• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ವಿಚಾರಣೆ ಮುಂದೂಡಿದ ಸಿಎಟಿ; ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್

By ಮೈಸೂರು ಪ್ರತಿನಿಧಿ
|

ಮೈಸೂರು, ಅಕ್ಟೋಬರ್ 7: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಶರತ್ ಅವರನ್ನು ವರ್ಗಾವಣೆ ಮಾಡಿರುವ ಕುರಿತಂತೆ ಕೇಂದ್ರ ಆಡಳಿತ ನ್ಯಾಯಮಂಡಳಿ (ಸಿಎಟಿ) ವಿಚಾರಣೆಯನ್ನು ಅಕ್ಟೋಬರ್ 14ಕ್ಕೆ ಮುಂದೂಡಿದೆ.

ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ಏಕಾಏಕಿ ತಮ್ಮನ್ನು ವರ್ಗಾವಣೆ ಮಾಡಿದ ಕ್ರಮ ಪ್ರಶ್ನಿಸಿ ನಿರ್ಗಮಿತ ಜಿಲ್ಲಾಧಿಕಾರಿ ಬಿ. ಶರತ್ ಕೇಂದ್ರ ಆಡಳಿತ ನ್ಯಾಯಮಂಡಳಿ (ಸಿಎಟಿ) ಮೆಟ್ಟಿಲೇರಿದ್ದರು. ಕೇವಲ 30 ದಿನಕ್ಕೆ ತಮ್ಮನ್ನು ವರ್ಗಾವಣೆ ಮಾಡಿ, ತಮ್ಮ ಸ್ಥಾನಕ್ಕೆ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಿರುವ ಸರ್ಕಾರದ ತೀರ್ಮಾನವನ್ನು ಪ್ರಶ್ನಿಸಿ ಶರತ್ ಸಿಎಟಿಗೆ ಅರ್ಜಿ ಹಾಕಿದ್ದರು.

ಮೈಸೂರು ಜಿಲ್ಲಾಧಿಕಾರಿ ಹುದ್ದೆ; ನಾಳೆ ಸಿಎಟಿ ವಿಚಾರಣೆ

ಕಳೆದ ಗುರುವಾರ ಅರ್ಜಿ ಸ್ವೀಕರಿಸಿದ್ದ ಸಿಎಟಿ, 30 ದಿನಕ್ಕೆ ಅಧಿಕಾರಿ ಬಿ. ಶರತ್ ಅವರನ್ನು ವರ್ಗಾಯಿಸಿದ್ದೇಕೆ ಎಂದು ಪ್ರಶ್ನಿಸಿ, ಅರ್ಜಿ ಸಂಬಂಧ ಸರ್ಕಾರಕ್ಕೆ ನೋಟೀಸ್ ಜಾರಿ ಮಾಡಿತ್ತು. ಜೊತೆಗೆ ವಿಚಾರಣೆಯನ್ನು ಅ. 7ಕ್ಕೆ ನಿಗದಿಪಡಿಸಿತ್ತು. ಇದೀಗ ವಿಚಾರಣೆಯನ್ನು ಅಕ್ಟೋಬರ್ 14ನೇ ತಾರೀಕಿಗೆ ಮುಂದೂಡಲಾಗಿದೆ. ಇದರಿಂದ ಡಿಸಿ ರೋಹಿಣಿ ಸಿಂಧೂರಿ ಅವರಿಗೆ ತಾತ್ಕಾಲಿಕ ರಿಲೀಫ್ ದೊರಕಿದಂತಾಗಿದೆ.

English summary
The CAT has postponed the hearing of B Sharath transfer issue to october 14, This has became temporary relief to Mysuru DC Rohini Sindhuri,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X