ಕಾವೇರಿ ವಿವಾದ: ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಲಿ ಎಂದ ಸಿಎಂ ಸಿದ್ದರಾಮಯ್ಯ

ಮೈಸೂರು, ಸೆಪ್ಟೆಂಬರ್‌, 26: ಕಾವೇರಿ ಜಲ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ರಾಜ್ಯ ಸರ್ಕಾರ ಸಿದ್ಧವಿದೆ. ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.

ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿವಾದವನ್ನು ಕೋರ್ಟ್‌ನ ಹೊರಗೂ ತೀರ್ಮಾನ ಮಾಡಿಕೊಳ್ಳಲು ಅವಕಾಶ ಇದೆ. ಇದನ್ನೇ ನಾವು ಅನೇಕ ಬಾರಿ ಕೇಳಿದ್ದೇವೆ. ನಾನು ಪ್ರಧಾನಿ ಅವರಿಗೆ ಪತ್ರ ಬರೆದಿದ್ದೇನೆ. ದೇವೇಗೌಡರೂ ಪತ್ರ ಬರೆದಿದ್ದಾರೆ. ಈಗ ಬಿಜೆಪಿ- ಜೆಡಿಎಸ್ ಮೈತ್ರಿ ಆಗಿದೆ. ಈ ಕಾರಣಕ್ಕಾದರೂ ದೇವೇಗೌಡರ ಮಾತು ಕೇಳುತ್ತಾರೆ ಎಂದು ನೋಡೋಣ ಎಂದರು.

cauvery-dispute

ಕಾವೇರಿ ವಿಚಾರದಲ್ಲಿ ಪ್ರಧಾನಿಯವರು ಮಧ್ಯಸ್ಥಿಕೆ ವಹಿಸಬೇಕು. ಕೇಂದ್ರದಿಂದ ತಜ್ಞರ ತಂಡ ಬರಬೇಕು. ಇದನ್ನು ನಾನು ಎರಡು ಬಾರಿ ಕೇಂದ್ರಕ್ಕೆ ಕೇಳಿದ್ದೇನೆ. ಈಗಲಾದರೂ ಕೇಂದ್ರದಿಂದ ತಂಡ ಬರಲಿ. ಯಾಕೆ ಕೇಂದ್ರದ ತಂಡ ಬರುತ್ತಿಲ್ಲ ಅಂತಾ ಬಿಜೆಪಿಯವರು ಹೇಳಲಿ? ಬಿಜೆಪಿಯವರ ಹಾದಿಬೀದಿಯಲ್ಲಿ ಹೋರಾಟ ಮಾಡುವ ಬದಲು ಕೇಂದ್ರದಿಂದ ತಜ್ಞರ ತಂಡ ಕರೆಸಲಿ. ಕೋರ್ಟ್ ಮಧ್ಯಸ್ಥಿಕೆ ಇಲ್ಲದೆ ಎರಡು ರಾಜ್ಯ ಕೂತು ಮಾತುಕತೆಗೆ ಈಗಲೂ ನಾವೂ ಸಿದ್ಧವಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಕಾವೇರಿ ನೀರಿನ ವಿಚಾರದಲ್ಲಿ ದೇವೇಗೌಡರು ಪತ್ರ ಬರೆದಿರುವುದನ್ನು ನಾವು ಸ್ವಾಗತಿಸುತ್ತೇವೆ. ಈಗ ಅವರದು ಬಿಜೆಪಿ ಜೊತೆಗೆ ಹೊಸ ಪ್ರೇಮ. ಅವರು ಸಮಸ್ಯೆ ಬಗೆಹರಿಸುವ ಕಾರ್ಯ ಮಾಡಲಿ. ಆದರೆ, ಸರ್ಕಾರ ಸರಿಯಾದ ನಿರ್ಧಾರ ಕೈಗೊಳ್ಳಲಿಲ್ಲ ಎಂಬುದನ್ನು ಪತ್ರದಲ್ಲಿ ಉಲ್ಲೇಖಿಸಿರುವುದನ್ನು ನಾವು ಒಪ್ಪುವುದಿಲ್ಲ. ಸರ್ಕಾರ ಎಲ್ಲಾ ಹಂತದಲ್ಲೂ ನಾಡಿನ ಜನರ ರಕ್ಷಣೆಗೆ ಬದ್ಧವಾಗಿಯೇ ಇದೆ. ಕಾನೂನು ತಜ್ಞರು ಸರಿಯಾಗಿ ವಾದ ಮಾಡಿಲ್ಲ ಎಂಬ ಆರೋಪ ಸುಳ್ಳು ಎಂದರು.

