ ಶರತ್ ವರ್ಗಾವಣೆ

ಒಂದೇ ತಿಂಗಳಲ್ಲಿ ಶರತ್ ವರ್ಗಾವಣೆ

ಆಗಸ್ಟ್ 29ರಂದು ಬಿ. ಶರತ್ ಅವರನ್ನು ಮೈಸೂರು ಜಿಲ್ಲಾಧಿಕಾರಿ ಹುದ್ದೆಗೆ ನಿಯೋಜಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರ, ಬಳಿಕ ಸೆಪ್ಟೆಂಬರ್ 29ರಂದು ದಸರಾ ಮಹೋತ್ಸವದ ಪೂರ್ವ ಸಿದ್ಧತಾ ಕಾರ್ಯಗಳ ನಡುವೆಯೇ ಏಕಾಏಕಿ ರೋಹಿಣಿ ಸಿಂಧೂರಿ ಅವರನ್ನು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿ ಆದೇಶಿಸಿತ್ತು. ತಿಂಗಳು ಮುಗಿಯುವ ಮುನ್ನವೇ ಸೂಕ್ತ ಕಾರಣ ನೀಡದೆಯೇ ತಮ್ಮನ್ನು ವರ್ಗಾವಣೆ ಮಾಡಿ, ಆ ಜಾಗಕ್ಕೆ ರೋಹಿಣಿ ಸಿಂಧೂರಿ ಅವರನ್ನು ನಿಯೋಜಿಸಿದೆ ಎಂಬುದೇ ಬಿ. ಶರತ್ ಅವರ ದೂರು.

 ಸಿಎಟಿ ಮೊರೆ ಹೋಗಿದ್ದ ಶರತ್

ಸಿಎಟಿ ಮೊರೆ ಹೋಗಿದ್ದ ಶರತ್

ಆಡಳಿತಾತ್ಮಕ ನಿಯಮಗಳ ಪ್ರಕಾರ ಸೂಕ್ತ ಕಾರಣವನ್ನೂ ನೀಡದೆ, ಏಕಾಏಕಿ ವರ್ಗಾವಣೆ ಮಾಡಿರುವ ಸರ್ಕಾರದ ಆದೇಶ ನಿಯಮ ಬಾಹಿರವಾಗಿದೆ. ಹೀಗಾಗಿ ತಮ್ಮನ್ನು ವರ್ಗಾವಣೆ ಮಾಡಿ ಹೊರಡಿಸಿರುವ ಆದೇಶವನ್ನು ರದ್ದುಗೊಳಿಸಬೇಕು ಎಂದು ಬಿ. ಶರತ್ ಸಿಎಟಿಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಪ್ರಕರಣದ ಕುರಿತು ಕಳೆದ ಗುರುವಾರ ಅರ್ಜಿ ವಿಚಾರಣೆ ನಡೆಸಿದ ಸಿಎಟಿ, 30 ದಿನಕ್ಕೆ ಅಧಿಕಾರಿ ಬಿ. ಶರತ್ ಅವರನ್ನು ವರ್ಗಾಯಿಸಿದ್ದೇಕೆ ಎಂದು ಪ್ರಶ್ನಿಸಿರುವುದಲ್ಲದೇ, ಅರ್ಜಿ ಸಂಬಂಧ ಸರ್ಕಾರಕ್ಕೆ ನೋಟೀಸ್ ಜಾರಿ ಮಾಡಿತ್ತು.

 ಅಕ್ಟೋಬರ್ 7ಕ್ಕೆ ವಿಚಾರಣೆ

ಅಕ್ಟೋಬರ್ 7ಕ್ಕೆ ವಿಚಾರಣೆ

ಶರತ್ ಅವರ ವರ್ಗಾವಣೆ ಕುರಿತು ಮುಂದಿನ ವಿಚಾರಣೆಯನ್ನು ಅಕ್ಟೋಬರ್ 7 ಕ್ಕೆ ಮುಂದೂಡಿತ್ತು. ಇದೀಗ ನಾಳೆ ವಿಚಾರಣೆ ನಡೆಯಲಿದೆ. ಈ ಪ್ರಕರಣ ಸಿಎಟಿ ಮೆಟ್ಟಿಲೇರುವುದರಿಂದ ನೂತನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸಂಕಷ್ಟ ಎದುರಾದಂತೆ ಎಂದೇ ಹೇಳಲಾಗುತ್ತಿದೆ. ಈ ಹಿಂದೆ ಹಾಸನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿಯವರನ್ನು 2018ರಲ್ಲಿ ರಾಜ್ಯ ಸರ್ಕಾರ ಬೆಂಗಳೂರಿನ ಉದ್ಯೋಗ ಮತ್ತು ತರಬೇತಿ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿತ್ತು. ಆಗ ಅವಧಿ ಪೂರ್ವ ವರ್ಗಾವಣೆ ಮಾಡಲಾಗಿದೆ ಎಂದು ಆದೇಶ ಪ್ರಶ್ನಿಸಿ ರೋಹಿಣಿ ಸಿಂಧೂರಿ ಕೂಡ ಸಿಎಟಿ ಮೊರೆ ಹೋಗಿದ್ದರು. ಸಿಎಟಿ ಸರ್ಕಾರದ ಆದೇಶ ಎತ್ತಿ ಹಿಡಿದ ಹಿನ್ನೆಲೆಯಲ್ಲಿ ಅವರು ಹೈ ಕೋರ್ಟ್ ಮೆಟ್ಟಿಲೇರಿ ಮರು ನೇಮಕಗೊಂಡಿದ್ದರು.

ಮೈಸೂರು ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ನೇಮಕಮೈಸೂರು ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ನೇಮಕ

 ಕುತೂಹಲ ಮೂಡಿಸಿರುವ ವಿಚಾರಣೆ

ಕುತೂಹಲ ಮೂಡಿಸಿರುವ ವಿಚಾರಣೆ

ಈಗ ಈ ಆದೇಶವನ್ನೇ ಮುಂದಿಟ್ಟುಕೊಂಡು ಬಿ.ಶರತ್ ಸಹ ಸಿಎಟಿ ಮೊರೆ ಹೋಗಿದ್ದಾರೆ. ನೇಮಕಗೊಂಡು ತಿಂಗಳು ಕಳೆದಿಲ್ಲ. ಆಗಲೇ ಕಾರಣವಿಲ್ಲದೆ ಏಕಾಏಕಿ ವರ್ಗವಣೆ ಮಾಡಿರುವುದು ಯಾಕೆ ಎಂಬುದೇ ಶರತ್ ಅವರ ಪ್ರಶ್ನೆ. ಈ ಹಿಂದಿನ ಸಿಎಟಿ ಪ್ರಕರಣಗಳನ್ನು ಗಮನಿಸಿದರೆ ಶರತ್ ಮತ್ತೆ ಮೈಸೂರು ಡಿಸಿಯಾಗಿ ಮರು ನಿಯೋಜನೆಗೊಳ್ಳುತ್ತಾರೆಯೇ ಎಂಬುದೇ ಕುತೂಹಲ ಮೂಡಿಸಿದೆ.

English summary
Former Mysuru dc b sharath went to cAT questioning his transfer without giving any proper reason. The CAT hearing fixed on october 7 got significance
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X