ಇದೊಂದು ಚುನಾವಣಾ ಪೂರ್ವ ಬಜೆಟ್: ಸಚಿವ ಜಿಟಿ ದೇವೇಗೌಡ

ಮೈಸೂರು, ಫೆಬ್ರವರಿ 1: ಮುಂದಿನ 2019ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಅವರು ಬಜೆಟ್ ರೂಪಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಕೇಂದ್ರದ ಬಜೆಟ್ ಕುರಿತು ಮಾತನಾಡಿದ ಅವರು, ಈ ಬಜೆಟ್ ನಲ್ಲಿ ಎಲ್ಲಾ ವರ್ಗವನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಿದ್ದಾರೆ. ಆದರೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ಮಾಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕಳೆದ ಲೋಕಸಭಾ ಚುನಾವಣೆಯ ವೇಳೆ ಎಲ್ಲರ ಖಾತೆಗೆ 15 ಲಕ್ಷ ರೂ. ಹಾಕುತ್ತೇನೆ ಎಂದಿದ್ದರು. ಹಾಕಿಲ್ಲ. ಬೇರೆ ದೇಶದಲ್ಲಿರುವ ಕೋಟಿಗಟ್ಟಲೆ ಕಪ್ಪು ಹಣ ತರುತ್ತೇನೆ ಎಂದಿದ್ದರು.ತಂದಿಲ್ಲ. ಒಂದು ವರ್ಷದಲ್ಲಿ 2 ಕೋಟಿ ಉದ್ಯೋಗ ಕೊಡುತ್ತೇವೆ ಎಂದರು. ಅದು ಕೊಟ್ಟಿಲ್ಲ. ಇದರ ಹೊರತಾಗಿ ರೈತರ ಖಾತೆಗೆ 6 ಸಾವಿರ ನೇರವಾಗಿ ಜಮಾ ಆಗುವಂತೆ ಮಾಡುತ್ತೇವೆ ಎಂದಿದ್ದಾರೆ.

Central budget is only an election pre-budget: GT Deve Gowda

ಅಲ್ಲದೇ ಆದಾಯ ಮಿತಿಯನ್ನು 2.5 ರಿಂದ 5 ಲಕ್ಷಕ್ಕೆ ಏರಿಸಿದ್ದಾರೆ. ಕಾರ್ಮಿಕರಿಗೆ ಪಿಂಚಣಿಯನ್ನು 10 ಲಕ್ಷದಿಂದ 30 ಲಕ್ಷಕ್ಕೆ ಏರಿಸಿದ್ದಾರೆ. ಇವೆಲ್ಲ ಸ್ವಾಗತಾರ್ಹ ಮೆಚ್ಚುವಂಥದ್ದೇ. ಆದರೆ ಇವೆಲ್ಲ ಜಾರಿಗೆ ಬರುತ್ತೇವೆ ಎಂಬ ವಿಶ್ವಾಸ ನಮಗಿಲ್ಲ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+