cauvery-dispute

ಹಿಂದಿನ ಎಲ್ಲಾ ಸರ್ಕಾರಗಳು ಇದ್ದಾಗಲೂ ಇದ್ದ ಲೀಗಲ್ ಟೀಮ್ ಈಗಲೂ ಇರೋದು. ಅವರೇ ವಾದ ಮಾಡಿದ್ದಾರೆ. ಕಾನೂನು ತಜ್ಞರಲ್ಲಿ ಯಾವ ಬದಲಾವಣೆ ಆಗಿಲ್ಲ. ಹೀಗಾಗಿ ಸಮರ್ಥ ವಾದ ಮಂಡಿಸಿಲ್ಲ ಎಂಬುದರಲ್ಲಿ ಅರ್ಥವಿಲ್ಲ ಎಂದರು.

ಪ್ರತಿಭಟನೆನಿಂದ ಇನ್ನೊಬ್ಬರಿಗೆ ತೊಂದರೆ ಆಗಬಾರದು

ಬೆಂಗಳೂರು ಬಂದ್ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಪ್ರತಿಭಟನೆ ಮಾಡುವುದಕ್ಕೆ ನಮ್ಮ ವಿರೋಧವಿಲ್ಲ. ಪ್ರತಿಭಟನೆನಿಂದ ಇನ್ನೊಬ್ಬರಿಗೆ ತೊಂದರೆ ಆಗಬಾರದು. ಪ್ರತಿಭಟನೆ ಹೇಗೆ ಸಂವಿಧಾನತ್ಮಕ ಹಕ್ಕೋ, ಹಾಗೆಯೇ ಸಾಮಾನ್ಯ ಜನರಿಗೂ ಹಕ್ಕು ಇರುತ್ತದೆ. ಹಾಗಾಗಿ ಅವರ ಹಕ್ಕಿಗೆ ಧಕ್ಕೆ ತರಬೇಡಿ. ಜನರಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕಾಗಿ 144ನೇ ಸೆಕ್ಷನ್ ಜಾರಿ ಮಾಡಿದ್ದೇವೆ. ಜನರ ಹಕ್ಕನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ. ಅದೇ ಕೆಲಸವನ್ನು ನಾವು ಮಾಡಿದ್ದೇವೆ ಎಂದರು.

cauvery-dispute

ಚಡ್ಡಿ ಚಳವಳಿ ಮಾಡಲಿ

ರಾಜ್ಯ ಕಾಂಗ್ರೆಸ್ ಡಿಎಂಕೆಯ ಬಿ ಟೀಮ್ ಎಂಬ ಎಚ್.ಡಿ.ಕುಮಾರಸ್ವಾಮಿ ಆರೋಪದ ಬಗ್ಗೆ ಮಾತನಾಡಿದ ಸಿಎಂ, ಎಐಡಿಎಂಕೆ ಬಿಜೆಪಿ ಜೊತೆ ಇತ್ತಲ್ಲ ಆಗ ಅದು ಯಾವ ಟೀಮ್? ಸುಮ್ಮನೆ ರಾಜಕೀಯ ಕಾರಣಕ್ಕೆ ಏನೇನೋ ಹೇಳಿಕೆ ಕೊಡಬಾರದು. ಸುಮ್ಮನೆ ಬಿ ಟೀಮ್, ಎ ಟೀಮ್ ಅನ್ನಬಾರದು ಎಂದು ಕುಮಾರಸ್ವಾಮಿ ವಿರುದ್ಧ ಹರಿಹಾಯ್ದರು.

ಅಲ್ಲದೆ, ಬಿಜೆಪಿಯಿಂದ ಚಡ್ಡಿ ಚಳುವಳಿ ವಿಚಾರದ ಬಗ್ಗೆಯೂ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರನ್ನು ನಾವು ಮೊದಲಿನಿಂದಲೂ ಚಡ್ಡಿಗಳು ಎಂದೇ ಕರೆಯುತ್ತಿದ್ದೇವೆ. ಈಗ ಚಡ್ಡಿ ಚಳುವಳಿ ಮಾಡುತ್ತಿದ್ದಾರೆ. ಮಾಡಲಿ ಬಿಡಿ ಎಂದು ಲೇವಡಿ ಮಾಡಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+